ಪಾವರ್ತಮ್ಮ ರಾಜ್‌ಕುಮಾರ್ ಸೋದರಳಿಯ ಸೂರಜ್‌ಗೆ ಗಂಭೀರ ಅಪಘಾತ: ಬಲಗಾಲು ನಜ್ಜುಗುಜ್ಜು
ಚಂದನವನದ ದೊಡ್ಮನೆಗೆ ಶಾಕಿಂಗ್ ನ್ಯೂಸ್ ಬಂದಿದೆ. ಪಾರ್ವತಮ್ಮ ರಾಜ್‌ಮಾರ್ ಸಹೋದರನ ಪುತ್ರ, ನಟ ಸೂರಜ್ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಶನಿವಾರ (ಜೂನ್ 24) ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಸೂರಜ್ ಬಲಗಾಲು ಕಳೆದುಕೊಂಡಿರುವುದಾಗಿ ವರದಿಯಾಗಿದೆ.
'ಭಗವಾನ್ ಶ್ರೀ ಕೃಷ್ಣ ಪರಮಾತ್ಮ' ಸಿನಿಮಾ ಮೂಲಕ ಸೂರಜ್ ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದರು. ಸೂರಜ್ ನಿನ್ನೆ ಸಂಜೆ ಬೈಕ್‌ನಲ್ಲಿ ಊಟಿಗೆ ತೆರಳುತ್ತಿದ್ದರು. ಈ ವೇಳೆ ಬೇಗೂರಿನಿಂದ ಹಿರಿಕಾಟಿ ಗೇಟ್ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಮೈಸೂರು ಕಡೆಯಿಂದ ಬರುತ್ತಿದ್ದ ಸೂರಜ್ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ಸೂರಜ್ ಕಾಲಿನ ಮೇಲೆ ಹರಿದಿದ್ದು ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಿರುವುದಾಗಿ ಹೇಳಲಾಗುತ್ತಿದೆ.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ನಟ ಶಿವರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿ ಸೂರಜ್ ಆರೋಗ್ಯ ವಿಚಾರಿಸಿದ್ದಾರೆ. ಸೂರಜ್ ನಟನೆಯ 'ಭಗವಾನ್ ಶ್ರೀ ಕೃಷ್ಣ ಪರಮಾತ್ಮ' ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಧ್ರುವನ್ ಎಂದು ಹೆಸರು ಬದಲಿಸಿಕೊಂಡು ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಸದ್ಯ ಮೈಸೂರಿನ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಸೂರಜ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೂರಜ್ ಪಾರ್ವತಮ್ಮ ಸಹೋದರ, ನಿರ್ಮಾಪಕ ಎಸ್. ಎ ಶ್ರೀನಿವಾಸ್ ಪುತ್ರ. ಮೈಸೂರಿನಲ್ಲಿ ಡಿಗ್ರಿ ಮುಗಿಸಿ ಸೂರಜ್ ಚಿತ್ರರಂಗಕ್ಕೆ ಬರುವ ತಯಾರಿ ಮಾಡಿಕೊಂಡಿದ್ದಾರೆ. ನೀನಾಸಂನಲ್ಲಿ ಅಭಿನಯದ ತರಬೇತಿ ಪಡೆದುಕೊಂಡಿದ್ದು ಚೆನ್ನೈನಲ್ಲಿ ಡ್ಯಾನ್ಸ್ ಮತ್ತು ಫೈಟಿಂಗ್ ಟ್ರೈನಿಂಗ್ ಪಡೆದುಕೊಂಡಿದ್ದಾರೆ.


Click it and Unblock the Notifications











