Just In
Don't Miss!
- News
ಸಿತಲ್ಕುಚಿಯಲ್ಲಿನ ಘಟನೆ ಮರುಕಳಿಸುತ್ತದೆ ಹುಷಾರ್; ದಿಲೀಪ್ ಘೋಷ್ ಎಚ್ಚರಿಕೆ
- Finance
ಏಪ್ರಿಲ್ 12ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ
- Lifestyle
ಸೋಮವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- Automobiles
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಾ ವಿಷ್ಣುವರ್ಧನ್ ಓದಿದ ಶಾಲೆ ಉಳಿಸಲು ಮುಂದಾದ ನಟಿ ಪ್ರಣಿತಾ ಸುಭಾಷ್
ಮೊದಲ ಕನ್ನಡ ಮಾಧ್ಯಮ ಶಾಲೆ ಮತ್ತು ಅತ್ಯಂತ ಪುರಾತನ ಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರಿನ ಶಾಲೆಯೊಂದನ್ನು ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದ್ದು, ಅದಕ್ಕೆ ಸಿನಿಮಾ ನಟಿ ಪ್ರಣಿತಾ ಸುಭಾಷ್ ಬೇಸರ ವ್ಯಕ್ತಪಡಿಸಿದ್ದಾರೆ.
''ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ, ಹಾಗೆಯೇ ಡಾ. ವಿಷ್ಣುವರ್ಧನ್ ರವರು ಓದಿರುವ ಸಂಸ್ಥೆಯು ಮುಚ್ಚುತ್ತಿರುವುದು ನನಗೆ ಬೇಸರ ತಂದಿದೆ. ಈ ವಿಷಯದ ಬಗ್ಗೆ ರಾಜ್ಯ ಸರ್ಕಾರವು ಗಮನಹರಿಸಬೇಕೆಂದು ದಯಮಾಡಿ ಕೇಳಿಕೊಳ್ಳುತ್ತೇನೆ. ಪ್ರಣಿತಾ ಫೌಂಡೇಶನ್ ವತಿಯಿಂದ ಸಾಧ್ಯವಾದಷ್ಟು ಸಹಾಯ ಮಾಡಲು ಸಿದ್ಧರಿದ್ದೇವೆ'' ಎಂದು ನಟಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ಜೊಮ್ಯಾಟೊ ಡೆಲಿವರಿ ಬಾಯ್ ಪರ ನಿಂತ ನಟಿ ಪ್ರಣಿತಾ ಮತ್ತು ಪರಿಣೀತಿ
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಾಡೆಲ್ ಹೈ ಸ್ಕೂಲ್ ವಿದ್ಯಾರ್ಥಿಗಳಿಲ್ಲದೇ ಖಾಲಿ ಮನೆಯಂತಾಗಿದೆ. ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ ಕಳೆದ ಮೂರು ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆಗಿಲ್ಲ. ಇದರಿಂದ ನಿರಾಸೆಗೊಂಡ ಆಡಳಿತ ಮಂಡಳಿ ಶಾಲೆ ಮುಚ್ಚಲು ಮುಂದಾಗಿದೆ.
1870 ರ ಬ್ರಿಟಿಷ್ ಆಡಳಿತದಲ್ಲಿ ಈ ಶಾಲೆ ಸ್ಥಾಪಿಸಲಾಗಿತ್ತು. ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ ಇದಾಗಿದೆ. ಈ ಶಾಲೆಯಲ್ಲಿ ಓದಿದ ಅನೇಕರು ಸಮಾಜದಲ್ಲಿ ಗಣ್ಯ ವ್ಯಕ್ತಿಗಳು ಎನಿಸಿಕೊಂಡಿದ್ದಾರೆ.
ಕನ್ನಡ ಚಲನಚಿತ್ರರಂಗದಲ್ಲಿ ಲೆಜೆಂಡ್ ಎನಿಸಿಕೊಂಡಿರುವ ಡಾ ವಿಷ್ಣುವರ್ಧನ್ ಓದಿರುವುದು ಇದೇ ಶಾಲೆಯಲ್ಲಿ. ಕ್ರಿಕೆಟ್ ದಂತಕತೆ ಗುಂಡಪ್ಪ ವಿಶ್ವನಾಥ್ ಓದಿದ್ದು ಸಹ ಇದೇ ಶಾಲೆಯಲ್ಲಿ. ಇಂತಹ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶಿಕ್ಷಣ ಸಂಸ್ಥೆಯನ್ನು ಉಳಿಸಬೇಕಾಗಿದೆ.
ನಟಿ ಪ್ರಣಿತಾ ಸುಭಾಷ್ ತಮ್ಮ ಫೌಂಡೇಶನ್ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲೂ ಹಲವು ರೀತಿ ನೆರವು ನೀಡಿದ್ದರು. ಶಾಲೆಗಳನ್ನು ದತ್ತು ಪಡೆದು ಅಭಿವೃದ್ದಿ ಪಡಿಸಿರುವ ಉದಾಹರಣೆಯೂ ಇದೆ. ಈ ನಿಟ್ಟಿನಲ್ಲಿ ಕನ್ನಡ ಮಾಡೆಲ್ ಶಾಲೆಯನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿರುವುದು ನಿಜಕ್ಕೂ ಸ್ವಾಗತಾರ್ಹ.