ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪತ್ನಿಗೆ ಕೊರೊನಾ ವೈರಸ್ ಸೋಂಕು ದೃಢ
ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಪತ್ನಿಯಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Recommended Video
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಮಲತಾ ಅವರು ರಾಕ್ ಲೈನ್ ವೆಂಕಟೇಶ್ ಹಾಗೂ ಅನೇಕರ ಜತೆ ಸಭೆ ನಡೆಸಿದ್ದರು. ಇದರಿಂದ ರಾಕ್ ಲೈನ್ ಅವರಿಗೂ ಸೋಂಕು ತಗುಲಿದೆ ಎಂಬ ಸುದ್ದಿ ಹಬ್ಬಿತ್ತು.
ರಾಕ್ ಲೈನ್ ವೆಂಕಟೇಶ್ ಅವರಿಗೆ ಸೋಂಕು ಇದೆ ಎನ್ನುವುದನ್ನು ಅವರ ಮಗ ಯತೀಶ್ ನಿರಾಕರಿಸಿದ್ದಾರೆ. ತಾಯಿಗೆ ಸೋಂಕು ಇರುವುದು ದೃಢಪಟ್ಟಿದೆ. ತಂದೆ ಹೋಮ್ ಕ್ವಾರೆಂಟೈನ್‌ನಲ್ಲಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುಮಲತಾ ಅವರಿಗೆ ಸೋಂಕು ದೃಢಪಟ್ಟ ಬಳಿಕ ರಾಕ್ ಲೈನ್ ವೆಂಕಟೇಶ್ ಅವರು ಆಸ್ಪತ್ರೆಗೆ ದಾಖಲಾಗಿ ತಪಾಸಣೆಗೆ ಒಳಪಟ್ಟಿದ್ದರು ಎನ್ನಲಾಗಿದೆ. ಅವರ ಮತ್ತೊಬ್ಬ ಮಗ ಅಭಿಲಾಷ್ ಸ್ವತಃ ವೈದ್ಯರಾಗಿದ್ದು ಅವರ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಮಹಾಲಕ್ಷ್ಮಿ ಲೇಔಟ್‌ನ ಮನೆಯಲ್ಲಿ ಕ್ವಾರೆಂಟೈನ್ ಆಗಿದ್ದಾರೆ.


Click it and Unblock the Notifications











