Just In
Don't Miss!
- Sports
ಐಎಸ್ಎಲ್: ಮುಂಬೈ ಸಿಟಿ vs ಚೆನ್ನೈಯಿನ್ ಹಣಾಹಣಿ, Live ಸ್ಕೋರ್
- News
ಚಿನ್ನದ ಬೆಲೆ ಏರಿಳಿತ: ಜನವರಿ 25ರ ಬೆಲೆ ಹೀಗಿದೆ
- Automobiles
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್
- Finance
ಎಲ್&ಟಿ ತ್ರೈಮಾಸಿಕ ಆದಾಯ 5% ಏರಿಕೆ: ದಾಖಲೆಯ 2,467 ಕೋಟಿ ರೂಪಾಯಿ
- Lifestyle
ನಿಮ್ಮ ದೇಹದ ಮೇಲಿನ ಕೂದಲು ಹೇಳುತ್ತೆ ನಿಮ್ಮ ಆರೋಗ್ಯದ ಭವಿಷ್ಯ
- Education
Indian Air Force Recruitment 2021: ಏರ್ಮೆನ್ ಗ್ರೂಪ್ X & Y ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಣ್ಣಯ್ಯ ಅಂತಿಮ ದರ್ಶನ, ಸಂಜೆ 6ಕ್ಕೆ ಅಂತ್ಯಕ್ರಿಯೆ
ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇಂದು ಸಂಜೆ ಆರು ಗಂಟೆಗೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಣ್ಣಯ್ಯ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.
ಲಂಚ ತಿನ್ಲಿ, ಆದ್ರೆ ಎಷ್ಟು ಬೇಕೋ ಅಷ್ಟೇ ತಿನ್ಲಿ : ಹಿರಣ್ಣಯ್ಯ
ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ ನಾಟಕ ದೊಡ್ಡ ಮಟ್ಟಕ್ಕೆ ಖ್ಯಾತಿಗಳಿದೆ. ರಾಜಕೀಯವನ್ನು ವಿಡಂಬನಾತ್ಮವಾಗಿ ಹೇಳುತ್ತಿದ್ದ ಲಂಚಾವತಾರ ನಾಟಕ ಸುಮಾರು 1000 ಪ್ರದರ್ಶನಗಳನ್ನು ನೀಡಿದೆ. ಮಾತಿನ ಮೂಲಕವೆ ರಾಜಕಾರಣಿಗಳನ್ನು ತಿವಿಯುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅವರು ನಾಟಕಗಳ ಜೊತೆಗೆ ಚಿತ್ರರಂಗದಲ್ಲು ಖ್ಯಾತಿ ಗಳಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ಅವರು ಕೊನೆಯದಾಗಿ ಸುನೀಲ್ ಕುಮಾರ್ ದೇಸಾಯಿ ಅವರ 'ರೇ' ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇನ್ನು ಇಚ್ಚೀತಿಗಷ್ಟೆ ರಮೇಶ್ ಅರವಿಂದ್ ನಿರ್ದೇಶನದ 'ಬಟರ್ ಫ್ಲೈ' ಸಿನಿಮಾದ ಹಾಡಿನಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರು ಬರೆದ ಸಾಲುಗಳನ್ನು ಬಳಸಿಕೊಳ್ಳಲಾಗಿದೆ. ಈ ಹಾಡಿಗೆ ಬಿಗ್ ಬಿ ಅಮಿತಾ ಬಚ್ಚನ್ ದ್ವನಿ ನೀಡಿದ್ದಾರೆ.
ಲಂಚ ಸಾಮ್ರಾಜ್ಯ, ನಂ.73 ಶಾಂತಿ ನಿವಾಸ, ಗಜ ಸೇರಿದಂತೆ 30 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿದೆ.