For Quick Alerts
  ALLOW NOTIFICATIONS  
  For Daily Alerts

  'ಫ್ಯಾಮಿಲಿ ಪ್ಯಾಕ್' ಸೆಟ್‌ಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್ ದಂಪತಿ

  |

  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ಸಂಸ್ಥೆಯ ಮೂಲಕ ತಯಾರಾಗುತ್ತಿರುವ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಸಿನಿಮಾದ ಶೂಟಿಂಗ್ ಬಹುತೇಕ ಮುಗಿದಿದೆ.

  ಒಂದು ಹಾಡು ಮತ್ತು ಒಂದು ಆಕ್ಷನ್ ದೃಶ್ಯ ಮಾತ್ರ ಬಾಕಿ ಉಳಿದಿದ್ದು, ಇನ್ನುಳಿದಂತೆ ಸಂಪೂರ್ಣವಾಗಿ ಚಿತ್ರೀಕರಣ ಮುಗಿದಿದೆ. ಈ ಹಿನ್ನೆಲೆಯಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಪತ್ನಿ ಅಶ್ವಿನಿ ದಂಪತಿ ಶೂಟಿಂಗ್ ಸೆಟ್‌ಗೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭಹಾರೈಸಿದರು.

  ಪುನೀತ್‌ ಸರಳತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಂಚಮಸಾಲಿ ಸ್ವಾಮೀಜಿ

  ಈ ವೇಳೆ ನಿರ್ದೇಶಕ ಅರ್ಜುನ್ ಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್, ಸಂಭಾಷಣೆಕಾರ ಮಾಸ್ತಿ ಹಾಗೂ ಕಲಾವಿದರಾದ ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್, ರಂಗಾಯಣ, ರಘು, ಅಚ್ಯುತ್ ಕುಮಾರ್, ಸಹಿ ಕಹಿ ಚಂದ್ರು, ಪದ್ಮಜಾರಾವ್, ಶರ್ಮಿತಾ ಗೌಡ ಸೆಟ್‌ನಲ್ಲಿದ್ದರು.

  ಹೆಸರಿಗೆ ತಕ್ಕಂತೆ ಇದು ಫ್ಯಾಮಿಲಿ ಎಂಟರ್‌ಟೈನ್ ಕಥೆ. ಪಿಆರ್‌ಕೆ ಬ್ಯಾನರ್‌ನಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಟ ಲಿಖಿತ್ ಶೆಟ್ಟಿ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.

  ಈ ಹಿಂದೆ 'ಸಂಕಷ್ಟಕರ ಗಣಪತಿ' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ಅರ್ಜುನ್ ಕುಮಾರ್ ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಿಸಿದ್ದಾರೆ. ಉದಯಲೀಲ ಅವರ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ.

  ಈ ಸಾಧನೆ ಮಾಡಿದ ಮೊದಲ ಕನ್ನಡಿಗ ಸುದೀಪ್ | Filmibeat Kannada
  English summary
  Puneeth Rajkumar along with wife Ashwini visits the sets of Family Pack Film made under PRK Productions.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X