For Quick Alerts
  ALLOW NOTIFICATIONS  
  For Daily Alerts

  ನಟಿ ಜಯಶ್ರೀ ಬಗ್ಗೆ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಪ್ರಶಾಂತ್ ಸಂಬರ್ಗಿ

  By ಫಿಲ್ಮ್ ಡೆಸ್ಕ್
  |

  ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ಪುನರ್ವಸತಿ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜಯಶ್ರೀ ರಾಮಯ್ಯ ಶವ ಪತ್ತೆಯಾಗಿದೆ.

  Jayashree ಮಾಡಿದ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ Rekha Rani | Filmibeat Kannada

  ಜಯಶ್ರೀ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜಯಶ್ರೀ ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಎನ್ನಲಾಗುತ್ತಿದೆ. ಎರಡು ವರ್ಷಗಳಿಂದ ಜಯಶ್ರೀ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರಂತೆ. ಈಗಾಗಲೇ ಅನೇಕ ಬಾರಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದರು.

  'ಈ ಜಗತ್ತಿಗೆ ಗುಡ್ ಬೈ ಹೇಳುತ್ತಿದ್ದೀನಿ' ಎಂದು ಈ ಹಿಂದೆ ಪೋಸ್ಟ್ ಹಾಕಿದ್ದ ಜಯಶ್ರೀ ಇದೀಗ ನಿಜಕ್ಕೂ ಜಗತ್ತು ಬಿಟ್ಟು ಹೊರಟು ಹೋಗಿದ್ದಾರೆ. ಜಯಶ್ರೀ ಸಾವು ಅವರ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ಆಘಾತ ತಂದಿದೆ.

  ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಪೋಸ್ಟ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ತರಾಟೆ ತೆಗೆದುಕೊಂಡಿದ್ದಾರೆ. ತಕ್ಷಣ ಪೋಸ್ಟ್ ಡಿಲೀಟ್ ಮಾಡಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ.

  ಅಷ್ಟಕ್ಕೂ ಪ್ರಶಾಂತ್ ಸಂಬರ್ಗಿ ಹೇಳಿದ್ದು, 'ಡ್ರಗ್ಸ್ ಮತ್ತು ಖಿನ್ನತೆ ಮತ್ತೊಂದು ಯುವ ಜೀವವನ್ನು ಬಲಿ ಪಡೆದಿದೆ' ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಗೆ ನೆಗೆಟಿವ್ ಕಾಮೆಂಟ್ ಬರುತ್ತಿದ್ದಂತೆ ಡ್ರಗ್ಸ್ ಪದವನ್ನು ತೆಗೆದು ಖಿನ್ನತೆ ಸೇರಿಸಿ, 'ಖಿನ್ನತೆ ಮತ್ತೊಂದು ಯುವ ಜೀವವನ್ನು ಬಲಿ ಪಡೆದಿದೆ' ಎಂದು ಮಾತ್ರ ಪೋಸ್ಟ್ ಮಾಡಿದ್ದಾರೆ.

  ಪ್ರಶಾಂತ್ ಸಂಬರ್ಗಿ ಪೋಸ್ಟ್ ಗೆ ಇಂಥ ಸಮಯದಲ್ಲಿ ಈ ರೀತಿಯ ಮಾತು ಹೇಳಬಾರದು ಎಂದು ಹೇಳುತ್ತಿದ್ದಾರೆ. ಸಾಕ್ಷಿ ಇಲ್ಲದೆ ಏನೇನೋ ಹೇಳಬೇಡಿ ಎಂದು ಸಂಬರ್ಗಿಯನ್ನು ನೆಟ್ಟಿಗರು ತರಾಟೆ ತೆಗೆದುಕೊಂಡಿದ್ದಾರೆ.

  ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

  English summary
  Prashanth Sambargi statements on Actress Jayashree Ramaiah suicide.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X