ಡಾ.ರಾಜ್ ಸಮಾಧಿ ಪಕ್ಕದಲ್ಲಿಯೇ ಪತ್ನಿ ಪಾರ್ವತಮ್ಮ ಅಂತ್ಯಕ್ರಿಯೆ
ಕನ್ನಡ ಚಿತ್ರರಂಗದಲ್ಲಿ 'ಅಮ್ಮ' ಎಂದೇ ಖ್ಯಾತರಾಗಿರುವ ಡಾ.ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಬ್ರೆಸ್ಟ್ ಕ್ಯಾನ್ಸರ್ ಹಾಗೂ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.[ಆರಿದ 'ದೊಡ್ಮನೆ' ದೀಪ: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ]
ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇರುವ ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲಿಯೇ, ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನಡೆಸಲು ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ.[ಪತಿಯ ಹಾದಿಯಲ್ಲಿ ಪತ್ನಿ: ಅಂಧರ ಬಾಳಲ್ಲಿ ಹೊಸಬೆಳಕು ಮೂಡಿಸಲಿರುವ 'ದೊಡ್ಮನೆ' ಅಮ್ಮ]

ಗಾಜನೂರು ಅಥವಾ ಬಿಡದಿ ಬಳಿ ಇರುವ ಪುನೀತ್ ರಾಜ್ ಕುಮಾರ್ ರವರ ರೆಸಾರ್ಟ್ ನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನಡೆಸುವ ಕುರಿತು ಮಾತುಗಳು ಕೇಳಿಬಂದ್ದವು.

ಆದ್ರೆ, 'ಪರಮೇಶ್ವರ' ಇರುವ ಕಡೆಯೇ 'ಪಾರ್ವತಿ' ಇರಬೇಕು ಎಂಬ ಅಭಿಪ್ರಾಯ ಅಣ್ಣಾವ್ರ ಮಕ್ಕಳಿಂದ ವ್ಯಕ್ತವಾದ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿಯೇ 'ಅಮ್ಮ'ನ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.[ಪಾರ್ವತಮ್ಮ ರಾಜ್ ಕುಮಾರ್ ನಿಧನ: ಸದಾಶಿವನಗರದ ನಿವಾಸದಲ್ಲಿ ಅಂತಿಮ ದರ್ಶನ]

ಸಂಜೆ ಸುಮಾರು ಆರು ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


Click it and Unblock the Notifications











