For Quick Alerts
  ALLOW NOTIFICATIONS  
  For Daily Alerts

  'ಡೊಳ್ಳು' ಸಿನಿಮಾ ನೋಡುವಂತೆ ರಾಜ್ಯಪಾಲರಿಗೆ ಪವನ್ ಒಡೆಯರ್ ಆಹ್ವಾನ!

  |

  68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಗೆದ್ದ ಅಪ್ಪಟ ಕನ್ನಡ ಸೊಗಡಿನ ಸಿನಿಮಾ 'ಡೊಳ್ಳು'. ಪವನ್ ಒಡೆಯರ್ ಹಾಗೂ ಪತ್ನಿ ಅಪೇಕ್ಷಾ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬಳಿಕ 'ಡೊಳ್ಳು' ಸಿನಿಮಾ ಥಿಯೇಟರ್‌ಗೆ ಲಗ್ಗೆ ಇಡುತ್ತಿದೆ.

  'ಡೊಳ್ಳು' ಸಿನಿಮಾವನ್ನು ಥಿಯೇಟರ್‌ಗೆ ಬಿಡಲು ನಿರ್ಮಾಪಕ ಪವನ್ ಒಡೆಯರ್ ಮುಂದಾಗಿದ್ದಾರೆ. ರಾಷ್ಟ್ರ ಪ್ರಶಸ್ತಿ ಪಡೆದ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್ ಆಗುವುದಿಲ್ಲ ಎಂಬ ಆರೋಪವಿದೆ. ಈ ಬೆನ್ನಲ್ಲೇ ರಾಷ್ಟ್ರಪ್ರಶಸ್ತಿ ಪಡೆದ ಚಿತ್ರವನ್ನು ರಿಲೀಸ್ ಮಾಡಲು ಪವನ್ ಹಾಗೂ ಪತ್ನಿ ನಿರ್ಧರಿಸಿದ್ದಾರೆ. ಈ ಸಂಬಂಧ ಸಿನಿಮಾವನ್ನು ವೀಕ್ಷಿಸುವಂತೆ ರಾಜ್ಯಪಾಲರಿಗೆ ಆಹ್ವಾನ ನೀಡಿಲಾಗಿದೆ.

  'ಡೊಳ್ಳು' ಸಿನಿಮಾ ವೀಕ್ಷಿಸಲು ರಾಜ್ಯಪಾಲರಿಗೆ ಆಹ್ವಾನ

  68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗೆದ್ದಿರೋ 'ಡೊಳ್ಳು' ಕಮರ್ಷಿಯಲ್ ಸಿನಿಮಾಗಳ ನಡುವೆ ಥಿಯೇಟರ್‌ಗೆ ಎಂಟ್ರಿ ಕೊಡುತ್ತಿದೆ. ಕರ್ನಾಟಕದ ಜಾನಪದ ಕಲೆಗಳಲ್ಲಿ ಒಂದಾದನ್ನು ಸಿನಿಮಾ ಮಾಡಿದ್ದು, ಹಲವು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಗೆದ್ದು ಬಂದಿದೆ.

  ಇಂತಹ ವಿಭಿನ್ನ ಕಂಟೆಂಟ್ ಸಿನಿಮಾವನ್ನು ನೋಡುವಂತೆ ನಿರ್ಮಾಪಕ ಪವನ್ ಒಡೆಯರ್ ಹಾಗೂ ನಿರ್ದೇಶಕ ಸಾಗರ್ ಪುರಾಣಿಕ್ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ರ ಗೆಹ್ಲೋಟ್ ಅವರಿಗೆ ಆಹ್ವಾನ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ಗೆದ್ದ 'ಡೊಳ್ಳು' ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯಪಾಲರು ಸಿನಿಮಾ ನೋಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

  ಕಾರ್ತಿಕ್-ನಿಧಿ ಪ್ರಮುಖ ಪಾತ್ರ

  ಒಡೆಯರ್ ಮೂವೀಸ್ ಬ್ಯಾನರ್ ನಡಿ ಚೊಚ್ಚಲ ಬಾರಿಗೆ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಜೊತೆಗೂಡಿ ಡೊಳ್ಳು ಸಿನಿಮಾ ಮಾಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಸಾರಥ್ಯದಲ್ಲಿ ಚಿತ್ರ ತಯಾರಾಗಿದೆ. ಕಿರುತೆರೆ ಕಲಾವಿದ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗಡೆ ನಾಯಕಿಯಾಗಿ ಅಭಿನಯಿಸಿದ್ದಾರೆ.

  Pawan Wadeyar Invited Governor Thawar Chand Gehlot For Dollu Movie Screening

  Recommended Video

  Jothejotheyali | ಅನಿರುದ್ಧ್‌ ಜಾಗಕ್ಕೆ ರೀಪ್ಲೇಸ್‌ ಆಗುವವರು ಯಾರು? | Anirudh | Vijay Raghavendra,Harish Raj

  ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಮುಂತಾದ ಮುಂತಾದ ಕಲಾವಿದರು ಚಿತ್ರದಲ್ಲಿದ್ದಾರೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತವಿದ್ದು, ಅಭಿಲಾಷ್ ಕಲಾಥಿ ಕ್ಯಾಮೆರಾ ಕೈಚಳಕ ಸಿನಿಮಾಕ್ಕಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಟ್ರೈಲರ್ ಹಾಗೂ ಮಾಯಾನಗರಿ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.

  English summary
  Pawan Wadeyar Invited Governor Thawar Chand Gehlot For Dollu Movie Screening, Know More.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X