twitter
    For Quick Alerts
    ALLOW NOTIFICATIONS  
    For Daily Alerts

    ಚಿತ್ರಮಂದಿರಕ್ಕೆ ಮಾತ್ರ ನಿರ್ಬಂಧ ಏಕೆ? ಅಖಾಡಕ್ಕಿಳಿದ ಪುನೀತ್ ರಾಜ್ ಕುಮಾರ್

    |

    ಚಿತ್ರಮಂದಿರಗಳ ಮೇಲಿನ ಶೇಕಡಾ 50 ರಷ್ಟು ನಿರ್ಬಂಧ ಮುಂದುವರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ಯಾಂಡಲ್‌ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ರಾಜ್ಯ ಸರ್ಕಾರ ಒಪ್ಪಿಗೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ.

    ಧ್ರುವ ಸರ್ಜಾ, ದುನಿಯಾ ವಿಜಯ್, ನಿರ್ದೇಶಕ ಪ್ರಶಾಂತ್ ನೀಲ್, ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.

     ಚಿತ್ರಮಂದಿರಕ್ಕೆ ಮಾತ್ರ ಯಾಕೆ ಕಟ್ಟೆಚ್ಚರ? ಸರ್ಕಾರದ ವಿರುದ್ಧ ಸ್ಯಾಂಡಲ್‌ವುಡ್ ಅಸಮಾಧಾನ! ಚಿತ್ರಮಂದಿರಕ್ಕೆ ಮಾತ್ರ ಯಾಕೆ ಕಟ್ಟೆಚ್ಚರ? ಸರ್ಕಾರದ ವಿರುದ್ಧ ಸ್ಯಾಂಡಲ್‌ವುಡ್ ಅಸಮಾಧಾನ!

    ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಟ್ವಿಟ್ಟರ್‌ನಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ''ಖಾಸಗಿ ಕಾರ್ಯಕ್ರಮಗಳು, ಪೂಜಾ ಸ್ಥಳಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ಸ್ಥಳಗಳು ಹೀಗೆ ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿಸಿದಾಗ, ಚಿತ್ರಮಂದಿರಗಳು ಮಾತ್ರ ಏಕೆ ಮಾಡಬಾರದು!?'' ಎಂದಿದ್ದಾರೆ.

    Puneeth Rajkumar Questions Karnataka Govt Stand on 50% Capacity in Theatres

    ಪುನೀತ್ ರಾಜ್ ಕುಮಾರ್ ಟ್ವೀಟ್‌ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    Puneeth Rajkumar Questions Karnataka Govt Stand on 50% Capacity in Theatres

    ಮಾರ್ಕೆಟ್‌ನಲ್ಲಿ ಗಿಜಿ ಗಿಜಿ, ಬಸ್‌ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ನಿರ್ಬಂಧ ಏಕೆ?ಮಾರ್ಕೆಟ್‌ನಲ್ಲಿ ಗಿಜಿ ಗಿಜಿ, ಬಸ್‌ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ನಿರ್ಬಂಧ ಏಕೆ?

    ನಟ ರಕ್ಷಿತ್ ಶೆಟ್ಟಿ ಸಹ ಈ ಕುರಿತು ಟ್ವೀಟ್ ಮಾಡಿ ''ಎಲ್ಲ ಸಾರ್ವಜನಿಕ ಸ್ಥಳಗಳು ಜನರಿಂದ ವ್ಯವಹರಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮತ್ತೊಮ್ಮೆ ಚಿತ್ರಮಂದಿರವನ್ನು 50% ಕ್ಕೆ ಸೀಮಿತಗೊಳಿಸಿದೆ. ಏಕೆ? ಸಿನಿಮಾ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!'' ಎಂದು ಅಸಮಾಧಾನ ತೋರಿದ್ದಾರೆ.

    Recommended Video

    ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಖಿಲಾ ಪಜಿಮಣ್ಣು | Akhila Pajimannu

    English summary
    Kannada actor Puneeth rajkumar questions karnataka govt stand on 50% capacity in film theatres.
    Wednesday, February 3, 2021, 13:42
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X