»   » ಬೇಲೂರು ಮೇಲೆ ನಟಿ ಪೂಜಾಗಾಂಧಿ ಕಣ್ಣು

ಬೇಲೂರು ಮೇಲೆ ನಟಿ ಪೂಜಾಗಾಂಧಿ ಕಣ್ಣು

Posted By:
Subscribe to Filmibeat Kannada
ಕನ್ನಡ ಚಿತ್ರರಂಗದ ಅಭಿನೇತ್ರಿ ಪೂಜಾಗಾಂಧಿ ಬರಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅವರು ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ ಬೇಲೂರು ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿವಹಿಸಿದ್ದಾರೆ.

ಇತ್ತೀಚೆಗೆ ಅವರು ಚಿಕ್ಕಮಗಳೂರಿಗೆ ಆಗಮಿಸಿದ್ದ ವೇಳೆ ಈ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ವಿಷಯವನ್ನು ತಿಳಿಸಿದರು. ಉಡುಪಿ ಚಿಕ್ಕಮಗಳೂರು ಉಪ ಚುನಾವಣೆ ಸಂದರ್ಭದಲ್ಲಿ ಅವರು ಚುನಾವಣೆ ನೀತಿ ಸಂಹಿತೆಯನ್ನು ಮುರಿದಿದ್ದ ಸಂಬಂಧ ಅವರ ವಿರುದ್ಧ ಕೇಸ್ ದಾಖಲಾಗಿತ್ತು.

ಈ ಕೇಸಿನ ವಿಚಾರಣೆ ಸಲುವಾಗಿ ಬಂದಿದ್ದ ಅವರು ಹಳೇಬೀಡು ಸಮೀಪದ ಹುಲಿಕೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, "ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಬೇಲೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ" ಎಂದರು.

ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬರಲಿರುವ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸಾಕಷ್ಟು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ರಾಜ್ಯದ ವಿವಿಧೆಡೆ ಪ್ರವಾಸ ಮಾಡಿದಾಗ ಈ ವಿಷಯ ತಮಗೆ ಮನದಟ್ಟಾಯಿತು ಎಂದರು.

ಇದೇ ಸಂದರ್ಭದಲ್ಲಿ ಬಿಎಸ್ಆರ್ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭುಜೇಂದ್ರ ಮಾತನಾಡುತ್ತಾ, "ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಮ್ಮ ಪಕ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉಳಿದ ಪಕ್ಷಗಳಿಗೆ ಹೋಲಿಸಿದರೆ ನಮ್ಮ ಪಕ್ಷ ಉತ್ತಮ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗುತ್ತಿದೆ." ಎಂದರು.

ಇತ್ತೀಚೆಗೆ ಪೂಜಾಗಾಂಧಿ ಅವರು ಪಬ್ಲಿಕ್ ಟಿವಿಯ ಹೆಚ್.ಆರ್.ರಂಗನಾಥ್ ಜೊತೆ ಮಾತನಾಡಿರುವ ಅವರು, "ನಾನು ಟಿಕೆಟ್ ಕೇಳಿಕೊಂಡು ಬಿಎಸ್ಆರ್ ಕಾಂಗ್ರೆಸ್ ಸೇರಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ. ಪಕ್ಷದ ಪ್ರಮುಖರು ನಿರ್ಧಾರ ಕೈಗೊಳ್ಳುತ್ತಾರೆ. ಟಿಕೆಟ್ ಸಿಕ್ಕರೆ ಉತ್ತರ ಕರ್ನಾಟದಿಂದ ಸ್ಪರ್ಧಿಸುತ್ತೇನೆ. ಟಿಕೆಟ್ ದೊರೆಯದಿದ್ದರೆ ಸಾಮಾನ್ಯ ಕಾರ್ಯಕರ್ತೆ ಯಾಗಿರುತ್ತೇನೆ" ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು. (ಏಜೆನ್ಸೀಸ್)

English summary
Kannada actress Pooja Gandhi to contest from Belur constituency for upcoming assembly elections in Karnataka. Recently she expressed her desire to contest from BSR Congress party when she visited Chikkamagaluru.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada