ಧ್ರುವ ಮದುವೆ ದಿನವೇ 'ಪೊಗರು' ರಿಲೀಸ್ ಡೇಟ್ಸ್ ಅನೌನ್ಸ್
ನಟ ಧ್ರುವ ಸರ್ಜಾ ಹಾಗೂ ಪ್ರೇರಣಾ ಶಂಕರ್ ವಿವಾಹ ಮಹೋತ್ಸವ ಇಂದು (ಭಾನುವಾರ) ನೆರವೇರಿದೆ. ಈ ಸಂತಸ ಸಮಯದಲ್ಲಿಯೇ ಧ್ರುವ ಸರ್ಜಾ ಮುಂದಿನ ಸಿನಿಮಾ ಬಿಡುಗಡೆ ದಿನಾಂಕ ನಿಗದಿಯಾಗಿದೆ.
'ಪೊಗರು' ಸಿನಿಮಾ ಸಂಕ್ರಾಂತಿ ಹಬ್ಬದ ವಿಶೇಷವಾಗಿ 2020ರಲ್ಲಿ ಬಿಡುಗಡೆ ಆಗಲಿದೆ. ಈ ವಿಷಯವನ್ನು ನಿರ್ದೇಶಕ ನಂದ ಕಿಶೋರ್ ತಿಳಿಸಿದ್ದಾರೆ. ಧ್ರುವ ಸರ್ಜಾ ಮದುವೆ ವಿಶೇಷವಾಗಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.
ಡಿಸೆಂಬರ್ ನಲ್ಲಿ ಸಿನಿಮಾ ಆಡಿಯೋ ಬಿಡುಗಡೆ ಮಾಡಲಾಗುವುದು, ಆ ನಂತರ ಒಂದು ತಿಂಗಳ ಬಳಿಕ ಸಿನಿಮಾ ರಿಲೀಸ್ ಆಗಲಿದೆಂತೆ. 'ಭರ್ಜರಿ' ಸಿನಿಮಾ 2017 ಸಪ್ಟೆಂಬರ್ ನಲ್ಲಿ ಬಿಡುಗಡೆ ಆಗಿತ್ತು. ಇದೀಗ ಎರಡು ವರ್ಷಗಳ ನಂತರ ಮತ್ತೆ ತೆರೆ ಮೇಲೆ ಧ್ರುವ ಕಾಣಿಸಿಕೊಳ್ಳುತ್ತಿದ್ದಾರೆ.

ಧ್ರುವ ಸರ್ಜಾಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಬ್ಯುಸಿ ಇರುವ ರಶ್ಮಿಕಾ ವರ್ಷಗಳ ನಂತರ ಕನ್ನಡ ಸಿನಿಮಾ ಮಾಡುತ್ತಿದ್ದಾರೆ.
ಈಗಾಗಲೇ ಸಿನಿಮಾದ ಒಂದು ಟ್ರೇಲರ್ ಬಿಡುಗಡೆಯಾಗಿ ದೊಡ್ಡ ಮಟ್ಟದ ಕ್ರೇಜ್ ಹುಟ್ಟುಹಾಕಿದೆ. ಡೈಲಾಗ್ ಟ್ರೇಲರ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಂದನ್ ಶೆಟ್ಟಿ ಸಿನಿಮಾಗೆ ಸಂಗೀತ ನೀಡಿದ್ದಾರೆ.


Click it and Unblock the Notifications











