Don't Miss!
- News ‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'KGF-2' ಡಬ್ಬಿಂಗ್ ನಲ್ಲಿ ಯಶ್; ಫೋಟೋ ಶೇರ್ ಮಾಡಿ ಪ್ರಶಾಂತ್ ನೀಲ್ ಹೇಳಿದ್ದೇನು?
ಇಡೀ ದೇಶವೆ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಸದ್ಯ ತೆಲುಗು ಸಿನಿಮಾದಲ್ಲಿ ಬ್ಯುಸಿಯಾಗಿದ್ದರೂ ಕೆಜಿಎಫ್2 ಕೆಲಸಗಳನ್ನು ಮಾಡುತ್ತಿದ್ದಾರೆ.
Recommended Video
ಕೆಜಿಎಫ್-2 ಚಿತ್ರದ ಕೆಲಗಳು ಸರಾಗವಾಗಿ ಸಾಗುತ್ತಿದ್ದು ಸದ್ಯ ಡಬ್ಬಿಂಗ್ ಕೆಲಸ ಶುರುವಾಗಿದೆ. ಈಗಾಗಲೇ ನಟಿ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದು, ತನ್ನ ಪಾತ್ರಕ್ಕೆ ಧ್ವನಿ ನೀಡುತ್ತಿದ್ದಾರೆ. ಇತ್ತೀಚಿಗಷ್ಟೆ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಕೆಜಿಎಫ್ ಚಾಪ್ಟರ್ 2 ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಇಬ್ಬರು ಸ್ಟಾರ್ ಅತಿಥಿಗಳು?
ಇದೀಗ ಡಬ್ಬಿಂಗ್ ಸ್ಟುಡಿಯೋಗೆ ರಾಕಿಂಗ್ ಸ್ಟಾರ್ ಎಂಟ್ರಿಯಾಗಿದೆ. ರಾಕಿ ಭಾಯ್ ತನ್ನ ಪಾತ್ರಕ್ಕೆ ಡಬ್ ಮಾಡುವ ಕೆಲಸ ಶುರುವಾಗಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಫೋಟೋ ಹಂಚಿಕೊಂಡಿದ್ದಾರೆ. ಪ್ರಶಾಂತ್ ನೀಲ್ ಹೆಗಲ ಮೇಲೆ ಕೈ ಹಾಕಿ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, 'ರಾಕಿ ಜೊತೆ ಡಬ್ಬಿಂಗ್ ಮಾಡುವುದು ಯಾವಾಗಲೂ ರಾಕಿಂಗ್' ಎಂದು ಬರೆದುಕೊಂಡಿದ್ದಾರೆ.
ಪ್ರಶಾಂತ್ ನೀಲ್ ಪೋಸ್ಟ್ ಗೆ ಅಭಿಮಾನಿಗಳು ಕೆಜಿಎಫ್-2 ಬಗ್ಗೆ ಅಪ್ ಡೇಟ್ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಅಂದಹಾಗೆ ಯಶ್ ಕನ್ನಡಕ್ಕೆ ಮಾತ್ರ ಡಬ್ಬಿಂಗ್ ಮಾಡುತ್ತಾರಾ ಬೇರೆ ಭಾಷೆಗೂ ಯಶ್ ಅವರೇ ಡಬ್ ಮಾಡುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.
ಇನ್ನು ಇತ್ತೀಚಿಗೆ ಸಿನಿಮಾತಂಡ ಚಿತ್ರದ ಪ್ರಮೋಷನ್ ಕೆಲಸಗಳ ಬಗ್ಗೆ ಮಾತುಕತೆ ನಡೆಸುತ್ತಿತ್ತು. ಚಿತ್ರದ ಪ್ರಿ ರಿಲೀಸ್ ಈವೆಂಟ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಪ್ರಮೋಷನ್ ಮಾಡುವ ಬಗ್ಗೆ ಚಿತ್ರತಂಡ ಪ್ಲಾನ್ ಮಾಡುತ್ತಿದೆ. ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾ ಜುಲೈ 16ಕ್ಕೆ ದೇಶ ವಿದೇಶಗಳಲ್ಲಿ ತೆರೆಗೆ ಬರುತ್ತಿದೆ.