Alexa Teaser: ಪವನ್ - ಅದಿತಿ ಜೋಡಿಯ ಮರ್ಡರ್ ಮಿಸ್ಟರಿ 'ಅಲೆಕ್ಸಾ' ಟೀಸರ್ ರಿಲೀಸ್
ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟನೆಯ 'ಅಲೆಕ್ಸಾ' ಚಿತ್ರದ ಟೀಸರ್ ಬಿಡುಗಡೆ ಆಗಿ ಸದ್ದು ಮಾಡ್ತಿದೆ. ಜೀವ ಕಥೆ, ಚಿತ್ರಕತೆ ಬರೆದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್‌ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
ನನಗೆ ನಿಜಜೀವನದಲ್ಲಿ ಪೊಲೀಸ್ ಆಫಿಸರ್ ಆಗಬೇಕು ಎನ್ನುವ ಕನಸ್ಸಿತ್ತು. ಅದು ಆಗಲಿಲ್ಲ. ನಿರ್ದೇಶಕರು ನೀವು ಈ ಚಿತ್ರದಲ್ಲಿ ಇನ್ವೆಸ್ಟಿಕೇಶನ್ ಆಫೀಸರ್ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುವ ಕನಸ್ಸಿತ್ತು. ಅದು ಈ ಚಿತ್ರದಲ್ಲಿ ನನಸ್ಸಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ನಾನು ಅಭಿನಯಿಸಿರುವ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ ಎಂದು ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ.

ಮದುವೆಗೂ ಮುನ್ನ ಅದಿತಿ ಏಳೆಂಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಆ ಸಿನಿಮಾಗಳು ಒಂದೊಂದಾಗಿ ರಿಲೀಸ್‌ಗೆ ರೆಡಿಯಾಗ್ತಿದೆ. 'ತೋತಾಪುರಿ-2' ಕೂಡ ಶೀಘ್ರದಲ್ಲೇ ತೆರೆಗೆ ಬರಲಿದೆ. ಇನ್ನುಳಿದಂತೆ 'ದಿಲ್ಮಾರ್', '5D' ಸಿನಿಮಾಗಳ ಚಿತ್ರೀಕರಣ ಮುಗಿದಿದೆ. 'ಅಂದೊಂದಿತ್ತು ಕಾಲ', 'ಮಾಫಿಯಾ', 'ಮ್ಯಾಟ್ನಿ', 'ಛೂ ಮಂತರ್' ಸಿನಿಮಾಗಳ ಚಿತ್ರೀಕರಣ ನಡೀತಿದೆ. ಇದೆಲ್ಲದರ ನಡುವೆ 'ಅಲೆಕ್ಸಾ' ರಿಲೀಸ್‌ರೆ ರೆಡಿಯಾಗಿದೆ.
'ಅಲೆಕ್ಸಾ' ಚಿತ್ರದ ನಿರ್ದೇಶಕ ಜೀವ ಮಾತನಾಡಿ ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ಆಫೀಸರ್ ಆಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸೆಟಿಕಲ್ ಮಾಫಿಯಾ ಬಗ್ಗೆ ಕೂಡ ಕ್ಲೈಮ್ಯಾಕ್ಸ್‌ನಲ್ಲಿ ತೋರಿಸಿದ್ದೇವೆ. ಈ ಚಿತ್ರದ 2ನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ. ಮೈಸೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ. ಅಕ್ಟೋಬರ್ ಕೊನೆ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಬರಲಿದೆ ಎಂದಿದ್ದಾರೆ.
ನಟ ಪವನ್ ತೇಜ್ ಮಾತನಾಡಿ ಚಿತ್ರದಲ್ಲಿ ಗಂಡ - ಹೆಂಡತಿ ಕೊಲೆ ಆಗಿರುತ್ತದೆ. ಆ ಕೊಲೆಯ ತನಿಖೆಯ ಸುತ್ತ ಕಥೆ ಸಾಗುತ್ತದೆ ಎಂದು ಮಾತನಾಡಿದ ನಾಯಕ ಪವನ್ ತೇಜ್ ಅದಿತಿ ಪ್ರಭುದೇವ ಅವರ ಜೊತೆ ನಟಿಸುವ ಹಂಬಲವಿತ್ತು. ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಅಭಿಪ್ರಾಯ ಹಂಚಿಕೊಂಡರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ವಿ.ಚಂದ್ರು. ಚಿತ್ರದ ಬಹುತೇಕ ಕಲಾವಿದರು , ತಂತ್ರಜ್ಞರು ಹಾಗೂ ವಿತರಕರು 'ಅಲೆಕ್ಸಾ' ಚಿತ್ರದ ಕುರಿತು ಮಾತನಾಡಿದರು.
ಅಂದಹಾಗೆ ಪವನ್ ತೇಜ್, ಅದಿತಿ ಪ್ರಭುದೇವ, ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಮುಂತಾದವರು 'ಅಲೆಕ್ಸಾ' ಚಿತ್ರದ ಚಿತ್ರದ ತಾರಾಬಳಗದಲ್ಲಿದ್ದಾರೆ.
A P O ಸಂಗೀತ ನಿರ್ದೇಶನದಲ್ಲಿ ಮೂರು ಹಾಡುಗಳು ಕಂಪೋಸ್ ಆಗಿದೆ. ಸತೀಶ್ ಬಿ ಛಾಯಾಗ್ರಹಣ ಹಾಗೂ ಉಮೇಶ್ .ಆರ್. ಬಿ ಸಂಕಲನ ಈ ಚಿತ್ರಕ್ಕಿದ್ದು ಚಿತ್ರತಂಡ ಬಹಳ ಭರವಸೆಯಿಂದ ಇದೆ. ನವೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರಲಿದೆ.


Click it and Unblock the Notifications











