ಬಹುಭಾಷಾ ನಟ ಪ್ರಕಾಶ್ ರಾಜ್‌ಗೆ ಮತ್ತೊಂದು ಸಂಕಷ್ಟ; ಅರೆಸ್ಟ್ ವಾರಂಟ್ ಜಾರಿ
ನಟ ಪ್ರಕಾಶ್ ರಾಜ್ ಹೆಸರು ಒಂದಿಲ್ಲೊಂದು ವಿವಾದದಲ್ಲಿ ಸಿಲುಕಿಕೊಳ್ತಿದೆ. 4 ಕಡೆಗಳಲ್ಲಿ ವೋಟರ್ ಐಡಿ ಹೊಂದಿರುವ ಆರೋಪದಲ್ಲಿ ಇದೀಗ 48ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದರೂ ಉತ್ತರಿಸಿರಲಿಲ್ಲ. ಹಾಗಾಗಿ ಇದೀಗ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಆಗಿರುವುದಾಗಿ ವರದಿಯಾಗಿದೆ. ಪ್ರಕಾಶ್ ರಾಜ್ ಅವರಿಗೆ ಸದ್ಯ ಬಂಧನದ ಭೀತಿ ಎದುರಾಗಿದೆ ಎನ್ನಲಾಗ್ತಿದೆ.
ಪ್ರಕಾಶ್ ರಾಜ್ ನಿಯಮ ಮೀರಿ 4 ಕಡೆಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂದು ವಕೀಲ ದಿಲೀಪ್ ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದರು. ಕೇಂದ್ರ ಚುನಾವಣ ಆಯೋಗಕ್ಕೂ ದೂರು ನೀಡಿದ್ದರು. ಪ್ರಕರಣ ಸಂಬಂಧ 2019ರಲ್ಲಿ ಮೊದಲ ಬಾರಿ ದಿಲೀಪ್ ಕುಮಾರ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಗಮನಕ್ಕೂ ತಂದಿದ್ದರು. ಪ್ರಯೋಜನವಾಗದೇ ಇದ್ದಾಗ ಚುನಾವಣ ಆಯೋಗಕ್ಕೆ ದೂರು ನೀಡಿದ್ದರು. ಕೊನೆಗೆ ಕೋರ್ಟ್ ಮೆಟ್ಟಿಲೇರಿದ್ದರು.

ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ಸೇರಿ 4 ರಾಜ್ಯಗಳಲ್ಲಿ ನಟ ಪ್ರಕಾಶ್ ರಾಜ್ ವೋಟರ್ ಐಡಿ ಇಟ್ಟುಕೊಂಡಿದ್ದಾರೆ ಎನ್ನುವುದೇ ಈಗ ಹೊಸ ಸಂಕಷ್ಟ ತಂದೊಡ್ಡಿದೆ. ಇದಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಾಶ್ ರಾಜ್ ಮಾತನಾಡಿದ್ದರು. ಪೊಲೀಸ್ ಭದ್ರತೆಯಲ್ಲೇ ಸುದ್ದಿಗೋಷ್ಠಿಗೆ ಆಗಮಿಸಿದ್ದರು.


Click it and Unblock the Notifications