For Quick Alerts
  ALLOW NOTIFICATIONS  
  For Daily Alerts

  ಶ್ರೀ ರವಿಶಂಕರ್ ಗುರೂಜಿ ಭೇಟಿ ಮಾಡಿದ ಪುನೀತ್-ಯುವರಾಜ್ ಕುಮಾರ್

  |

  ಕನ್ನಡ ನಟ ಪುನೀತ್ ರಾಜ್ ಕುಮಾರ್ ಇಂದು ಆಧ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

  ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿದ್ದ ಅಪ್ಪುಗೆ ಯುವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಪುನೀತ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಪುತ್ರ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಹೊಸಬರ 'ಕ್ಷಿಪ್ರ' ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬೆಂಬಲಹೊಸಬರ 'ಕ್ಷಿಪ್ರ' ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬೆಂಬಲ

  ಯುವರತ್ನ ಸಿನಿಮಾ ಮುಗಿಸಿರುವ ಪವರ್ ಸ್ಟಾರ್ ಈಗ ಜೇಮ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಮೊದಲ ಹಂತದ ಶೂಟಿಂಗ್ ಮುಗಿಸಿದ್ದ ಅಪ್ಪು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ.

  Puneeth Rajkumar Has Meet Sri Ravishankar Guruji

  ಯುವರಾಜ್ ಕುಮಾರ್ ತಮ್ಮ ಚೊಚ್ಚಲ ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಯುವ ರಣಧೀರ ಕಂಠೀರವ ಎಂಬ ಐತಿಹಾಸಿಕ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಯುವ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

  'ಪವರ್ ಆಫ್ ಯೂತ್ ಚಾಲೆಂಜ್' ಆರಂಭಿಸಿದ ಯುವರತ್ನ'ಪವರ್ ಆಫ್ ಯೂತ್ ಚಾಲೆಂಜ್' ಆರಂಭಿಸಿದ ಯುವರತ್ನ

  ಇತ್ತೀಚಿಗಷ್ಟೆ ಯುವ ರಣಧೀರ ಕಂಠೀರವ ಚಿತ್ರದ ಫಸ್ಟ್ ಲುಕ್ ಟ್ರೈಲರ್ ಬಿಡುಗಡೆಯಾಗಿದ್ದು, ಮೆಗಾಸ್ಟಾರ್ ಚಿರಂಜೀವಿ, ತೆಲುಗು ನಟ ಬಾಲಕೃಷ್ಣ ಸೇರಿದಂತೆ ಹಲವರು ಖ್ಯಾತ ನಟ-ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  English summary
  Kannada actor Puneeth Rajkumar and Yuva rajkumar has meet Sri Ravishankar Guruji.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X