For Quick Alerts
  ALLOW NOTIFICATIONS  
  For Daily Alerts

  'ಸಲಾರ್' ಸಿನಿಮಾದ ಪ್ರಭಾಸ್ ಫೋಟೋ ಲೀಕ್; ಟ್ವಿಟ್ಟರ್ ನಲ್ಲಿ ಸಖತ್ ಟ್ರೆಂಡ್

  By ಫಿಲ್ಮಿಬೀಟ್ ಡೆಸ್ಕ್
  |

  ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮತ್ತು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 'ಸಲಾರ್' ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಕೊರೊನಾ 2ನೇಯ ಭೀಕರತೆ ಕಡಿಮೆಯಾದ ಬಳಿಕ ಸಲಾರ್ ತಂಡ ಎರಡನೇ ಹಂತದ ಚಿತ್ರೀಕರಣ ಪ್ರಾರಂಭ ಮಾಡಿದೆ. ಇತ್ತೀಚಿಗಷ್ಟೆ ಚಿತ್ರೀಕರಣ ಪ್ರಾರಂಭವಾಗಿದ್ದು, ಹಗಲು ರಾತ್ರಿ ಎನ್ನದೇ ಚಿತ್ರೀಕರಣ ನಡೆಯುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

  ಪ್ರಶಾಂತ್ ನೀಲ್ ಸಲಾರ್ ಗೂ ಇವರೇ ವಿಲನ್

  ಈ ನಡುವೆ ಸಲಾರ್ ಸೆಟ್ ನಿಂದ ಪ್ರಭಾಸ್ ಫೋಟೋ ಲೀಕ್ ಆಗಿದೆ. ಸೋರಿಕೆಯಾಗಿರುವ ಪ್ರಭಾಸ್ ಫೋಟೋ ಮತ್ತು ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಚಿತ್ರೀಕರಣ ಸೆಟ್ ನಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಹಾಗೂ ಒಂದು ಪೋಟೋ ಟ್ವಿಟ್ಟರ್ ಟ್ರೆಂಡಿಂಗ್ ನಲ್ಲಿದೆ. ಒಂದು ಗಲ್ಲಿಯಲ್ಲಿ ಚಿತ್ರೀಕರಣ ಮಾಡುತ್ತಿರುವ ದೃಶ್ಯ ಇದಾಗಿದೆ.

  ಪ್ರಶಾಂತ್ ನೀಲ್-ಪ್ರಭಾಸ್ 'ಸಲಾರ್'ಗೆ ಎಂಟ್ರಿ ಕೊಟ್ಟ ದಕ್ಷಿಣದ ಖ್ಯಾತ ವಿಲನ್ಪ್ರಶಾಂತ್ ನೀಲ್-ಪ್ರಭಾಸ್ 'ಸಲಾರ್'ಗೆ ಎಂಟ್ರಿ ಕೊಟ್ಟ ದಕ್ಷಿಣದ ಖ್ಯಾತ ವಿಲನ್

  ಪ್ರಭಾಸ್ ಸೆಟ್ ಗೆ ಎಂಟ್ರಿ ಕೊಡುತ್ತಿರುವ ವಿಡಿಯೋವನ್ನು ಸೇರೆ ಹಿಡಿದು ಯಾರೋ ಲೀಕ್ ಮಾಡಿದ್ದಾರೆ. ಈ ಒಂದು ಪುಟ್ಟ ವಿಡಿಯೋ ಅಭಿಮಾನಿಗಳಿಗೆ ಸಖತ್ ಥ್ರಿಲ್ ನೀಡುತ್ತಿದೆ. ಈ ವಿಡಿಯೋವನ್ನು ಶೇರ್ ಮಾಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬದಂತೆ ಆಚರಣೆ ಮಾಡುತ್ತಿದ್ದಾರೆ. ಅಂದಹಾಗೆ ಸಲಾರ್ ಸಿನಿಮಾದ ಆಕ್ಷನ್ ದೃಶ್ಯದ ಚಿತ್ರೀಕರಣ ನಡೆಯುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಪ್ರಸಿದ್ಧ ಸಾಹಸ ಕಲಾವಿದರಾದ ಅನ್ಬು-ಅರಿವ್ ಸಲಾರ್ ಸಿನಿಮಾದ ಆಕ್ಷನ್ ದೃಶ್ಯಗಳನ್ನು ನಿರ್ದೇಶನ ಮಾಡುತ್ತಿದ್ದಾರೆ.

  ಸದ್ಯ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ವರದಿಗಳ ಪ್ರಕಾರ ಸಲಾರ್ ಸಿನಿಮಾದ ಆಕ್ಷನ್ ದೃಶ್ಯಗಳನ್ನು ರಾತ್ರಿಯೂ ಸೆರೆಹಿಡಿಯಲಾಗುತ್ತಿದೆಯಂತೆ. ಹಾಗಾಗಿ ಪ್ರಭಾಸ್ ಸರಿಯಾಗಿ ನಿದ್ದೆ ಇಲ್ಲದೆ ದಿನಗಳನ್ನು ಕಳೆಯುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಸಲಾರ್ ಜೊತೆ ಪ್ರಭಾಸ್ 'ಆದಿಪುರುಷ್' ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಎರಡು ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗುತ್ತಿರುವ ಪ್ರಭಾಸ್ ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದಾರೆ.

  ಅಂದಹಾಗೆ ಚಿತ್ರದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ಶ್ರುತಿ ಹಾಸನ್ ಕಾಣಿಸಿಕೊಳ್ಳುತ್ತದ್ದಾರೆ. ಮೊದಲ ಬಾರಿಗೆ ಪ್ರಭಾಸ್ ಜೊತೆ ಶ್ರುತಿ ನಟಿಸುತ್ತಿದ್ದು, ಚಿತ್ರದ ಬಗ್ಗೆ ಸಖತ್ ಉತ್ಸುಕರಾಗಿದ್ದಾರೆ. ಇತ್ತೀಚಿಗಷ್ಟೆ 2ನೇ ಹಂತದ ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿರುವ ಶ್ರುತಿ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

  ಇನ್ನು ಸಲಾರ್ ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ ವಿಲನ್ ಜಗಪತಿ ಬಾಬು ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿಯೂ ಕೇಳಿಬರುತ್ತಿದೆ. ಸದ್ಯ ನಡೆಯುತ್ತಿರುವ ಆಕ್ಷನ್ ದೃಶ್ಯಗಳಲ್ಲಿ ಜಗಪತಿ ಬಾಬು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಜಗಪತಿ ಬಾಬು ಈಗಾಗಲೇ ರಜನಿಕಾಂತ್ ಅಣ್ಣಾತೆ ಮತ್ತು ಬಾಲಕೃಷ್ಣ ನಟನೆಯ ಅಖಂಡ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಲಾರ್ ತಂಡ ಸೇರಿಕೊಂಡಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ.

  ಇನ್ನು ಸಲಾರ್ ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ವರದಿಗಳ ಪ್ರಕಾರ, ಸಲಾರ್ ಚಿತ್ರದಲ್ಲಿ ಪ್ರಭಾಸ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಕನ್ನಡ ನಟ ಮಧು ಗುರುಸ್ವಾಮಿ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭುವನ್ ಗೌಡ ಛಾಯಾಗ್ರಹಣ ಹಾಗೂ ರವಿ ಬಸ್ರೂರು ಹಿನ್ನೆಲೆ ಸಂಗೀತವಿದೆ. ಚಿತ್ರತಂಡದ ಅಂದುಕೊಂಡಂತೆ ಶೂಟಿಂಗ್ ಮುಗಿದರೆ 2022ರ ಏಪ್ರಿಲ್ ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವ ಸಾಧ್ಯತೆ ಇದೆ.

  English summary
  Kannada Director Prashanth Neel and Prabhas's Salaar movie making video leaked, Goes viral on Social media.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X