'1980' ಸಿನಿಮಾದ ಶೂಟಿಂಗ್ ಮುಗಿಸಿದ ನಟಿ ಪ್ರಿಯಾಂಕಾ ಉಪೇಂದ್ರ

ಲಾಕ್‌ಡೌನ್‌ ಆದ್ಮೇಲೆ 1980 ಸಿನಿಮಾದ ಚಿತ್ರೀಕರಣ ಆರಂಭಿಸಿದ್ದ ನಟಿ ಪ್ರಿಯಾಂಕಾ ಉಪೇಂದ್ರ ಈಗ ಶೂಟಿಂಗ್ ಮುಗಿಸಿದ್ದಾರೆ. ಇದೀಗ, 1980 ಸಿನಿಮಾದ ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.

ಸಂಪೂರ್ಣವಾಗಿ ರೆಟ್ರೋ ಶೈಲಿಯಲ್ಲಿ ಈ ಸಿನಿಮಾ ತಯಾರಾಗುತ್ತಿರುವುದು ವಿಶೇಷ. ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಬಹುತೇಕ ಶೂಟಿಂಗ್ ನಡೆದಿದೆ.

ಸ್ವತಃ ಚಿತ್ರತಂಡ ಪ್ರಕಟಿಸಿರುವ ಪ್ರಕಾರ ಫೆಬ್ರವರಿ 22 ರಂದು 1980 ಚಿತ್ರದ ಟೀಸರ್ ರಿಲೀಸ್ ಆಗಲಿದೆ. ಸಂಜೆ 6 ಗಂಟೆ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಯಾರು ಬರಲಿದ್ದಾರೆ ಎಂಬ ಕುತೂಹಲ ಮೂಡಿದೆ.

Priyanka Upendras 1980 movie shooting wrapped up

ಅಂದ್ಹಾಗೆ, ಈ ಸಿನಿಮಾಗೆ ರಾಜ್ ಕಿರಣ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸವಾರಿ-2, ವಸಂತ ಕಾಲ, ಮಿಸ್ಡ್ ಕಾಲ್ ಮುಂತಾದ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ರಾಜ್ ಕಿರಣ್‌ ಅವರಿಗೆ ಚೊಚ್ಚಲ ಸಿನಿಮಾ.

ಪ್ರಿಯಾಂಕಾ ಅವರ ಜೊತೆ ಪ್ರಮುಖ ಪಾತ್ರಗಳಲ್ಲಿ ಅರವಿಂದ್ ರಾವ್, ಶ್ರೀಧರ್, ಮುರಳಿ ಶರ್ಮಾ ಮುಂತಾದವರು ನಟಿಸುತ್ತಿದ್ದಾರೆ.

ಈ ಸಿನಿಮಾ ಹೊರತುಪಡಿಸಿ, ಪ್ರಿಯಾಮಣಿ, ಛಾಯಾ ಸಿಂಗ್ ಜೊತೆ ಹಾರರ್ ಥ್ರಿಲ್ಲರ್ ಸಿನಿಮಾ ಆರಂಭಿಸಿದ್ದಾರೆ. ಇದರ ಜೊತೆಗೆ 'ಉಗ್ರಾವತಾರ' ಚಿತ್ರೀಕರಣ ನಡೆಯುತ್ತಿದೆ. ಈ ನಡುವೆ 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.

More from Filmibeat

English summary
Kannada actress Priyanka Upendra's 1980 movie shooting wrapped up and Teaser releasing on February 22nd.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X