Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಾಜಕೀಯ ರಣಾಂಗಣವಾದ ರಂಗಾಯಣ: 144 ನಿಷೇಧಾಜ್ಞೆ ಜಾರಿ!
ನಾಟಕ, ಕಲೆ, ಸಾಹಿತ್ಯದ ನೆಲೆಯಾಗಬೇಕಿದ್ದ ಮೈಸೂರು ರಂಗಾಯಣ ಕೆಲವರಿಂದಾಗಿ ರಾಜಕೀಯದ ರಣಾಂಗಣವಾಗಿ ಮಾರ್ಪಟ್ಟಿದೆ. ರಂಗಾಯಣವನ್ನು ರಾಜಕೀಯ ಹಿತಾಸಕ್ತಿಗಳಿಗೆ ಬಳಸಿಕೊಳ್ಳುತ್ತಿರುವುದರ ಪರಿಣಾಮ ಇದೀಗ ಕಲಾಸಕ್ತರು ನೆರೆಯಬೇಕಿದ್ದ ರಂಗಾಯಣದ ಸುತ್ತ ಪೊಲೀಸರು ಬಂದೂಕು ಹಿಡಿದು ನಿಲ್ಲುವಂತಾಗಿದೆ.
ಆಗಿರುವುದಿಷ್ಟು, 'ಸಾಂಬಶಿವ ಪ್ರಹಸನ' ಎಂಬ ನಾಟಕದಲ್ಲಿ ಉದ್ದೇಶಪೂರ್ವಕವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರು ಎಳತಂದು ಅವಹೇಳನೆ ಮಾಡಲಾಗಿದೆ. ಇದನ್ನು ಖಂಡಿಸಿ ಸ್ವಾಭಿಮಾನಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ.
ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರನ್ನು ವಜಾ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸೇರಿದಂತೆ ನಾನಾ ಸಂಘಟನೆಗಳ ಸದಸ್ಯರು 'ರಂಗಾಯಣ'ಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಸರಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿ ಬಳಿಯೇ ತಡೆದು ವಾಪಾಸ್ ಕಳುಹಿಸಿದರು. ಯಾವುದೇ ಅನಾಹುತವಾಗದಂತೆ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.

ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಕ್ತಾರ ಎಂ.ಲಕ್ಷ್ಮಣ್, ಪ್ರಗತಿಪರ ಚಿಂತಕ ಟಿ.ಗುರುರಾಜ್, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್ ಸೇರಿದಂತೆ ಇತರರು ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿರುವ ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

144 ಸೆಕ್ಷನ್ ಜಾರಿಗೊಳಿ ಆದೇಶ
ಮೈಸೂರು ವಿಶ್ವವಿದ್ಯಾಲಯ ಕ್ರಾರ್ಡ್ ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರದ ಆವರಣದಲ್ಲಿರುವ ರಂಗಾಯಣಕ್ಕ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ರಸ್ತೆಯುದ್ದಕ್ಕೂ ತಮಟೆ ಬಡಿಕೊಂಡು ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಡಿಸಿ ಕಚೇರಿ ಕಮಾನು ಗೇಟ್ ಬಳಿಯೇ ಬ್ಯಾರಿಕೇಡ್ ಮುಂದೆ ಸಾಕಷ್ಟು ಕಾರ್ಯಕರ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ರಂಗಾಯಣದ 200 ಮೀಟರ್ ಸುತ್ತ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪೊಲೀಸ್ ಆಯುಕ್ತ ರಮೇಶ್ ಬಾನೋಟ್ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಡಾ.ಪುಷ್ಪಾ ಅಮರನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಹಿಂದುಳಿದ ಜಾಗೃತ ವೇದಿಕೆಗಳ ಅಧ್ಯಕ್ಷ ಕೆ.ಎಸ್.ಶಿವರಾಂ ಸೇರಿದಂತೆ ಇತರರು ಇದ್ದರು.

ಸಾಂಬಶಿವ ಪ್ರಹಸನ’ ನಾಟಕ ಪ್ರದರ್ಶನ
ರಂಗಾಯಣದ ಭೂಮಿಗೀತದಲ್ಲಿ ನಾಗರತ್ನಮ್ಮ ಕಾರ್ಯಾಗಾರ ವಿದ್ಯಾರ್ಥಿಗಳು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಚಂದ್ರಶೇಖರ ಕಂಬಾರ ರಚನೆಯ ಸಾಂಬಶಿವ ಪ್ರಹಸನ' ನಾಟಕ ಪ್ರಸ್ತುತಪಡಿಸಿದ್ದರು. ಈ ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆರೋಪಿಸಿತ್ತು. ಅನ್ನ ಭಾಗ್ಯ, ಕಂಕಣ ಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ನೀಡಿ ಜನರನ್ನು ಸೋಮಾರಿ ಮಾಡಲಾಗಿದೆ ಎಂಬ ಅಂಶವನ್ನು ನಾಟಕದಲ್ಲಿ ತೋರಿಸಲಾಗಿತ್ತು.

ದೂರು ನೀಡಿದ ಚಂದ್ರಶೇಖರ ಕಂಬಾರ
ಅಲ್ಲದೆ, ಕೆಡಿ ಅಂಕಲ್ ಎಂಬ ಪಾತ್ರ ಸೃಷ್ಟಿಸಿ ಡಿ.ಕೆ.ಶಿವಕುಮಾರ್ ಅವರನ್ನು ಅವಮಾನಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಮಣ್ಯ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಸ್ವತಃ ಚಂದ್ರಶೇಖರ ಕಂಬಾರ ಅವರು, ನನ್ನ ನಾಟಕ ಯಾವುದೇ ವ್ಯಕ್ತಿಯನ್ನು ಕುರಿತು ಬರೆದಿಲ್ಲ. ಈ ನಾಟಕ ಮಾಡಲು ರಂಗಾಯಣವಾಗಲಿ, ಅದರ ನಿರ್ದೇಶಕರಾಗಲಿ ನನ್ನ ಅನುಮತಿ ಪಡೆದಿಲ್ಲ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು.