ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಬರ್ತಿದೆ 'ಸೋಲ್ ಆಫ್ ಯುವರತ್ನ'

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಭಾರಿ ಕುತೂಹಲ ಮೂಡಿಸಿರುವ ಯುವರತ್ನ ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲೂ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ.

ಈಗಾಗಲೇ ಚಿತ್ರದ ಪ್ರಮೋಷನ್ ಕೆಲಸಗಳು ಪ್ರಾರಂಭವಾಗಿದ್ದು ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಸದ್ಯ ಚಿತ್ರದಿಂದ ಎರಡು ಹಾಡುಗಳು ರಿಲೀಸ್ ಆಗಿದ್ದು, ಅಭಿಮಾನಿಗಳ ನಿದ್ದೆ ಗೆಡಿಸಿದೆ. ಇದೀಗ ಚಿತ್ರದ ಮತ್ತೊಂದು ಹಾಡು ರಿಲೀಸ್ ಗೆ ರೆಡಿಯಾಗಿದೆ.

ಪಾಠಶಾಲಾ ಹೆಸರಿನ ಹಾಡು ಇದಾಗಿದೆ. ನಿರೀಕ್ಷೆಯ ಹಾಡು ಫೆಬ್ರವರಿ 21ರಂದು ತೆರೆಗೆ ಬರುತ್ತಿದೆ. ಸೋಲ್ ಆಫ್ ಯುವರತ್ನ ಹಾಡು ಫೆಬ್ರವರಿ 21 ಸಂಜೆ 4.30ಕ್ಕೆ ರಿಲೀಸ್ ಆಗುತ್ತಿದೆ. ಚಿತ್ರದಿಂದ ಬರ್ತಿರುವ 3ನೇ ಹಾಡು ಇದಾಗಿದ್ದು, ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

Puneeth Rajkumars yuvarathnaa movie 3rd song will release on February 21st

ಯುವರತ್ನ ಸಂತೋಷ್ ಆನಂದ್ ರಾಮ್ ಮತ್ತು ಪವರ್ ಸ್ಟಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಎರಡನೇ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಪುನೀತ್ ಗೆ ನಾಯಕಿಯಾಗಿ ಸಯೇಶಾ ಸೈಗಲ್ ಕಾಣಿಸಿಕೊಂಡಿದ್ದಾರೆ. ಸಯೇಶಾ ಅವರಿಗೆ ಇದು ಮೊದಲ ಕನ್ನಡ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ.

ಇನ್ನು ಚಿತ್ರದಲ್ಲಿ ಸೋನು ಗೌಡ, ರಾಧಿಕಾ ಶರತ್ ಕುಮಾರ್ ಕಾವ್ಯ ಶೆಟ್ಟಿ, ಧನಂಜಯ್, ದಿಗಂತ್, ಮತ್ತು ಪ್ರಕಾಶ್ ರೈ ಸೇರಿದಂತೆ ದೊಡ್ಡ ತಾರಬಳಗವೇ ಇದೆ.

More from Filmibeat

English summary
Power star Puneeth Rajkumar starrer yuvarathnaa movie 3rd song will release on February 21st.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X