Don't Miss!
- News
Amul Milk Prices: ಫೆ. 3 ರಿಂದ ಅಮುಲ್ ಹಾಲಿನ ದರ ಹೆಚ್ಚಳ, 10 ತಿಂಗಳಲ್ಲಿ 12 ರೂ. ಏರಿಕೆ
- Finance
Matsya Sampada: ಪಿಎಂ ಮತ್ಸ್ಯ ಸಂಪದದಡಿ ಹೊಸ ಯೋಜನೆ ಜಾರಿ, ಸಂಪೂರ್ಣ ಮಾಹಿತಿ
- Sports
ರಣಜಿ ಟ್ರೋಫಿ: ಉತ್ತರಾಖಂಡ್ ವಿರುದ್ಧ ಗೆಲುವಿನ ಸನಿಹದಲ್ಲಿ ಕರ್ನಾಟಕ: Live ಸ್ಕೋರ್
- Automobiles
'ವಂದೇ ಮೆಟ್ರೋ' ಬರುತ್ತೆ: ಪ್ರಧಾನಿ ಮೋದಿ ಸರ್ಕಾರದಿಂದ ಘೋಷಣೆ.. ಇಲ್ಲಿದೆ ವಿಶೇಷ ಮಾಹಿತಿ
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ದಿಢೀರ್ ಇಳಿಕೆ; ಭಾರೀ ಉಳಿತಾಯ ಪಕ್ಕಾ!
- Lifestyle
Horoscope Today 3 Feb 2023: ಶುಕ್ರವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಶ್ವಿನಿ ಪುನೀತ್ ರಾಜ್ ಕುಮಾರ್‌ರಿಂದ ಅಪ್ಪು ಆತ್ಮಚರಿತ್ರೆ 'ನೀನೇ ರಾಜಕುಮಾರ್' 4ನೇ ಆವೃತ್ತಿ ರಿಲೀಸ್!
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಪಾರ ಅಭಿಮಾನಿಗಳನ್ನು ಅಗಲಿ ವರ್ಷ ಕಳೆದಿದೆ. ಅವರನ್ನು ಕಳೆದುಕೊಂಡ ನೋವಿನಿಂದ ಕುಟುಂಬ ಹಾಗೂ ಅಭಿಮಾನಿಗಳು ಇನ್ನೂ ಹೊರಬಂದಿಲ್ಲ. ಅಪ್ಪು ಸಿನಿಮಾ ಹಾಗೂ ಸಮಾಜಮುಖಿ ಕೆಲಸಗಳನ್ನು ಇನ್ನೂ ಅವರೂ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.
ಅಪ್ಪು ಅಗಲಿದ ಬಳಿಕ ಪತ್ರಕರ್ತ ಡಾ.ಶರಣು ಹುಲ್ಲೂರು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಆತ್ಮ ಚರಿತ್ರೆಯನ್ನು ಪುಸ್ತಕರೂಪದಲ್ಲಿ ತಂದಿದ್ದರು. ಅಪ್ಪು ಬಯೋಗ್ರಫಿ 'ನೀನೇ ರಾಜಕುಮಾರ' ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ.
'ನೀನೇ ರಾಜಕುಮಾರ' ಪುಸ್ತಕ ಕಳೆದ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಾಣುತ್ತಿದೆ. ಇತ್ತೀಚೆಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ನಾಲ್ಕನೇ ಆವೃತ್ತಿಯನ್ನು ಪಿಆಕ್‌ಕೆ ಆಫೀಸ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಈ ಬಯೋಗ್ರಫಿ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.
'ನೀನೇ ರಾಜಕುಮಾರ' 15 ಮಾರ್ಚ್ 2022ರಂದು ಮೊದಲ ಬಾರಿಗೆ ಬಿಡುಗಡೆಯಾಗಿತ್ತಿ. ಈ ಪುಸ್ತಕವನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿದ್ದರು. ಆ ಬಳಿಕ ಈ ಪುಸ್ತಕ ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಲಿಸ್ಟ್‌ನಲ್ಲಿತ್ತು. ಬಿಡುಗಡೆಯಾದಲ್ಲಿಂದ ಇಲ್ಲಿವರೆಗೂ ಸತತವಾಗಿ ನಾಲ್ಕು ಮುದ್ರಣಗಳನ್ನು ಕಂಡಿದೆ.

'ನೀನೇ ರಾಜಕುಮಾರ' ಪುಸ್ತಕದ ವಿಶೇಷತೆ ಎಂದರೆ, ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟ ಕಂಡ ಪುಸ್ತಕ ಇದೇ ಆಗಿದೆ. ಈ ಪುಸ್ತಕದಲ್ಲಿ ಪುನೀತ್ ಅವರ ಬಾಲ್ಯದಿಂದ ಹಿಡಿದು ಅವರ ನಿಧನದವರೆಗೂ ಲೇಖಕರು ಅಪ್ಪು ಬದುಕನ್ನು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ.