ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿಂದಿಸಿದ ಕಿಡಿಗೇಡಿ; ಗೃಹ ಮಂತ್ರಿ ಜಿ ಪರಮೇಶ್ವರ್‌ಗೆ ಮನವಿ ನೀಡಲು ನಿರ್ಧಾರ!
ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಕಿಡಗೇಡಿ ನಿಂದನೆ ಹಿನ್ನೆಲೆ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಿಂದಿಸಿದವನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕೂಡ ಅಪ್ಪು ಪತ್ನಿಯ ಬೆಂಬಲಕ್ಕೆ ನಿಂತಿದ್ದಾರೆ. ಇನ್ನೊಂದು ರಾಜ್ಯದ ಕೆಲವೆಡೆ ಪುನೀತ್ ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿದ್ದಾರೆ.
ಕನ್ನಡ ಚಿತ್ರರಂಗದ ಗಣ್ಯರು ಕೂಡ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ನವರಸ ನಾಯಕ ಜಗ್ಗೇಶ್, ಅನುಶ್ರೀ, ಪ್ರಥಮ್ ಸೇರಿದಂತೆ ಸಿನಿಮಾರಂಗದ ಗಣ್ಯರು ಅಪ್ಪು ಪತ್ನಿಯ ಬೆಂಬಲಕ್ಕೆ ಬಂದಿದ್ದಾರೆ. ಇದೇ ಬೆನ್ನಲ್ಲೇ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿ ರಾಜ್ಯದ ಗೃಹ ಮಂತ್ರಿ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡುವುದಕ್ಕೆ ನಿರ್ಧರಿಸಿದ್ದಾರೆ.

ರಾಜವಂಶದ ಅಭಿಮಾನಿಗಳು ಕರೆ ನೀಡಿದ್ದು, ನಾಳೆ (ಏಪ್ರಿಲ್ 7) ಗೃಹಮಂತ್ರಿ ಜಿ. ಪರಮೇಶ್ವರ ಅವರ ಸದಾಶಿವನಗರದ ಮನೆಯಲ್ಲಿ ಭೇಟಿ ಮಾಡಿ ಮನವಿ ನೀಡಲು ನಿರ್ಧರಿಸಿದ್ದಾರೆ. ಬೆಳಗ್ಗೆ 8.30ಕ್ಕೆ ಮನೆ ಮುಂದೆ ಸೇರಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಸಮಸ್ತ ರಾಜವಂಶದ ಅಭಿಮಾನಿಗಳಿಗೆ ಕರೆ ನೀಡಲಾಗಿದೆ.
"ರಾಜ್ಯದ ಸಮಸ್ತ ರಾಜವಂಶ ಅಭಿಮಾನಿಗಳಿಗೆ ತಿಳಿಸುವುದೆನೆಂದರೆ ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಡಾ.ರಾಜ್ ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡುತ್ತಿದ್ದು ಮತ್ತು ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಬಗೆಗಿನ ಖಂಡನೀಯ ಪೋಸ್ಟ್ ಹಾಕಿರುವ ಆರೋಪಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ರಾಜ್ಯದ ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಈ ಮನವಿ ಪತ್ರ ಸಲ್ಲಿಸಲು ಸಮಸ್ತ ರಾಜವಂಶದ ಅಭಿಮಾನಿಗಳು ಆಗಮಿಸಬೇಕೆಂದು ಕೇಳಿಕೊಳ್ಳುತ್ತೇವೆ." ಎಂದು ಪೋಸ್ಟ್ ಅನ್ನು ಶೇರ್ ಮಾಡಲಾಗಿದೆ.
ಕಳೆದ ಕೆಲವು ತಿಂಗಳಿನಿಂದ ಪುನೀತ್ ರಾಜ್‌ಕುಮಾರ್ ಹಾಗೂ ಅವರ ಕುಟುಂಬವನ್ನು ಸೋಶಿಯಲ್ ಮೀಡಿಯಾದಲ್ಲಿ ಕೆಲ ಕಿಡಿಗೇಡಿಗಳು ನಿಂದಿಸುತ್ತಿದ್ದಾರೆ. ಈ ಸಂಬಂಧ ಅಪ್ಪು ಅಭಿಮಾನಿಗಳು ಆಗಾಗ ರೊಚ್ಚಿಗೆದ್ದಿದ್ದು ಕೂಡ ಇದೆ. ಈಗ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ನಿಂದಿಸಿದ ಬೆನ್ನಲ್ಲೇ ಗೃಹಮಂತ್ರಿಗೆ ಮನವಿ ಪತ್ರ ನೀಡಿ, ಕಿಡಿಗೇಡಿಯನ್ನು ಬಂಧಿಸಬೇಕೆಂದು ಒತ್ತಾಯ ಮಾಡಲಿದ್ದಾರೆ.


Click it and Unblock the Notifications











