ಮತ್ತೆ ಭಯ ಹುಟ್ಟಿಸಲು ಬಂದ ಪ್ರಿಯಾಂಕಾ ಉಪೇಂದ್ರ: 'ಕ್ಯಾಪ್ಚರ್' ಪೋಸ್ಟರ್ ದಾಖಲೆ
ಇತ್ತೀಚಿನ ವರ್ಷಗಳಲ್ಲಿ ಪ್ರಿಯಾಂಕ ಉಪೇಂದ್ರ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚು ಹೆಚ್ಚು ನಟಿಸುತ್ತಿದ್ದಾರೆ. ಇದೀಗ ಮತ್ತೊಂದು ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. 'ಮಮ್ಮಿ', 'ದೇವಕಿ' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಪ್ರಿಯಾಂಕಾ ಹೊಸ ಚಿತ್ರಕ್ಕೆ 'ಕ್ಯಾಪ್ಚರ್' ಎಂದು ಟೈಟಲ್ ಫಿಕ್ಸ್ ಆಗಿದೆ. ಸದ್ಯ ಚಿತ್ರತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅಭಿಮಾನಿಗಳ ಮಧ್ಯೆ 'ಕ್ಯಾಪ್ಚರ್' ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷ. ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ನಾಯಕಿಯೊಬ್ಬರ ಪೋಸ್ಟರ್ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ ಅನಾವರಣ ಮಾಡಲಾಗಿದೆ.

60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ 'ಕ್ಯಾಪ್ಚರ್' ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಇದೊಂದು ವಿನೂತನವಾದ ಪ್ರಯತ್ನವಾಗಿದೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ 3ನೇ ಸಿನಿಮಾ ಇದು. ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಬಂದಿದ್ದಾರೆ.
ಶ್ರೀ ದುರ್ಗಪರಮೇಶ್ವರಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ರವಿರಾಜ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ವಿಭಿನ್ನವಾಗಿ ಲಾಂಚ್ ಮಾಡಲಾಯಿತು. ವೀರೇಶ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್ ಪೋಸ್ಟರ್ ನಿಲ್ಲಿಸಿ ಟೈಟಲ್ ಪೋಸ್ಟರ್ ರಿವೀಲ್ ಮಾಡಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷ.
'ಕ್ಯಾಪ್ಚರ್' ಚಿತ್ರವನ್ನು ಸಂಪೂರ್ಣವಾಗಿ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಂದರೆ ಇಡೀ ಸಿನಿಮಾ ಸಿಸಿಟಿವಿ ದೃಶ್ಯಾವಳಿ ನೋಡಿದ ಅನುಭವ ನೀಡಲಿದೆ. ಇನ್ನುಳಿದಂತೆ ಭಯ, ಕುತೂಹಲ, ಟ್ವಿಸ್ಟ್ ಈ ಕತೆಯಲ್ಲಿ ಇರಲಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ. ಸೈಲೆಂಟ್ ಆಗಿ 'ಕ್ಯಾಪ್ಚರ್' ಸಿನಿಮಾ ಚಿತ್ರೀಕರಣ ಮುಗಿಸಿ ತಂಡ ಪೋಸ್ಟರ್ ರಿಲೀಸ್ ಮಾಡಿದೆ. ಚಿತ್ರಕ್ಕೆ ಎಸ್. ಪಾಂಡಿಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದು ರವಿಚಂದ್ರನ್ ಸಂಕಲನವಿದೆ.
ಪ್ರಿಯಾಂಕ ಉಪೇಂದ್ರ ಜೊತೆಗೆ ಇನ್ನು ಸಾಕಷ್ಟು ಸ್ಟಾರ್ ಕಲಾವಿದರು 'ಕ್ಯಾಪ್ಚರ್' ಸಿನಿಮಾದಲ್ಲಿದ್ದಾರೆ. ನವೆಂಬರ್‌ನಲ್ಲೇ ಈ ಹಾರರ್ ಥ್ರಿಲ್ಲರ್ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ ಹ್ಯಾಟ್ರಿಕ್ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿರುವುದು ಸುಳ್ಳಲ್ಲ.


Click it and Unblock the Notifications











