»   » ಶೂಟಿಂಗ್ ವೇಳೆ ಪ್ರಿಯಾಂಕಾ ಚೋಪ್ರಾಗೆ ಗಾಯ: ಆಸ್ಪತ್ರೆಯಿಂದ ಡಿಸ್ಚಾರ್ಜ್!

ಶೂಟಿಂಗ್ ವೇಳೆ ಪ್ರಿಯಾಂಕಾ ಚೋಪ್ರಾಗೆ ಗಾಯ: ಆಸ್ಪತ್ರೆಯಿಂದ ಡಿಸ್ಚಾರ್ಜ್!

Written By:
Subscribe to Filmibeat Kannada

ಹಾಲಿವುಡ್ ಟಿವಿ ಶೋ 'ಕ್ವಾಂಟಿಕೋ-2'ದ ಚಿತ್ರೀಕರಣದ ವೇಳೆ ಕೆಳಗೆ ಬಿದ್ದು ಗಾಯ ಮಾಡಿಕೊಂಡಿದ್ದ ನಟಿ ಪ್ರಿಯಾಂಕಾ ಚೋಪ್ರಾ, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಶೂಟಿಂಗ್ ವೇಳೆ ಸ್ಟಂಟ್ ಮಾಡುತ್ತಿದ್ದ ಪ್ರಿಯಾಂಕಾ ಅವರು ಕಾಲು ಜಾರಿ ಕೆಳಗೆ ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಪೆಟ್ಟು ಬಿದ್ದಿತ್ತು. ಕೂಡಲೇ ಪ್ರಿಯಾಂಕಾ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಪ್ರಿಯಾಂಕಾ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

Priyanka Chopra Hospitalized After Accident on Set of Quantico

'ಕ್ವಾಂಟಿಕೋ 2'ನೇ ಆವೃತ್ತಿಗಾಗಿ ನೂಯಾರ್ಕ್ ನಲ್ಲಿ ಶೂಟಿಂಗ್ ನಡೆಸುತ್ತಿದೆ. ಸೋಮವಾರದಿಂದ ಮತ್ತೆ ಚಿತ್ರೀಕರಣಕ್ಕೆ ಮರಳಿ ಬರಲಿದ್ದಾರೆಂದು ಚಿತ್ರದ ತಂಡ ಹೇಳಿಕೊಂಡಿದೆ. ಇನ್ನೂ ಭಾನುವಾರ ನಡೆದ 74ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಭಾಗಿಯಾಗಿದ್ದರು.

English summary
Indian actress Priyanka Chopra was involved in a minor accident on the set of her TV drama "Quantico" and taken to the hospital here. The 34-year-old actress has since been released by the doctor, and is now "resting comfortably" at home.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada