15 ದೇಶಗಳಲ್ಲಿ ರಿಲೀಸ್‌ ಆಗುತ್ತಿದೆ ಪುನೀತ್ ಅಭಿನಯದ ಜೇಮ್ಸ್ ಸಿನಿಮಾ

ಪುನೀತ್ ರಾಜ್‌ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಪುನೀತ್ ಅಭಿನಯದ ಕೊನೆ ಸಿನಿಮಾ ಇದಾಗಿದ್ದು, ಈ ಚಿತ್ರವನ್ನು ಬಹಳ ಅದ್ಧೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಬಹಳ ಪ್ರಯತ್ನ ಕೂಡ ಮಾಡುತ್ತಿದ್ದಾರೆ. ಅಭಿಮಾನಿಗಳಂತೂ ಈ ಚಿತ್ರವನ್ನು ಹಿಂದೆ ಯಾರು ಮಾಡಿರಬಾರದು, ಮುಂದೆಯೂ ಯಾರು ಮಾಡಲು ಸಾಧ್ಯವಾಗಬಾರದು ಹಂಗೆ ರಿಲೀಸ್ ಮಾಡಲು ಅದ್ಧುರಿಯಾಗಿ ತಯಾರಿ ನಡೆಸುತ್ತಿದ್ದಾರೆ.

ಇದೀಗ ಜೇಮ್ಸ್ ಚಿತ್ರದ ಬಗ್ಗೆ ಮತ್ತೊಂದು ಬಿಗ್ ನ್ಯೂಸ್ ಹೊರಬಂದಿದೆ. ದಿನಕ್ಕೊಂದರಂತೆ ಜೇಮ್ಸ್ ಸಿನಿಮಾದ ಬಗ್ಗೆ ಅಪ್‌ಡೇಟ್ಸ್‌ಗಳು ಬರುತ್ತಲೇ ಇದೆ. ಅದರಂತೆ ಜೇಮ್ಸ್ ರಿಲೀಸ್‌ ಬಗ್ಗೆ ಬ್ರೇಕಿಂಗ್ ನ್ಯೂಸ್ ಒಂದು ಸಿಕ್ಕಿದ್ದು, ಅಪ್ಪು ಅಭಿನಯದ ಈ ಜೇಮ್ಸ್‌ ಸಿನಿಮಾವನ್ನು ಒಟ್ಟು 15 ದೇಶಗಳಲ್ಲಿ ರಿಲೀಸ್‌ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಈ ಮೂಲಕ ಪುನೀತ್ ಕೊನೆ ಸಿನಿಮಾವನ್ನು ಪ್ರಪಂಚದ ಮೂಲೆ ಮೂಲೆಗೂ ತಲುಪಿಸಲು ಪ್ರಯತ್ನ ಮಾಡುತ್ತಿದ್ದೆ ಜೇಮ್ಸ್ ತಂಡ.

ಜೇಮ್ಸ್ ಅಬ್ಬರ ದೇಶ ವಿದೇಶದಲ್ಲಿ ಶುರುವಾಗಿದ್ದು, ಅಪ್ಪು ಕೊನೆಯ ಸಿನಿಮಾವನ್ನು ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ಅಪ್ಪು ಹುಟ್ಟಿದ ದಿನ ಮಾರ್ಚ್ 17 ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲದೆ ಕನ್ನಡಿಗರಿಗೆ ಚಿತ್ರತಂಡ ಮತ್ತೊಂದು ಖುಷಿ ವಿಚಾರವನ್ನು ಕೊಟ್ಟಿದೆ. ಈ ಸಿನಿಮಾ ಜರ್ಮನಿ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ, ಪೋಲ್ಯಾಂಡ್, ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ಜೇಮ್ಸ್ ರಿಲೀಸ್ ಆಗ್ತಿದೆ. ಈ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಸುದ್ದಿ ತಿಳಿದು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

Puneeth Rajkumar’s Last Film James Big Update

ಜೇಮ್ಸ್ ಐದು ಭಾಷೆಗೆ ಡಬ್ ಆಗಿದೆ. ಕನ್ನಡ ಪ್ರಮುಖ ಭಾಷೆಯಾಗಿದ್ದರೂ, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್ ಆಗಿದೆ. ಆದರೆ, ಮಾರ್ಚ್ 17ಕ್ಕೆ ಏಕಕಾಲಕ್ಕೆ ಎಲ್ಲಾ ಭಾಷೆಯಲ್ಲೂ ಪುನೀತ್ ರಾಜ್‌ಕುಮಾರ್ ಸಿನಿಮಾ ಬಿಡುಗಡೆಯಾಗುತ್ತೆ. ಜೇಮ್ಸ್‌ ರಿಲೀಸ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಚಿತ್ರತಂಡ ಐದು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

Puneeth Rajkumar’s Last Film James Big Update

ಕಳೆದ ವಾರ ಜೇಮ್ಸ್‌ನಲ್ಲಿ ಅಪ್ಪು ಲುಕ್‍ಗಳ ಫೋಟೋಗಳನ್ನು ರಿಲೀಸ್ ಮಾಡಿದೆ ಚಿತ್ರತಂಡ. ಆ ಫೋಟೋದಲ್ಲಿ ಅಪ್ಪು ಸೈನಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಹಾಡುಗಳ ಚಿತ್ರೀಕರಣದ ಫೋಟೋ ಮತ್ತು ಇತರ ಸನ್ನಿವೇಶದ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ಜೇಮ್ಸ್ ರಿಲೀಸ್ ಅಭಿಮಾನಿಗಳು ಕೂಡ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್ ಮೂಲಕ ವಿರೇಶ್ ಚಿತ್ರಮಂದಿರ ಹಾಗೂ ಅಪ್ಪು ಸಮಾಧಿ ಮೇಲೆ ಪುಷ್ಪಾಂಜಲಿ. ಥಿಯೇಟರ್ ಮುಂದೆ 30 ಸಿನಿಮಾದ ಅಪ್ಪು ಕಟ್‌ಔಟ್‌ ಸೇರಿದಂತೆ ರಾಜ್ಯಾದ್ಯಂತ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ.

More from Filmibeat

English summary
Puneeth Rajkumar acted last film going to release in 15 countries on March 17th
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X