ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ 'ಯುವರತ್ನ' ಪುನೀತ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಯುವರತ್ನ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಲಾಕ್ ಡೌನ್ ಬಳಿಕ ಕೊನೆಯ ಹಂತದ ಚಿತ್ರೀಕರಣ ಮುಗಿಸಿರುವ ಯುವರತ್ನ ತಂಡ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.

ಹೌದು, ಅಪ್ಪು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಯುವರತ್ನ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡುತ್ತಿರುವುದಾಗಿ ನಿರ್ದೇಶಕ ಸಂತೋಷ ಆನಂದ್ ರಾಮ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿರುವ ಸಂತೋಷ ಆನಂದ್ ರಾಮ್ ಯುವರತ್ನ ಸಿನಿಮಾದ ಹಾಡನ್ನು ಇದೇ ತಿಂಗಳು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಆದರೆ ಯಾವತ್ತು ಬಿಡುಗಡೆ ಮಾಡುತ್ತಾರೆ ಎನ್ನುವುದನ್ನು ಮಾಹಿತಿ ನೀಡಿಲ್ಲ.

ದೀಪಾವಳಿ ಹಬ್ಬದ ದಿನ ಸಂತಸದ ಸುದ್ದಿ ಕೇಳಿ ಅಪ್ಪು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಹಾಡು ರಿಲೀಸ್ ಮಾಡುವಂತೆ ಅಭಿಮಾನಿಗಳು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಮಾಡಿದ್ದರು. ಸದ್ಯದಲ್ಲೇ ರಿಲೀಸ್ ಮಾಡುತ್ತೇವೆ ಎನ್ನುತ್ತಲೇ ಇದ್ದ ಸಿನಿಮಾತಂಡ ಕೊನೆಗೂ ಸರ್ಪ್ರೈಸ್ ನೀಡಿದೆ.

Puneeth Rajkumar Starrer Yuvarathnaa Movie First Sinlge Song To Be Release On This Month

ಇತ್ತೀಚಿಗಷ್ಟೆ ಅಂದರೆ ಲಾಕ್ ಡೌನ್ ಬಳಿಕ ಯುವರತ್ನ ಸಿನಿಮಾದ ಹೈ ವೋಲ್ಟೇಜ್ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಾಡಿನಲ್ಲಿ ಪುನೀತ್ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ರಿಲೀಸ್ ಆಗುತ್ತಿರುವ ಹಾಡು ಇದೆನಾ ಎನ್ನುವುದು ಅಭಿಮಾನಿಗಳ ಕುತೂಹಲ. ಅದೇನೆ ಇರಲಿ ಯುವರತ್ನ ಸಿನಿಮಾದಿಂದ ಅಪ್ ಡೇಟ್ ಸಿಕ್ಕಿರುವ ಖುಷಿಯಲ್ಲಿ ದೀಪಾವಳಿ ಹಬ್ಬವನ್ನು ಮತ್ತಷ್ಟು ಸಂಭ್ರಮಿಸಿದ್ದಾರೆ.

Recommended Video

ಜೇಮ್ಸ್ ಚಿತ್ರದಲ್ಲಿ ಪುನೀತ್ ಎದುರು ಅಬ್ಬರಿಸಲಿದ್ದಾರೆ ಬಾಲಿವುಡ್ ನಟ | James | Puneeth Rajkumar

More from Filmibeat

English summary
Power star Puneeth Rajkumar starrer Yuvarathnaa movie first sinlge song to be release on this Month.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X