For Quick Alerts
  ALLOW NOTIFICATIONS  
  For Daily Alerts

  ಡ್ರಗ್ಸ್ ಸರಬರಾಜು ಆರೋಪ: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ

  By ಫಿಲ್ಮ್ ಡೆಸ್ಕ್
  |

  ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೋಲೀಸರು ದಾಳಿ ನಡೆಸಿದ್ದಾರೆ.

  ಸ್ಯಾಂಡಲ್ ವುಡ್ ಗೆ ಡ್ರಗ್ ಲಿಂಕ್ ವಿಚಾರವಾಗಿ ಈ ದಾಳಿ ನಡೆದಿದೆ. ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ದಾಳಿ ನಡೆಸಿ ಶೋಧ ನಡೆಸಿದ್ದಾರೆ.

  ನಿರ್ದೇಶಕ, ನಟ ಎಂದು ಗುರುತಿಸಿಕೊಂಡಿರುವ ಮಸ್ತಾನ್, ಬಿಗ್ ಬಾಸ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದರು. ಈ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಮಸ್ತಾನ್ ಡ್ರಗ್ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

  ಮದ್ಯದ ನಶೆಯಲ್ಲಿ ನಟಿಯೊಂದಿಗೆ ಅಸಭ್ಯ ವರ್ತನೆ: ವ್ಯಕ್ತಿ ಬಂಧನ

  ಇತ್ತೀಚೆಗೆ ಬಂಧನಕ್ಕೆ ಒಳಗಾಗಿರುವ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನ ಜತೆ ಮಸ್ತಾನ್ ಸಂಪರ್ಕದಲ್ಲಿದ್ದ. ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್, ಮಸ್ತಾನ್ ಚಂದ್ರ ಹಾಗೂ ಕೇಶವ್ ಎಂಬುವರು ಸಂಪರ್ಕದಲ್ಲಿದ್ದು, ಡ್ರಗ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಕುರಿತ ತಾಂತ್ರಿಕ ಸಾಕ್ಷಾಧಾರಗಳನ್ನು ಸಂಗ್ರಹಿಸಿದ್ದ ಗೋವಿಂದಪುರ ಪೊಲೀಸರು, ಮಸ್ತಾನ್ ಮತ್ತು ಕೇಶವ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

  ರಾಬರ್ಟ್ ಅಬ್ಬರಕ್ಕೆ KGF ದಾಖಲೆ ಧೂಳಿಪಟ | Darshan | Yash | Filmibeat Kannada

  ಸದ್ಯ ಲಭ್ಯವಿರುವ ಸಾಕ್ಷಾಧಾರಗಳ ಮೇಲೆ ಮಸ್ತಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರಿನ ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣ ಬೆಳಕಿಗೆ ಬರಲು ಮೂಲ ಕಾರಣ ಬಾಣಸವಾಡಿ ಪೊಲೀಸರು. ಇನ್ನು ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೆಲ ದಿನಗಳ ಹಿಂದೆಯಷ್ಟೇ 25 ಆರೋಪಿಗಳ ವಿರುದ್ಧ ದೋಷಾರೋಪನ ಪಟ್ಟಿ ಸಲ್ಲಿಸಿದ್ದರು. ಇದೀಗ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

  English summary
  Sandalwood drug deal; police raid by Bigg Boss fame Mastan house.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X