Don't Miss!
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- News
Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದಿವಂಗತ ಪುತ್ರನ ಫೋಟೋ ಜೊತೆ 'ಯುವರತ್ನ' ಚಿತ್ರ ವೀಕ್ಷಿಸಿದ ಕುಟುಂಬ ನೋಡಿ ಮನಸ್ಸು ಭಾರವಾಯಿತು: ಪುನೀತ್
ಮೃತಪಟ್ಟ ಮಗನ ಫೊಟೋ ಇಟ್ಟುಕೊಂಡು ಪೋಷಕರು 'ಯುವರತ್ನ' ಸಿನಿಮಾ ನೋಡಿದ ಭಾವುಕ ಘಟನೆ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ದೃಶ್ಯ ನೋಡಿ ಮನಸ್ಸು ತುಂಬಾ ಭಾರವಾಯಿತು ಎಂದು ಅಪ್ಪು ಟ್ವೀಟ್ ಮಾಡಿದ್ದಾರೆ.
Recommended Video
ಮೈಸೂರಿನ ಡಿ ಆರ್ ಸಿ ಮಲ್ಟಿಫ್ಲೆಕ್ಸ್‌ನಲ್ಲಿ ಪೋಷಕರು ಮೃತ ಮಗನ ಭಾವಚಿತ್ರದೊಂದಿಗೆ ಸಿನಿಮಾ ನೋಡಿದ ಭಾವುಕ ಘಟನೆ ನಡೆದಿದೆ. ಮೈಸೂರಿನ ನಿವಾಸಿ ಮುರಳಿಧರ್ ಎಂಬುವವರ ಪುತ್ರ ಹರಿಕೃಷ್ಣನ್ ಕಳೆದ ಮೂರು ತಿಂಗಳ ಹಿಂದಷ್ಟೇ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ.
ಮೃತಪಟ್ಟ
ಮಗನ
ಫೋಟೋ
ಇಟ್ಟುಕೊಂಡು
'ಯುವರತ್ನ'
ಸಿನಿಮಾ
ವೀಕ್ಷಿಸಿದ
ಪೋಷಕರು
ಪುಟ್ಟ ಹುಡುಗ ಹರಿಕೃಷ್ಣನ್ ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿ. ಅಷ್ಟೇ ಅಲ್ಲದೆ, ಆತ ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೋಟೋದೊಂದಿಗೆ 'ಯುವರತ್ನ' ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಜತೆಗೆ ತಮ್ಮಿಂದ ದೂರವಾಗಿರೋ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು, ಅಪ್ಪ-ಅಮ್ಮ, ಹಿರಿಯ ಮಗನ ಜೊತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ಪುನೀತ್ ಟ್ವೀಟ್ ಮಾಡಿದ್ದು, 'ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿವಂಗತ ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು. ಬಾಲಕ ಹರಿಕೃಷ್ಣನ್ ಆತ್ಮಕ್ಕೆ ಶಾಂತಿ ಸಿಗಲಿ' ಎಂದಿದ್ದಾರೆ.

ಯುವರತ್ನ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಸಿನಿಮಾ ಸಕ್ಸಸ್ ಆಗುತ್ತಿದ್ದಂತೆ ಪವರ್ ಸ್ಟಾರ್ ಯುವರತ್ನ ತಂಡದ ಜೊತೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ನವರಸನಾಯಕ ಜಗ್ಗೇಶ್ ಕೂಡ ಯುವರತ್ನ ತಂಡಕ್ಕೆ ಸಾಥ್ ನೀಡಿದ್ದಾರೆ.