For Quick Alerts
  ALLOW NOTIFICATIONS  
  For Daily Alerts

  ಪ್ರಜ್ವಲ್ ದೇವರಾಜ್ ಬರ್ತ್‌ಡೇ: 'ಮಾಫಿಯಾ' ಸಿನಿಮಾ ಮಾಸ್ ಪೋಸ್ಟರ್ ರಿಲೀಸ್

  |

  ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜುಲೈ 04ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

  ಪ್ರಜ್ವಲ್ ಹುಟ್ಟುಹಬ್ಬದ ಸಂಭ್ರಮಕ್ಕೆ ಅವರ ಸಿನಿಮಾ ತಂಡ ಕೂಡ ಸಾಥ್ ನೀಡಿದೆ. 'ಮಾಫಿಯಾ' ಸಿನಿಮಾ ತಂಡ ಪ್ರಜ್ವಲ್ ದೇವರಾಜ್ ಸರ್ಪ್ರೈಸ್ ಗಿಫ್ಟ್ ಅನ್ನು ನೀಡಿದೆ. ಡೈಲಾಗ್ ಪ್ರಿನ್ಸ್‌ಗೆ ಕೊಟ್ಟ ಈ ವಿಶೇಷ ಉಡುಗೊರೆ ಅವರ ಅಭಿಮಾನಿಗಳಿಗೆ ಕಿಕ್ ಕೊಟ್ಟಿದೆ.

  ಪ್ರಜ್ವಲ್‌ಗೆ ಮಾಫಿಯಾ ಪೋಸ್ಟರ್ ಗಿಫ್ಟ್

  ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ( ಜುಲ್ 04) ನೆನಪಿಗಾಗಿ 'ಮಾಫಿಯಾ' ಸಿನಿಮಾ ಮಾಸ್‌ ಪೋಸ್ಟರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿದ್ದಾರೆ. ಹೊಸ ಮಾಸ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ಪ್ರಜ್ವಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ ಚಿತ್ರತಂಡ.

  ಅಂದ್ಹಾಗೆ 'ಮಾಫಿಯಾ' ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ. ಮಾಫಿಯಾ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಸಂಪೂರ್ಣ ಮುಕ್ತಾಯಗೊಳ್ಳಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಮಾಫಿಯಾ ಸಿನಿಮಾ ನಿರ್ಮಾಣವಾಗುತ್ತಿದೆ.

  ಪ್ರಜ್ವಲ್‌ಗೆ ಅದಿತಿ ಪ್ರಭುದೇವ ನಾಯಕಿ

  ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್‌ಗೆ ಈ ಸಿನಿಮಾದಲ್ಲಿ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಇವರೊಂದಿಗೆ ಶೈನ್ ಶೆಟ್ಟಿ, ದೇವರಾಜ್, ವಿಜಯ್ ಚೆಂಡೂರ್, ವಾಸುಕಿ ವೈಭವ್, ಸಾಧುಕೋಕಿಲ ಮುಂತಾದವರು ವಿಶೇಷ ಪಾತ್ರಗಳಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  Prajwal Devaraj Birthday: Mafia Mass Poster Release

  ಬೆಂಗಳೂರು ಕುಮಾರ್ ಫಿಲಂಸ್‌ನ ಕುಮಾರ್ ಬಿ ಈ ಮಾಫಿಯಾ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಲೋಹಿತ್ ಹೆಚ್ ಮಾಫಿಯಾ ಚಿತ್ರದ ನಿರ್ದೇಶಕರು. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿನಿಮಾ ಪೋಸ್ಟರ್ ನೋಡಿದರೆ, 'ಮಾಫಿಯಾ' ಮಾಸ್ ಸಿನಿಮಾ ಪ್ರಿಯರಿಗೆ ಇಷ್ಟವಾಗುವ ಎಲ್ಲಾ ಸಾಧ್ಯತೆಗಳಿವೆ. ಇದರೊಂದಿಗೆ ಇದೂವರೆಗೂ ಪ್ರಜ್ವಲ್ ನಟಿಸಿದ ಎಲ್ಲಾ ಸಿನಿಮಾಗಳಿಗಿಂತ ಇದು ಮಾಸ್ ಆಗಿದೆ.

  English summary
  Prajwal Devaraj Birthday: Mafia Mass Poster Release, Know More,
  Monday, July 4, 2022, 9:59
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X