ಹ್ಯಾಪಿ ಬರ್ತಡೇ ಪುನೀತ್ ರಾಜ್ ಕುಮಾರ್: ಹುಟ್ಟುಹಬ್ಬದ ಸಂಭ್ರಮದಲ್ಲಿ ಪವರ್ ಸ್ಟಾರ್

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ನಟ ಪುನೀತ್ ಈ ವರ್ಷ ಹುಟ್ಟುಹಬ್ಬವನ್ನು ಸರಳವಾಗಿ ಕುಟುಂಬದವರ ಜೊತೆ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.

ಕೊರೊನಾ ಆತಂಕದ ಕಾರಣ ಈ ವರ್ಷವೂ ಅಭಿಮಾನಿಗಳಿಗೆ ಮನೆಯ ಬಳಿ ಬರಬೇಡಿ ಎಂದು ಅಪ್ಪು ಮನವಿ ಮಾಡಿಕೊಂಡಿದ್ದರು. ಹುಟ್ಟುಹಬ್ಬದ ದಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ, ಮನೆಯಲ್ಲಿ ಇರಲ್ಲ ಎಂದು ಇತ್ತೀಚಿಗೆ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದರು.

ಹಾಗಾಗಿ ಅಭಿಮಾನಿಗಳು ದೂರದ ಊರಿನಿಂದಲೇ ಸಾಮಾಜಿಕ ಜಾಲತಾಣದ ಮೂಲಕವೇ ಶುಭಾಶಯ ಕೋರುತ್ತಿದ್ದಾರೆ. ಪವರ್ ಸ್ಟಾರ್ ಹುಟ್ಟುಹಬ್ಬ ಅಂದ್ಮೇಲೆ ಅಭಿಮಾನಿಗಳ ದಂಡೇ ಸೇರಿರುತಿತ್ತು. ರಾತ್ರಿಯೆಲ್ಲ ಪುನೀತ್ ಮನೆ ಮುಂದೆ ಅಭಿಮಾನಿಗಳು ಕ್ಯೂ ನಿಂತಿರುತ್ತಿದ್ದರು. ಆದರೆ ಕಳೆದ ವರ್ಷ ಮತ್ತು ಈ ವರ್ಷ ಕೊರೊನಾದಿಂದ ಅಭಿಮಾನಿಗಳು ನೆಚ್ಚಿನ ನಟನನ್ನು ಭೇಟಿ ಮಾಡಿ ಶುಭಾಶಯ ಕೋರಲು ಸಾಧ್ಯವಾಗುತ್ತಿಲ್ಲ.

Puneeth Rajkumar celebrating 47th birthday with his family

ಇಂದು ಹುಟ್ಟುಹಬ್ಬದ ಪ್ರಯುಕ್ತ ಅಪ್ಪು ಅಭಿನಯದ ಬಹುನಿರೀಕ್ಷೆಯ ಜೇಮ್ಸ್ ಸಿನಿಮಾದ ಪೋಸ್ಟರ್ ರಿಲೀಸ್ ಆಗುತ್ತಿದೆ. ಜೊತೆಗೆ ನಿರ್ದೇಶಕ ದಿನಕರ್ ತೂಗುದೀಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದ ಬಗ್ಗೆ ಅಧಿಕೃತವಾಗಿ ಬಹಿರಂಗ ಪಡಿಸಿದ್ದಾರೆ.

ಇನ್ನು ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈಗಾಗಲೇ ಚಿತ್ರದ ಪ್ರಮೋಷನ್ ಕೆಲಸಗಳು ನಡೆಯುತ್ತಿದ್ದು, ಪ್ರತಿ ಜಿಲ್ಲೆಗೂ ಭೇಟಿ ನೀಡಿ ಯುವ ಸಂಭ್ರಮ ಮಾಡಲು ಸಿನಿಮಾತಂಡ ನಿರ್ಧರಿಸಿದೆ.

Recommended Video

ಅಪ್ಪ ಯಾವತ್ತು ನನ್ನ ಹೆಸರಿಡಿದು ಕರೆದೆ ಇಲ್ಲ | Puneeth Rajkumar | Filmibeat Kannada

More from Filmibeat

English summary
Power Star Puneeth Rajkumar celebrating 47th birthday with his family.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X