ಶ್ರೀ ರವಿಶಂಕರ್ ಗುರೂಜಿ ಭೇಟಿ ಮಾಡಿದ ಪುನೀತ್-ಯುವರಾಜ್ ಕುಮಾರ್
ಕನ್ನಡ ನಟ ಪುನೀತ್ ರಾಜ್ ಕುಮಾರ್ ಇಂದು ಆಧ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿದ್ದ ಅಪ್ಪುಗೆ ಯುವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಪುನೀತ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಪುತ್ರ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯುವರತ್ನ ಸಿನಿಮಾ ಮುಗಿಸಿರುವ ಪವರ್ ಸ್ಟಾರ್ ಈಗ ಜೇಮ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಮೊದಲ ಹಂತದ ಶೂಟಿಂಗ್ ಮುಗಿಸಿದ್ದ ಅಪ್ಪು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ.

ಯುವರಾಜ್ ಕುಮಾರ್ ತಮ್ಮ ಚೊಚ್ಚಲ ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಯುವ ರಣಧೀರ ಕಂಠೀರವ ಎಂಬ ಐತಿಹಾಸಿಕ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಯುವ ಭರ್ಜರಿ ಸಿದ್ಧತೆ ನಡೆಸಿದ್ದಾರೆ.
ಇತ್ತೀಚಿಗಷ್ಟೆ ಯುವ ರಣಧೀರ ಕಂಠೀರವ ಚಿತ್ರದ ಫಸ್ಟ್ ಲುಕ್ ಟ್ರೈಲರ್ ಬಿಡುಗಡೆಯಾಗಿದ್ದು, ಮೆಗಾಸ್ಟಾರ್ ಚಿರಂಜೀವಿ, ತೆಲುಗು ನಟ ಬಾಲಕೃಷ್ಣ ಸೇರಿದಂತೆ ಹಲವರು ಖ್ಯಾತ ನಟ-ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Click it and Unblock the Notifications











