'ಜೇಮ್ಸ್' ಸಿನಿಮಾಗೆ ನಾಯಕಿ ಫಿಕ್ಸ್: ಮತ್ತೆ ಒಂದಾದ 'ರಾಜಕುಮಾರ' ಜೋಡಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ 'ಯುವರತ್ನ' ಸಿನಿಮಾದ ಚಿತ್ರೀಕರಣ ಮುಗಿಸಿ ಮುಂದಿನ ಜೇಮ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಹೌದು ಮೊನ್ನೆ ಮೊನ್ನೆಯಷ್ಟೆ 'ಯುವರತ್ನ' ಸಿನಿಮಾದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿರುವ ಅಪ್ಪು ಇದೀಗ 'ಜೇಮ್ಸ್' ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ.

ಭರ್ಜರಿ ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಜೇಮ್ಸ್, ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಿದೆ. ಇದೀಗ ಅಧಿಕೃತವಾಗಿ ಸಿನಿಮಾ ಪ್ರಾರಂಭವಾಗಿದೆ. ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಆದರೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಪವರ್ ಸ್ಟಾರ್ ಜೊತೆ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ಕಾಣಿಸಿಕೊಳ್ಳುತ್ತಿದ್ದಾರೆ. ಮುಂದೆ ಓದಿ.

ಜೇಮ್ಸ್ ಗೆ ಎಂಟ್ರಿ ಕೊಟ್ಟ ಪ್ರಿಯಾ ಆನಂದ್

ಜೇಮ್ಸ್ ಗೆ ಎಂಟ್ರಿ ಕೊಟ್ಟ ಪ್ರಿಯಾ ಆನಂದ್

ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾಗೆ ನಾಯಕಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸೂಪರ್ ಹಿಟ್ ರಾಜಕುಮಾರ ಸಿನಿಮಾದಲ್ಲಿ ಪುನೀತ್ ಜೊತೆ ನಟಿಸಿದ್ದ ಪ್ರಿಯಾ ಇದೀಗ ಎರಡನೇ ಬಾರಿಗೆ ಪವರ್ ಸ್ಟಾರ್ ಜೊತೆ ಹೆಜ್ಜೆ ಹಾಕುತ್ತಿದ್ದಾರೆ. ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಕನ್ನಡದಲ್ಲಿ ನಾಲ್ಕನೆ ಸಿನಿಮಾ

ಕನ್ನಡದಲ್ಲಿ ನಾಲ್ಕನೆ ಸಿನಿಮಾ

ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ ಸಿನಿಮಾ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಪ್ರಿಯಾ ನಂತರ ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಆರೆಂಜ್ ಸಿನಿಮಾ ಮತ್ತು ಇನ್ನು ರಿಲೀಸ್ ಆಗದ ಆರ್ ಡಿ ಎಕ್ಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಮೂಲಕ ಕನ್ನಡ ಚಿತ್ರಪ್ರಿಯರನ್ನು ರಂಜಿಸಲು ಬರ್ತಿದ್ದಾರೆ.

ಜೇಮ್ಸ್ ಸಿನಿಮಾದಲ್ಲಿ ಅನು ಪ್ರಭಾಕರ್

ಜೇಮ್ಸ್ ಸಿನಿಮಾದಲ್ಲಿ ಅನು ಪ್ರಭಾಕರ್

ಜೇಮ್ಸ್ ಸಿನಿಮಾದಲ್ಲಿ ಅನು ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 55ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನು ಪ್ರಭಾಕರ್ ಇದೇ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅನು ಪ್ರಭಾಕರ್ ಇದೀಗ ಕಮರ್ಶಿಯಲ್ ಸಿನಿಮಾ ಕಡೆ ಮುಖಮಾಡಿದ್ದಾರೆ. ಚಿತ್ರದಲ್ಲಿ ಅನು ಪ್ರಭಾಕರ್ ಪಾತ್ರ ಹೇಗಿರಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಜೇಮ್ಸ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಆದಿತ್ಯ ಮೆನನ್

ಜೇಮ್ಸ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಆದಿತ್ಯ ಮೆನನ್

ದಕ್ಷಿಣ ಭಾರತದ ಖ್ಯಾತ ನಟ ಆದಿತ್ಯ ಮೆನನ್ ಜೇಮ್ಸ್ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಕನ್ನಡದಲ್ಲಿ ಜಾಗ್ವಾರ್, ಸೀತಾರಾಮ ಕಲ್ಯಾಣ ಸಿನಿಮಾಗಳಲ್ಲಿ ನಟಿಸಿರುವ ಆದಿತ್ಯ ಮೆನನ್ ಈಗ ಪುನೀತ್ ಜೊತೆ ನಟಿಸಲು ಉತ್ಸುಕರಾಗಿದ್ದಾರೆ. ತಮಿಳು, ತೆಲುಗು, ಮಲಯಾಳಂನ ಸಾಕಷ್ಟು ಸಿನಿಮಾಗಳಲ್ಲಿ ಆದಿತ್ಯ ಮೆನನ್ ನಟಿಸಿದ್ದಾರೆ.

Recommended Video

ಜೇಮ್ಸ್ ಚಿತ್ರದ ಶೂಟಿಂಗ್ ಗಾಗಿ ಹೊಸಪೇಟೆಗೆ ಪುನೀತ್ ರಾಜಕುಮಾರ್ | Filmibeat Kannada
ಬಳ್ಳಾರಿಯ ಹೊಸಪೇಟೆಯಲ್ಲಿ ಚಿತ್ರೀಕರಣ

ಬಳ್ಳಾರಿಯ ಹೊಸಪೇಟೆಯಲ್ಲಿ ಚಿತ್ರೀಕರಣ

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ‌ ಕಮಲಾಪುರದ ಆರೆಂಜ್ ಕೌಂಟಿಯಲ್ಲಿ ಚಿತ್ರ ಜೇಮ್ಸ್ ಚಿತ್ರೀಕರಣ ನಡೆಯುತ್ತಿದೆ. ನಿನ್ನೆ ಸಂಜೆ ಹೊತ್ತಿಗೆ ಪುನೀತ್ ರಾಜ್ ಕುಮಾರ್ ಕಮಲಾಪುರದ ಬಳಿಯ ಆರೆಂಜ್ ಕೌಂಟಿಗೆ ಆಗಮಿಸಿದ್ದಾರೆ. ಮೊದಲು ನಾಲ್ಕು ದಿನ ರೆಸಾರ್ಟ್ ನಲ್ಲಿ ಶೂಟಿಂಗ್ ನಡೆಯಲಿದೆ. ನಂತರ ಗಂಗಾವತಿ ಬಳಿ ಚಿತ್ರೀಕರಣ ಮಾಡಲಿದ್ದಾರೆ. ಜೇಮ್ಸ್ ಚಿತ್ರಕ್ಕಾಗಿ ಗಂಗಾವತಿಯಲ್ಲಿ ಭವ್ಯ ಸೆಟ್ ಹಾಕಲಾಗಿದೆ.

More from Filmibeat

English summary
Tamil Actress Priya Anand To Pair Opposite Puneeth Rajkumar In 'James'.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X