For Quick Alerts
  ALLOW NOTIFICATIONS  
  For Daily Alerts

  ಬುಸಾನ್ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊದಲ ಕನ್ನಡ ಸಿನಿಮಾ 'ಪೆಡ್ರೋ'

  |

  ದಕ್ಷಿಣ ಕೊರಿಯಾದ ಪ್ರಖ್ಯಾತ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಪೆಡ್ರೋ' ಸಿನಿಮಾ ಆಯ್ಕೆಯಾಗಿದೆ. ಈ ಮೂಲಕ BIFF (Busan International Film Festival) ಗೆ ಆಯ್ಕೆಯಾದ ಮೊಟ್ಟ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

  ನಟೇಶ್ ಹೆಗಡೆ ಈ ಚಿತ್ರ ನಿರ್ದೇಶನ ಮಾಡಿದ್ದು, ನಟ-ನಿರ್ದೇಶಕ ರಿಷಬ್ ಶೆಟ್ಟಿ ಬಂಡವಾಳ ಹಾಕಿ ನಿರ್ಮಾಣ ಮಾಡಿದ್ದಾರೆ. ಪೆಡ್ರೋ ಸಿನಿಮಾ ಬುಸಾನ್ ಚಿತ್ರೋತ್ಸವಕ್ಕೆ ಆಯ್ಕೆಯಾದ ಸಂತಸವನ್ನು ರಿಷಬ್ ಶೆಟ್ಟಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

  ಶಿವಣ್ಣ ಭೇಟಿ ಮಾಡಿದ ರಿಷಬ್ ಶೆಟ್ಟಿ: 126ನೇ ಸಿನಿಮಾ ಅಧಿಕೃತಶಿವಣ್ಣ ಭೇಟಿ ಮಾಡಿದ ರಿಷಬ್ ಶೆಟ್ಟಿ: 126ನೇ ಸಿನಿಮಾ ಅಧಿಕೃತ

  ''ನಟೇಶ್ ಹೆಗಡೆ ಅವರ ಚೊಚ್ಚಲ ನಿರ್ದೇಶನ ರಿಷಬ್ ಶೆಟ್ಟಿ ಫಿಲಂಸ್ ನಿರ್ಮಾಣದಲ್ಲಿ ತಯಾರಾದ #Pedro ಸಿನೆಮಾ ಇದೀಗ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಪ್ರಥಮ ಕನ್ನಡ ಚಿತ್ರ ಇದಾಗಿದ್ದು 'new current section'ನಲ್ಲಿ World primier ಆಗಲಿದೆ'' ಎಂದು ರಿಷಬ್ ಶೆಟ್ಟಿ ಪೋಸ್ಟ್ ಹಾಕಿದ್ದಾರೆ.

  2019ರಲ್ಲಿ 'ಪೆಡ್ರೋ' ಸಿನಿಮಾ ಎನ್‌ಎಫ್‌ಡಿಸಿ ಫಿಲ್ಮ್ ಬಜಾರ್‌ನ ವರ್ಕ್‌ ಇನ್ ಪ್ರೊಗ್ರೆಸ್ ಲ್ಯಾಬ್‌ಗೆ ಆಯ್ಕೆಯಾಗಿತ್ತು. ಈ ವಿಭಾಗದಲ್ಲಿ ಪ್ರಶಸ್ತಿ ಸಹ ಪಡೆದುಕೊಂಡಿದೆ.

  ಕಾಂತಾರ: ರಿಷಬ್ ಶೆಟ್ಟಿಗೆ ಜೋಡಿಯಾದ 'ಪಾಪ್ ಕಾರ್ನ್ ಮಂಕಿ ಟೈಗರ್' ನಾಯಕಿಕಾಂತಾರ: ರಿಷಬ್ ಶೆಟ್ಟಿಗೆ ಜೋಡಿಯಾದ 'ಪಾಪ್ ಕಾರ್ನ್ ಮಂಕಿ ಟೈಗರ್' ನಾಯಕಿ

  ಮಧ್ಯವಯಸ್ಕ ಎಲೆಕ್ಟ್ರಿಷಿಯನ್ ತನ್ನ ತಾಯಿ ಮತ್ತು ಸಹೋದರನ ಜೊತೆ ದೂರದ ಹಳ್ಳಿಯಲ್ಲಿ ವಾಸಿಸುತ್ತಿದ್ದು, ಆಕಸ್ಮಿಕವಾಗಿ ಅವಮಾನಕರ ಕೃತ್ಯವನ್ನು ಎಸಗುತ್ತಾನೆ. ಆ ಘಟನೆ ಬಳಿಕ ಗ್ರಾಮಸ್ಥರು ಅನಿರೀಕ್ಷಿತ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ. ಈ ಘಟನೆ ಆಧರಿಸಿ ಪೆಡ್ರೋ ಸಿನಿಮಾ ತಯಾರಾಗಿದೆ.

  Pedro Movie becomes the first Kannada movie to selected for Busan International Film Festival

  ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಬ್ಯುಸಿ

  ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿರುವ ಕಾಂತಾರ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸುತ್ತಿದ್ದಾರೆ. ಜೊತೆಗೆ ನಾಯಕನಾಗಿಯೂ ನಟಿಸುತ್ತಿದ್ದಾರೆ. ಆಗಸ್ಟ್ 6 ರಂದು 'ಕಾಂತಾರ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿತ್ತು. ಆಗಸ್ಟ್ 27 ರಂದು ಚಿತ್ರದ ಮುಹೂರ್ತ ನಡೆದಿದ್ದು, ಅಂದಿನಿಂದಲೇ ಚಿತ್ರೀಕರಣವೂ ಶುರುವಾಗಿದೆ. ಕುಂದಾಪುರ ಸುತ್ತಮುತ್ತಾ ಚಿತ್ರೀಕರಣ ನಡೆಯಲಿದೆ. ಕಾಂತಾರ ಚಿತ್ರದಲ್ಲಿ ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. 25 ವರ್ಷದ ನಂತರ 'ಒಂದು ಮುತ್ತಿನ ಕಥೆ' ಚಿತ್ರದ ನಟಿ ಅರ್ಚನಾ ಸಹ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

  English summary
  Rishab Shetty Produced 'Pedro' Movie became the first Kannada movie to selected for Busan International Film Festival.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X