ಪ್ರಜ್ವಲ್ ದೇವರಾಜ್ ಇನ್ನಿಲ್ಲ ಫೋಟೊ ವೈರಲ್; 'ಕರಾವಳಿ' ನಟ ಕ್ಷೇಮ.. ಕಿಡಿಗೇಡಿಗಳ ವಿರುದ್ಧ ದೂರು ನೀಡಲು ನಿರ್ಧಾರ!
ಇತ್ತೀಚೆಗೆ ಸೋಶಿಯಲ್ ಮೀಡಿಯಾ ಸಿನಿಮಾ ತಾರೆಯರಿಗೆ ಉಪಯೋಗನೂ ಆಗುತ್ತಿದೆ. ಜೊತೆಗೆ ಅನಾನುಕೂಲವೂ ಆಗುತ್ತಿದೆ. ಇದೇ ಸೋಶಿಯಲ್ ಮೀಡಿಯಾವನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಮುಖ್ಯವಾಗಿ ಸಿನಿಮಾ ಸೆಲೆಬ್ರಿಟಿಗಳ ಅಭಿಮಾನಿಗಳು ಆತಂಕಕ್ಕೆ ಒಳಗಾಗುತ್ತಿದ್ದಾರೆ.
ಸದ್ಯ ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಆರೋಗ್ಯ ಕುರಿತಾದ ಫೋಟೊವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪ್ರಜ್ವಲ್ ದೇವರಾಜ್ ಅವರ ಈ ಫೋಟೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು.

ಈ ಸಂಬಂಧ ನಟ ಪ್ರಜ್ವಲ್ ದೇವರಾಜ್ ಆಪ್ತರು ಮಾಹಿತಿಯನ್ನು ಹಂಚಿಕೊಂಡಿದ್ದು, ಕರಾವಳಿ ನಟ ಆರೋಗ್ಯವಾಗಿದ್ದಾರೆ. ಅವರಿಗೆ ಯಾವುದೇ ರೀತಿಯ ಸಮಸ್ಯೆಯಿಲ್ಲ. ಕಿಡಿಗೇಡಿಗಳು ಸುಮ್ಮನೆ ಇಂತಹ ಫೋಟೊಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ ಮಾಧ್ಯಮಗಳಿಗೆ ಮಾಹಿತಿ ರವಾನೆ ಮಾಡಿದ್ದಾರೆ.
ಪ್ರಜ್ವಲ್ ದೇವರಾಜ್ ಬಗ್ಗೆ ಕಿಡಿಗೇಡಿಗಳು ವೈರಲ್ ಮಾಡುತ್ತಿರುವ ಫೋಟೊ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಟ ಪ್ರಜ್ವಲ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾಗಿ ವರದಿಯಾಗಿದೆ.
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಫೋಟೊವನ್ನು ದುರ್ಬಳಕೆ ಮಾಡಿಕೊಂಡಿರುವ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಈ ಬಗ್ಗೆ ಪ್ರಜ್ವಲ್ ದೇವರಾಜ್ ಕುಟುಂಬ ಆಕ್ರೋಶ ಹೊರಹಾಕಿದೆ ಎನ್ನಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿ ವದಂತಿಗಳನ್ನು ಹಬ್ಬಿಸುತ್ತಿರುವುದರಿಂದ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಈ ಸಂಬಂಧ ಕಿಡಿಗೇಡಿಗಳ ಈ ಕೃತ್ಯಕ್ಕೆ ತಕ್ಕ ಪಾಠ ಕಲಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗೆ ಸುಳ್ಳು ಸುದ್ದಿಯನ್ನು ಹಬ್ಬಿಸಿದವರ ವಿರುದ್ಧ ಕಾನೂನು ಸಲಹೆ ಪಡೆದು ದೂರು ನೀಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ. ಪ್ರಜ್ವಲ್ ಆರೋಗ್ಯವಾಗಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.
ಅಂದ್ಹಾಗೆ, ಈ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಫೋಟೊ 'ವೀರಂ' ಸಿನಿಮಾದ್ದು. ಇದೇ ಫೋಟೊವನ್ನು ಇಟ್ಟುಕೊಂಡು ಕಿಡಿಗೇಡಿಗಳು ಹೀಗೆ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಒಟ್ನಲ್ಲಿ ಇತ್ತೀಚೆಗೆ ಸಿನಿಮಾ ತಾರೆಯರಿಗೆ ಸೋಶಿಯಲ್ ಮೀಡಿಯಾ ಎಷ್ಟು ಅನುಕೂಲವಾಗುತ್ತಿದೆಯೋ, ಅಷ್ಟೇ ಅನಾನುಕೂಲವೂ ಆಗುತ್ತಿದೆ.


Click it and Unblock the Notifications











