For Quick Alerts
  ALLOW NOTIFICATIONS  
  For Daily Alerts

  ಇನ್ಸ್ಟಾಗ್ರಾಮ್ ನಲ್ಲಿ 3 ಮಿಲಿಯನ್ ಫಾಲೋವರ್ಸ್ ಹೊಂದಿದ ನಟಿ ಪ್ರಣೀತಾ

  |

  ಸ್ಯಾಂಡಲ್ ವುಡ್ ನ ಖ್ಯಾತ ನಟಿ ಪ್ರಣೀತಾ ಸುಭಾಷ್ ಇನ್ಸ್ಟಾಗ್ರಾಮ್ ನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿದಿದ್ದಾರೆ. ಕನ್ನಡ ಸೇರಿದಂತೆ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಇರುವ ಪ್ರಣೀತಾಗೀಗ ಫಾಲೋವರ್ಸ್ ಸಂಖ್ಯೆ ಕೂಡ ಹೆಚ್ಚಾಗಿದ್ದಾರೆ.

  ಇನ್ಸ್ಟಾಗ್ರಾಮ್ ನಲ್ಲಿ 3 ಮಿಲಿಯನ್ ಫಾಲೋವರ್ಸ್ ಹೊಂದಿದ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಅಂದ್ರೆ ಪ್ರಣೀತಾ ಕನ್ನಡ ಸ್ಟಾರ್ ನಟರಾದ ಸುದೀಪ್ ಮತ್ತು ದರ್ಶನ್ ಗಿಂತಲು ಹೆಚ್ಚಿನ ಫಾಲೋವರ್ಸ್ ಹೊಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರೀಯರಾಗಿರುವ ಪ್ರಣೀತಾ ಅತೀ ಹೆಚ್ಚು ಪೋಸ್ಟ್ ಗಳನ್ನು ಮಾಡುತ್ತಿರುತ್ತಾರೆ.

  ಮತ್ತೆ ಶಾಲೆಗೆ ಮರಳಿದ ನಟಿ ಪ್ರಣೀತಾ ಸುಭಾಷ್ಮತ್ತೆ ಶಾಲೆಗೆ ಮರಳಿದ ನಟಿ ಪ್ರಣೀತಾ ಸುಭಾಷ್

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪೊರ್ಕಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಪ್ರಣೀತಾ ಆ ನಂತರ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾದರು. ಅಪರೂಪಕ್ಕೊಂದು ಕನ್ನಡ ಸಿನಿಮಾ ಮಾಡುವ ಈ ಸುಂದರಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಮಾಸ್ ಲೀಡರ್ ಸಿನಿಮಾ ಮೂಲಕ ಗ್ಯಾಪ್ ನ ಬಳಿಕ ಮತ್ತೆ ಕನ್ನಡಕ್ಕೆ ವಾಪಸ್ ಆಗಿದ್ದರು.

  ಕನ್ನಡ, ತಮಿಳು, ತೆಲುಗು ಚಿತ್ರರಂಗದಲ್ಲಿ ಮಿಂಚಿರುವ ಪ್ರಣೀತಾ ಸದ್ಯ ಬಾಲಿವುಡ್ ಕಡೆ ಪಯಣ ಬೆಳೆಸಿದ್ದಾರೆ. ಅಜಯ್ ದೇವಗನ್ ನಾಯಕನಾಗಿ ಅಭಿನಯಿಸುತ್ತಿರುವ 'ಭುಜ್: ದಿ ಪ್ರೈಡ್ ಆಫ್ ಇಂಡಿಯಾ' ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್, ರಾಣ ದಗ್ಗುಬಾಟಿ ಕೂಡ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. ಜೊತೆಗೆ ನಾಯಕಿಯರಾಗಿ ಪ್ರಣೀತಾ ಸೇರಿದ್ದಂತೆ ಸೋನಾಕ್ಷಿ ಸಿನ್ಹಾ ಮತ್ತು ಪರಿಣೀತಿ ಚೋಪ್ರಾ ಕಾಣಿಸಿಕೊಳ್ಳುತ್ತಿದ್ದಾರೆ.

  English summary
  Actress Praneetha Subhash has amassed over 3 million followers on Instagram.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X