Breaking: ಮಾರಕಾಸ್ತ್ರ ಹಿಡಿದು ರೀಲ್ಸ್: ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ-ರಜತ್ ಅರೆಸ್ಟ್
ಬಿಗ್ ಬಾಸ್ ಕನ್ನಡದ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರೂ ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದರು. ಕೆಲವು ದಿನಗಳ ಹಿಂದಷ್ಟೇ ಲಾಂಗ್ ಹಿಡಿದು ರೀಲ್ಸ್ ಮಾಡಿ ಇನ್‌ಸ್ಟಾಗ್ರಾಂಗೆ ಹಾಕಿದ್ದ ವಿನಯ್ ಗೌಡ ಹಾಗೂ ರಜತ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಇಂದು (ಮಾರ್ಚ್ 24) ಪೊಲೀಸರು ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ.
ವಿನಯ್ ಗೌಡ ಗೌಡ ಹಾಗೂ ರಜತ್ ಕಿಶನ್ ಇಬ್ಬರೂ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಅದನ್ನು ರಜತ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದರು. ನಿರೀಕ್ಷೆಯಂತೆ ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಬಿಗ್‌ಬಾಸ್ ಸ್ಪರ್ಧಿಗಳ ಲಾಂಗ್ ರೀಲ್ಸ್ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯ ಅಡಿ ಎಫ್‌ಐಆರ್ ದಾಖಲಿಸಿದ್ದರು. ರೀಲ್ಸ್‌ಗೆ ಸಂಬಂಧಿಸಿದಂತೆ ಪೊಲೀಸರು ಇವರಿಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರಿಗೂ ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ವಿನಯ್ ಗೌಡ ಹಾಗೂ ರಜತ್‌ಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಆದರೆ, ಬಿಗ್ ಬಾಸ್ ಸ್ಪರ್ಧಿ ರಜತ್ ಶೂಟಿಂಗ್ ನಿಮಿತ್ತ ಬೆಂಗಳೂರಿನಿಂದ ಆಚೆ ಇರುವುದರಿಂದ ಕಾಲಾವಕಾಶ ಕೇಳಿದ್ದರು ಎಂದು ವರದಿಯಾಗಿದೆ.


Click it and Unblock the Notifications











