For Quick Alerts
  ALLOW NOTIFICATIONS  
  For Daily Alerts

  ಕಾಂತಾರ: ರಿಷಬ್ ಶೆಟ್ಟಿಗೆ ಜೋಡಿಯಾದ 'ಪಾಪ್ ಕಾರ್ನ್ ಮಂಕಿ ಟೈಗರ್' ನಾಯಕಿ

  By ಫಿಲ್ಮಿಬೀಟ್ ಡೆಸ್ಕ್
  |

  ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೊಸ ಸಿನಿಮಾ ಕಾಂತಾರ ಆರಂಭ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಘೋಷಣೆಯಾಗಿದ್ದ 'ಕಾಂತಾರ' ಸಿನಿಮಾದ ಮುಹೂರ್ತವನ್ನು ಇತ್ತೀಚಿಗಷ್ಟೆ ಹುಟ್ಟೂರಿನಲ್ಲಿ ಮುಗಿಸಿದ್ದಾರೆ ರಿಷಬ್ ಶೆಟ್ಟಿ.

  ಶ್ರೀ ಆನೆಗುಡ್ಡೆ ದೇವಾಲಯದಲ್ಲಿ ಸಿನಿಮಾ ಮುಹೂರ್ತ ನೆರವೇರಿದ್ದು, ಕಾಂತಾರ ಸಿನಿಮಾ ಪ್ರಾರಂಭಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮುಹೂರ್ತ ಸಮಾರಂಭಕ್ಕೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಗೆ ಇತರೆ ಕೆಲವು ಪ್ರಮುಖರು, ಚಿತ್ರದ ತಾಂತ್ರಿಕ ವರ್ಗದ ಕೆಲವು ಸದಸ್ಯರು ಸಹ ಆಗಮಿಸಿದ್ದರು. ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

  ಇನ್ನು ವಿಶೇಷ ಎಂದರೆ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾಗಿ ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿ ನಟಿಸಿದ್ದ ಸಪ್ತಮಿ ಗೌಡ ಕಾಣಿಸಿಕೊಳ್ಳಲಿದ್ದಾರೆ. ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಬಳಿಕ ಸಪ್ತಮಿ ಗೌಡ ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಸುಕ್ಕಾ ಸೂರಿ ನಿರ್ದೇಶನದ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದ ಮೂಲಕ ಮೊದಲ ಬಾರಿಗೆ ತೆರೆಮೇಲೆ ಮಿಂಚಿದ್ದರು. ಧನಂಜಯ್ ಪತ್ನಿಯಾಗಿ ಕಾಣಿಸಿಕೊಂಡಿದ್ದ ಸಪ್ತಮಿ ಅಭಿಮಾನಿಗಳ ಹೃದಯ ಗೆದ್ದಿದ್ದರು.

  ಈ ಸಿನಿಮಾ ಬಳಿಕ ಉತ್ತಮ ಸಿನಿಮಾಗಾಗಿ ಕಾಯುತ್ತಿದ್ದ ಸಪ್ತಮಿಗೆ ಈಗ ಕಾಂತಾರ ಸಿಕ್ಕಿರುವ ಉತ್ಸಾಹದಲ್ಲಿದ್ದಾರೆ. ಇತ್ತೀಚಿಗಷ್ಟೆ ನಡೆದ ಮುಹೂರ್ತ ಸಮಾರಂಭದಲ್ಲಿ ಸಪ್ತಮಿ ಕೂಡ ಭಾಗಿಯಾಗಿದ್ದರು. ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಸಪ್ತಮಿ, ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಬಳಿಕ ಉತ್ತಮ ಚಿತ್ರಕ್ಕಾಗಿ ಕಾಯುತ್ತಿದ್ದೆ. ಇದೀಗ ನಾನು ಉತ್ತಮ ಯೋಜನೆ ಪಡೆದುಕೊಂಡಿದ್ದೇನೆ. ನಿರ್ದೇಶಕ, ನಟ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡಲು ಉತ್ಸುಕಳಾಗಿರುವುದಾಗಿ ಹೇಳಿದ್ದಾರೆ.

  ಪಾತ್ರದ ಬಗ್ಗೆ ಬಿಟ್ಟುಕೊಡದ ಸಪ್ತಮಿ ಚಿತ್ರೀಕರಣದಲ್ಲಿ ಭಾಗಿಯಾಗುವ ಖುಷಿಯಲ್ಲಿದ್ದಾರೆ. ಇನ್ನು ಕಾಂತಾರ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ ಸೇರಿದಂತೆ ಪ್ರಮುಖರಿದ್ದಾರೆ. ಇನ್ನು ವಿಶೇಷ ಎಂದರೆ ಚಿತ್ರದಲ್ಲಿ ಸ.ಹಿ.ಪ್ರಾ ಶಾಲೆ ಕಾಸಗೋಡು ಚಿತ್ರದಲ್ಲಿ ಪ್ರವೀಣನ ಪಾತ್ರದಲ್ಲಿ ನಟಿಸಿದ್ದ ನಟ ರಂಜನ್ ಕೂಡ ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಾಹಣವಿದೆ.

  Popcorn Monkey Tiger movie fame Sapthami Gowda female lead in Rishab Shettys Kantara movie

  ಇನ್ನು ವಿಶೇಷ ಎಂದರೆ ಕಾಂತಾರ ಚಿತ್ರದಲ್ಲಿ ಹಿರಿಯ ನಟಿ ಅರ್ಚನಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಶಂಕರ್ ನಾಗ್ ನಿರ್ದೇಶಿಸಿ ಡಾ.ರಾಜ್‌ಕುಮಾರ್ ನಟಿಸಿದ್ದ 'ಒಂದು ಮುತ್ತಿನ ಕತೆ' ಸಿನಿಮಾದಲ್ಲಿ ನಟಿಸಿದ್ದ ಅರ್ಚನಾ 'ಕಾಂತಾರ' ಸಿನಿಮಾದ ಮೂಲಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. 'ಒಂದು ಮುತ್ತಿನ ಕತೆ', 'ಗುರಿ', 'ಪ್ರೇಮಿಗಳ ಸವಾಲ್', 'ಬೆಳ್ಳಿ ನಾಗ', 'ಹುಲಿಯ' ಸಿನಿಮಾಗಳಲ್ಲಿ ಅರ್ಚನಾ ನಟಿಸಿದ್ದರು. 'ಹುಲಿಯ' ಬಳಿಕ ಕನ್ನಡದ ಯಾವುದೇ ಸಿನಿಮಾದಲ್ಲಿ ಅರ್ಚನಾ ನಟಿಸಿರಲಿಲ್ಲ. ಇದೀಗ 'ಕಾಂತಾರ' ಸಿನಿಮಾಕ್ಕಾಗಿ ಅರ್ಚನಾ ಮರಳಿ ಬರುತ್ತಿರುವುದು ವಿಶೇಷ.

  ಅಂದಹಾಗೆ ರಿಷಬ್ ಶೆಟ್ಟಿ ನಿರ್ದೇಶನದ ನಾಲ್ಕನೇ ಸಿನಿಮಾ ಇದಾಗಿದೆ. ಈ ಹಿಂದೆ ರಕ್ಷಿತ್ ಶೆಟ್ಟಿ ನಟನೆಯ 'ರಿಕ್ಕಿ', 'ಕಿರಿಕ್ ಪಾರ್ಟಿ', 'ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು' ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಇದೀಗ 'ಕಾಂತಾರ' ಸಿನಿಮಾದ ಮಾಡುತ್ತಿದ್ದಾರ. ಈ ಸಿನಿಮಾ ಬಳಿಕ ಶಿವರಾಜ್ ಕುಮಾರ್ ನಟನೆಯ ಹೊಸ ಸಿನಿಮಾವನ್ನು ರಿಷಬ್ ನಿರ್ದೇಶಿಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಜೊತೆಗೆ 'ಕಿರಿಕ್ ಪಾರ್ಟಿ 2' ಸಿನಿಮಾ ಕೂಡ ರಿಷಬ್ ಬಳಿ ಇದೆ.

  English summary
  Popcorn Monkey Tiger movie fame Sapthami Gowda female lead in Rishab Shetty's Kantara movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X