'ಗಣೇಶ'ನ ಮುಂದೆ ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಅಪ್ಪು-ರಾಘಣ್ಣ

Recommended Video

ಗಣೇಶ ಉತ್ಸವದಲ್ಲಿ ಕುಣಿದು ಕುಪ್ಪಳಿಸಿದ ಪುನೀತ್ ರಾಜ್ ಕುಮಾರ್ ರಾಘವೇಂದ್ರ ರಾಜ್ ಕುಮಾರ್ | Filmibeat Kannada

ದೇಶಾದ್ಯಂತ ಗಣೇಶ ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಿನಿಮಾ ತಾರೆಯರು ಕೂಡ ಈ ಸಂಭ್ರಮದಿಂದ ಹೊರತಾಗಿಲ್ಲ. ರಿಯಲ್ ಸ್ಟಾರ್ ಉಪೇಂದ್ರ, ನಟಿ ಮೇಘನಾ ರಾಜ್, ಜೋಗಿ ಪ್ರೇಮ್ ಹೀಗೆ ಸ್ಯಾಂಡಲ್ ವುಡ್ ನ ಸ್ಟಾರ್ ಕಲಾವಿದರು ಮನೆಯಲ್ಲಿ ಗಣೇಶನ ಕೂರಿಸಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗಣೇಶನ ಉತ್ಸವವನ್ನು ಮತ್ತಷ್ಟು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ಹೌದು, ಸದಾಶಿವನಗರದಲ್ಲಿ ಕೂರಿಸಲಾಗಿದ್ದ ಗಣೇಶನ ಎದುರು ಅಪ್ಪು ತಮಟೆ ವಾದ್ಯಕ್ಕೆ ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.

puneeth rajkumar dance in ganesh festival

ಸದಾಶಿವನಗರ ಫ್ರೆಂಡ್ಸ್ ಅಸೋಸಿಯೇಶನ್ ಹುಡುಗರು ಸೇರಿ ಗಣೇಶನನ್ನ ಕೂರಿಸಿದ್ದಾರೆ. ನಿನ್ನೆ ರಾತ್ರಿ ಗಣೇಶ ವಿಸರ್ಜನೆ ವೇಳೆ ದೊಡ್ಮನೆ ಹುಡುಗನನ್ನ ಆಹ್ವಾನಿಸಲಾಗಿದೆ. ಪೂಜೆಗೆ ಬಂದ ಅಪ್ಪು, ಸ್ನೇಹಿತರ ಜೊತೆಯಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಪುನೀತ್ ರಾಜ್ ಕುಮಾರ್ ಅವರ ಜೊತೆಯಲ್ಲಿ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಹೆಜ್ಜೆ ಹಾಕಿದ್ದು ಮತ್ತಷ್ಟು ವಿಶೇಷವಾಗಿತ್ತು. ಅಣ್ಣ-ತಮ್ಮ ಇಬ್ಬರು ತಮಟೆ ವಾದ್ಯಕ್ಕೆ ಕುಣಿದು ಕುಪ್ಪಳಿಸಿದ್ದಾರೆ.

ಇನ್ನುಳಿದಂತೆ ಪವನ್ ಒಡೆಯರ್ ನಿರ್ದೇಶನದ 'ನಟಸಾರ್ವಭೌಮ' ಚಿತ್ರದಲ್ಲಿ ಪವರ್ ಸ್ಟಾರ್ ನಟಿಸುತ್ತಿದ್ದಾರೆ. 'ಅಮ್ಮನ ಮನೆ' ಎಂಬ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

More from Filmibeat

English summary
Puneeth Rajkumar and Raghavendra Rajkumar Dance in Sadashivanagar Ganesha Habba Celebration 2018.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X