ಆಗಸ್ಟ್‌ನಲ್ಲಿ ದೇವರ ರೂಪದಲ್ಲಿ ಬರುತ್ತಿದ್ದಾರೆ ಪುನೀತ್ ರಾಜ್‌ಕುಮಾರ್!

ಪುನೀತ್ ರಾಜ್‌ಕುಮಾರ್ ಪೂರ್ಣ ಪ್ರಮಾಣದ ನಾಯಕ ನಟನಾಗಿ ನಟಿಸಿದ ಕೊನೆಯ ಕನ್ನಡ ಸಿನಿಮಾ 'ಜೇಮ್ಸ್' ಅನ್ನು ಅದ್ಭುತವಾಗಿ ಗೆಲ್ಲಿಸಿದ್ದಾರೆ ಜನ. ಆದರೆ ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆ ಸಿನಿಮಾ ಇದಲ್ಲ.

ಪುನೀತ್ ರಾಜ್‌ಕುಮಾರ್ ನಟಿಸಿದ ಕೊನೆಯ ಸಿನಿಮಾ 'ಲಕ್ಕಿ ಮ್ಯಾನ್' ಈ ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗುತ್ತಿದೆ. 'ಜೇಮ್ಸ್' ನಂತರ ಈಗ ಮತ್ತೊಮ್ಮೆ ಪುನೀತ್ ರಾಜ್‌ಕುಮಾರ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಬಹುದಾಗಿದೆ ಅಭಿಮಾನಿಗಳು.

ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಪ್ರಭುದೇವಾ ಜೊತೆ ಸ್ಟೆಪ್ ಹಾಕಿರುವ ಅಪ್ಪು

ಪ್ರಭುದೇವಾ ಜೊತೆ ಸ್ಟೆಪ್ ಹಾಕಿರುವ ಅಪ್ಪು

'ಲಕ್ಕಿ ಮ್ಯಾನ್' ಸಿನಿಮಾದಲ್ಲಿ ಅಪ್ಪು ಜೊತೆ ತಮಿಳು ನಟ ಪ್ರಭುದೇವಾ ಕೂಡ ನಟಿಸಿದ್ದು, ಹಾಡೊಂದರಲ್ಲಿ ಇವರಿಬ್ಬರೂ ಸಖತ್ ಸ್ಟೆಪ್ ಹಾಕಿದ್ದಾರೆ. ನಾನಾ ನೀನಾ ಎನ್ನುವ ಹಾಗೆ ಇಬ್ಬರೂ ಸೇರಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ಭರ್ಜರಿ ಡ್ಯಾನ್ಸ್ ಮಾಡಿರುವ ಈ ಹಾಡಿನ ಬಗ್ಗೆ ಭಾರಿ ನಿರೀಕ್ಷೆ ಇದೆ. ಜಾನಿ ಮಾಸ್ಟರ್ ಅವರ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಬೆಂಗಳೂರಿನಲ್ಲೇ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ಇದೇ ಮೊದಲಬಾರಿಗೆ ಪುನೀತ್ ರಾಜಕುಮಾರ್ ಹಾಗೂ ಪ್ರಭುದೇವಾ ಅವರು ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರಲ್ಲದೆ, ಅದ್ಭುತವಾದ ಹಾಡೊಂದರಲ್ಲಿ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ನಾಗೇಂದ್ರ ಪ್ರಸಾದ್ ನಿರ್ದೇಶನ

ನಾಗೇಂದ್ರ ಪ್ರಸಾದ್ ನಿರ್ದೇಶನ

ಇನ್ನು ಈ ಚಿತ್ರವನ್ನು ಮೊದಲ ಬಾರಿಗೆ ಪ್ರಭುದೇವಾ ಸಹೋದರ ನಾಗೇಂದ್ರ ಪ್ರಸಾದ್ ಅವರು ನಿರ್ದೇಶಿಸಿದ್ದಾರೆ. ಈಗಾಗಲೇ ತನ್ನ ಪೋಸ್ಟ್ ಪ್ರೊಡಕ್ಷನ್ ಕೊಲಸಗಳನ್ನೆಲ್ಲಾ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಲಕ್ಕಿಮ್ಯಾನ್ ಚಿತ್ರವನ್ನು ಬರುವ ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ನಿರ್ಮಾಪಕರು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ನಾಗೇಂದ್ರ ಪ್ರಸಾದ್ ಈ ಹಿಂದೆ 'ಮನಸೆಲ್ಲ ನೀನೆ', 'ಚಿತ್ರಾ', '123' ಸೇರಿದಂತೆ ಇನ್ನೂ ಕೆಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

ತಮಿಳಿನ 'ಓ ಮೈ ಕಡವುಲೆ' ರೀಮೇಕ್

ತಮಿಳಿನ 'ಓ ಮೈ ಕಡವುಲೆ' ರೀಮೇಕ್

ತಮಿಳಿನ 'ಓ ಮೈ ಕಡವುಲೆ' ಚಿತ್ರದ ಎಳೆಯನ್ನಿಟ್ಟುಕೊಂಡು ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ಒಂದು ಅದ್ಭುತವಾದ ಫ್ಯಾಂಟಸಿ ಡ್ರಾಮಾ ಕಥಾಹಂದರವನ್ನು 'ಲಕ್ಕಿ ಮ್ಯಾನ್' ಚಿತ್ರದಲ್ಲಿ ನಿರೂಪಿಸಿದ್ದಾರೆ. ನಿರ್ಮಾಪಕ ಕಾಮರಾಜ್ ಅವರು ತಮಿಳಲ್ಲಿ ಹಲವಾರು ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕನ್ನಡದಲ್ಲಿ ಇದು ಅವರ ಮೊದಲ ಚಿತ್ರ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ.

'ಗಂಧದ ಗುಡಿ' ಸೆಪ್ಟೆಂಬರ್ ತಿಂಗಳಲ್ಲಿ ತೆರೆಗೆ ಬರಲಿದೆ

'ಗಂಧದ ಗುಡಿ' ಸೆಪ್ಟೆಂಬರ್ ತಿಂಗಳಲ್ಲಿ ತೆರೆಗೆ ಬರಲಿದೆ

ಪುನೀತ್ ರಾಜ್‌ಕುಮಾರ್ ನಿಧನದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಎರಡನೇ ಸಿನಿಮಾ ಇದು. 'ಜೇಮ್ಸ್' ಸಿನಿಮಾದಲ್ಲಿ ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಪ್ಪು ನಟಿಸಿದ್ದರು. ಆದರೆ 'ಲಕ್ಕಿ ಮ್ಯಾನ್' ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಷ್ಟೆ ನಟಿಸಿದ್ದಾರೆ. ಅದೂ ದೇವರಾಗಿ. 'ಲಕ್ಕಿ ಮ್ಯಾನ್' ಹೊರತಾಗಿ ಪುನೀತ್ ರಾಜ್‌ಕುಮಾರ್ ಅವರ ಇನ್ನೊಂದು ಮಾಸ್ಟರ್ ಪೀಸ್ ತೆರೆಗೆ ಬರಬೇಕಿದೆ ಅದುವೇ 'ಗಂಧದ ಗುಡಿ' ಇದು ಸಿನಿಮಾ ಅಲ್ಲ ಬದಲಿಗೆ ಡಾಕ್ಯುಸಿನಿಮಾ ಆಗಿದೆ. ಇದರಲ್ಲಿ ಪುನೀತ್ ರಾಜ್‌ಕುಮಾರ್ ಅವರು ಸ್ವತಃ ಪುನೀತ್ ರಾಜ್‌ಕುಮಾರ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

More from Filmibeat

English summary
Puneeth Rajkumar Darling Krishna's movie Lucky Man releasing in August. Puneeth Rajkumar acted as god in the movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X