For Quick Alerts
  ALLOW NOTIFICATIONS  
  For Daily Alerts

  'ಕೆ.ಜಿ.ಎಫ್' ಟಿಕೆಟ್ ಸಿಕ್ಕಿಲ್ಲವೆಂದು ಮೈಸೂರಿನಲ್ಲಿ ಪ್ರತಿಭಟನೆ

  By ಯಶಸ್ವಿನಿ ಎಂ.ಕೆ
  |
  KGF Kannada Movie :ಕೆಜಿಎಫ್ ಟಿಕೆಟ್ ಸಿಕ್ಕಿಲ್ಲ ಎಂದು ಯಶ್ ಫ್ಯಾನ್ಸ್ ಮೈಸೂರಿನಲ್ಲಿ ಪ್ರತಿಭಟನೆ|Oneindia Kannada

  ಮೈಸೂರು ಡಿಸೆಂಬರ್ 21 : ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ.ಎಫ್' ಚಿತ್ರ ಬಿಡುಗಡೆಗೊಂಡಿದೆ. ಇತ್ತ ಥಿಯೇಟರ್ ಗಳಲ್ಲಿ ಟಿಕೆಟ್ ಸಿಗದೇ ಅಭಿಮಾನಿಗಳು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರಿನ ಗರುಡಾ ಮಾಲ್ ನಲ್ಲಿ ನಡೆದಿದೆ.

  'ಕೆ.ಜಿ.ಎಫ್' ಚಿತ್ರ ವೀಕ್ಷಣೆಗಾಗಿ ಯುವಕರ ಗುಂಪು ಕಳೆದ ರಾತ್ರಿಯಿಂದಲೇ ಕಾಯುತ್ತಿತ್ತು. ಗುರುವಾರ ಮಧ್ಯಾಹ್ನ ಕೇವಲ 20 ಟಿಕೆಟ್ ಗಳನ್ನು ಮಾತ್ರ ಕೊಟ್ಟು ಆನ್ ಲೈನ್ ನಲ್ಲಿ ಸೋಲ್ಡ್ ಔಟ್ ಆಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಅಭಿಮಾನಿಗಳು ನಮಗೆ ಟಿಕೆಟ್ ಬೇಕೇ ಬೇಕು ಎಂದು ಗದ್ದಲ ಎಬ್ಬಿಸಿದ್ದಾರೆ. ಇದರಿಂದ ಕೆಲಕಾಲ ಮಾಲ್ ನಲ್ಲಿ ಗೊಂದಲದ ವಾತಾವರಣ ಉಂಟಾಯಿತು.

  ಫಸ್ಟ್ ಶೋ ಮುಗೀತು, ಫಸ್ಟ್ ರಿವ್ಯೂ ಹೊರಬಿತ್ತು: ರಾಕಿ ಭಾಯ್ ಗೆ ಪ್ರೇಕ್ಷಕರ ಸಲಾಂ.!

  ತಕ್ಷಣ ಸ್ಥಳಕ್ಕಾಗಮಿಸಿದ ದೇವರಾಜ ಠಾಣೆ ಪೊಲೀಸರು ಅಭಿಮಾನಿಗಳನ್ನು ಸಮಾಧಾನಗೊಳಿಸಲು ಯತ್ನಿಸಿದ್ದು, ಯುವಕರು ಟಿಕೆಟ್ ಸಿಗುವವರೆಗೂ ಕೌಂಟರ್ ಬಿಟ್ಟು ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ, ಇಲ್ಲಿ ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಅದರ ಬದಲಿಗೆ ನಮ್ಮ ಕನ್ನಡದ 'ಕೆ.ಜಿ.ಎಫ್' ಪ್ರದರ್ಶನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಯುವಕರು ಒತ್ತಾಯಿಸಿದರು.

  'ಕೆ.ಜಿ.ಎಫ್' ಫಸ್ಟ್ ಹಾಫ್ ವಿಮರ್ಶೆ: ಇಂಟರ್ವೆಲ್ ವರೆಗೂ ಚಿಂದಿ ಗುರು.!

  'ಕೆ.ಜಿ.ಎಫ್' ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆ ಮೈಸೂರಿನಲ್ಲಿ ಯಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕನ್ನಡ ಚಿತ್ರರಂಗ ಉತ್ತುಂಗಕ್ಕೇರುವಾಗ ಈ ರೀತಿಯ ಷಡ್ಯಂತ್ರಗಳು ನಡೆಯುತ್ತಿವೆ. ಬಹು ನಿರೀಕ್ಷಿತ 'ಕೆ.ಜಿ.ಎಫ್' ಚಿತ್ರ ಬಿಡುಗಡೆಗೆ ಅವಕಾಶ ನೀಡಿ'' ಎಂದು ಯಶ್ ಅಭಿಮಾನಿಗಳಿಂದ ಫಿಲ್ಮ್ ಚೇಂಬರ್ ಗೆ ಮನವಿ ಸಲ್ಲಿಸಿದ್ದಾರೆ.

  English summary
  Protest in Garuda Mall Mysuru for tickets of Kannada Movie KGF.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X