ಪ್ರಣಂ ದೇವರಾಜ್ ಸಿನಿಮಾ 'SO ಮುತ್ತಣ್ಣ' ರಿಲೀಸ್ ಡೇಟ್ ಫಿಕ್ಸ್!
ಕನ್ನಡ ಚಿತ್ರರಂಗದ ಹಿರಿಯ ನಟ ದೇವರಾಜ್ ಅವರ ಕಿರಿಯ ಪುತ್ರ ಪ್ರಣಂ ಈಗಾಗಲೇ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇವರ ಚೊಚ್ಚಲ ಸಿನಿಮಾ 'ಕುಮಾರು 21 ಎಫ್' ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಲಿಲ್ಲ. ಹೀಗಾಗಿ ಒಂದಿಷ್ಟು ದಿನ ಗ್ಯಾಪ್ ತೆಗೆದುಕೊಂಡಿದ್ದರು. ಈಗ ಮತ್ತೆ ಕನ್ನಡ ಚಿತ್ರರಂಗದಲ್ಲಿ ಆಕ್ಟಿವ್ ಆಗಿದ್ದಾರೆ. ಇವರು ನಟಿಸಿರುವ 'S\O ಮುತ್ತಣ್ಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಶಿವಣ್ಣ 'S\O ಮುತ್ತಣ್ಣ' ಸಿನಿಮಾದ ಟೀಸರ್ ರಿಲೀಸ್ ಮಾಡಿ ಶುಭ ಕೋರಿದ್ದರು. ಅಲ್ಲಿಂದ ಸಿನಿಮಾ ಬಿಡುಗಡೆ ಬಗ್ಗೆ ಚರ್ಚೆಯಾಗುತ್ತಲೇ ಇತ್ತು. ಈಗ ಕೊನೆಗೂ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಪ್ರಣಂ ದೇವರಾಜ್ ಮತ್ತೊಮ್ಮೆ ಚಿತ್ರಮಂದಿರದಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಈ ಬಾರಿ ಪಕ್ಕಾ ಕಮರ್ಷಿಯಲ್ ಫ್ಯಾಮಿಲಿ ಎಲಿಮೆಂಟ್ಸ್ ಅನ್ನು ಇಟ್ಟುಕೊಂಡು ತೆರೆಮೇಲೆ ಬರುತ್ತಿದ್ದಾರೆ.

'S\O ಮುತ್ತಣ್ಣ' ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ಚಿತ್ರತಂಡ ಭರವಸೆಯನ್ನು ಮೂಡಿಸಿತ್ತು. ಪ್ರಣಂ ದೇವರಾಜ್ ಅವರ ಪರ್ಫೆಕ್ಟ್ ಕಮ್‌ಬ್ಯಾಕ್ ಎಂದು ಭವಿಷ್ಯವನ್ನು ನುಡಿಯಲಾಗಿತ್ತು. ಟೀಸರ್ ರಿಲೀಸ್ ಆದಾಗಲೇ ಇದೊಂದು ಅಪ್ಪ ಮಗನ ಭಾವನಾತ್ಮಕ ಸಂಬಂಧವನ್ನು ಸಾರಿ ಹೇಳುವ ಸಿನಿಮಾ ಎಂಬುವುದು ಸಿನಿಪ್ರಿಯರ ಗಮನಕ್ಕೆ ಬಂದಿದೆ. ಈಗ ರಿಲೀಸ್ ಡೇಟ್ ಅನೌನ್ಸ್ ಆಗಿರುವುದರಿಂದ ನಿರಂತರವಾಗಿ ಪ್ರಚಾರವನ್ನು ಆರಂಭ ಮಾಡಲಿದೆ.
ಈ ಸಿನಿಮಾವನ್ನು ಶ್ರೀಕಾಂತ್ ಹುಣಸೂರು ನಿರ್ದೇಶನ ಮಾಡಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ 'S\O ಮುತ್ತಣ್ಣ' ಸಿನಿಮಾಗೆ ಸಚಿನ್ ಬಸ್ರೂರ್ ಸಂಗೀತ ನೀಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಈ ಸಿನಿಮಾದ "ಕಮಂಗಿ ನನ್ನ ಮಗನೆ.." ಹಾಡು ಜನರ ಮನಸ್ಸನ್ನು ಗೆದ್ದಿದೆ. ಹಾಗೇ ಸಿನಿಮಾದ ಟೀಸರ್ ಕೂಡ ಮೆಚ್ಚುಗೆ ಪಡೆದುಕೊಂಡಿದೆ.
ಬಹಳ ದಿನಗಳಿಂದ ಪ್ರೇಕ್ಷಕರು ಈ ಸಿನಿಮಾ ರಿಲೀಸ್ ಯಾವಾಗ ಎಂದು ಎದುರು ನೋಡುತ್ತಿದ್ದರು. ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ. 'S\O ಮುತ್ತಣ್ಣ' ಸಿನಿಮಾ ಇದೇ ವರ್ಷ ಆಗಸ್ಟ್ 22 ರಂದು ರಾಜ್ಯಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ಈಗ ಸಿನಿಮಾ ಪ್ರಚಾರ ಹಾಗೂ ವ್ಯವಹಾರವನ್ನು ಮಾಡಿ ಮುಗಿಸಿದೆ. ಪ್ರತಿಷ್ಠಿತ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಈ ಸಿನಿಮಾವನ್ನು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದೆ. ಆಗಸ್ಟ್ ಮೊದಲ ವಾರ ಈ ಸಿನಿಮಾವನ್ನು ಅಮೆರಿಕಾ ಹಾಗೂ ದುಬೈನಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ.
ಪ್ರಣಂ ದೇವರಾಜ್ ತಂದೆಯ ಪಾತ್ರದಲ್ಲಿ ಹಿರಿಯ ನಟ ರಂಗಾಯಣ ರಘು ನಟಿಸಿದ್ದಾರೆ. ಈ ಸಿನಿಮಾ ಅಪ್ಪ-ಮಗನ ಬಾಂಧವ್ಯದ ಕಥಾಹಂದರ ಹೊಂದಿದ್ದು ಭಾವನಾತ್ಮಕ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರ ಆಗಲಿದೆ ಎಂಬ ಭರವಸೆಯನ್ನು ಚಿತ್ರತಂಡ ಇಟ್ಟುಕೊಂಡಿದೆ. ಪುರಾತನ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಇನ್ನು
ಪ್ರಣಂ ದೇವರಾಜ್‌ಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ. ರಂಗಾಯಣ ರಘು ಜೊತೆಗೆ ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ. ಸಚಿನ್ ಬಸ್ರೂರು ಟ್ಯೂನ್‌ಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ.


Click it and Unblock the Notifications











