For Quick Alerts
  ALLOW NOTIFICATIONS  
  For Daily Alerts

  ಅನಂತ್ ನಾಗ್‌ಗೆ ಪದ್ಮ ಪ್ರಶಸ್ತಿ ಕೊಡಬೇಕು: ಪುನೀತ್ ಬೆಂಬಲ

  |

  ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂಬ ಅಭಿಯಾನಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೈ ಜೋಡಿಸಿದ್ದಾರೆ. ''ನಾನು ಅನಂತ್ ನಾಗ್ ಅವರ ದೊಡ್ಡ ಅಭಿಮಾನಿ, ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ'' ಎಂದು ಟ್ವೀಟ್ ಮಾಡಿದ್ದಾರೆ.

  ಭಾರತದಲ್ಲಿ ನೀಡಲಾಗುವ ಅತ್ಯಂತ ಗೌರವವಾನ್ವಿತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಕೇಂದ್ರ ಸರ್ಕಾರ 'ಪೀಪಲ್ಸ್ ಪದ್ಮ' ಹೆಸರಿನಡಿಯಲ್ಲಿ ಕರೆ ನೀಡಿದೆ. ಈ ಸಾಲಿನ ಪದ್ಮ ಪ್ರಶಸ್ತಿಗಾಗಿ ಕರ್ನಾಟಕದಿಂದ ಹಿರಿಯ ನಟ ಅನಂತ್ ನಾಗ್ ಹೆಚ್ಚು ಚರ್ಚೆಯಲ್ಲಿದೆ.

  'ಅನಂತ್ ನಾಗ್‌ಗೆ ಪದ್ಮಪ್ರಶಸ್ತಿ ನೀಡಿ' ಅಭಿಯಾನಕ್ಕೆ ರಕ್ಷಿತ್ ಮತ್ತು ರಿಷಬ್ ಶೆಟ್ಟಿ ಸಾಥ್'ಅನಂತ್ ನಾಗ್‌ಗೆ ಪದ್ಮಪ್ರಶಸ್ತಿ ನೀಡಿ' ಅಭಿಯಾನಕ್ಕೆ ರಕ್ಷಿತ್ ಮತ್ತು ರಿಷಬ್ ಶೆಟ್ಟಿ ಸಾಥ್

  ಕನ್ನಡ ನಟ ರಕ್ಷಿತ್ ಶೆಟ್ಟಿ, ನಟ-ನಿರ್ದೇಶಕ ರಿಷಭ್ ಶೆಟ್ಟಿ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ, ಪುನೀತ್ ರಾಜ್ ಕುಮಾರ್ ಜೊತೆಯಾಗಿದ್ದಾರೆ. ''ನನ್ನ ನೆಚ್ಚಿನ ನಟರಲ್ಲಿ ಒಬ್ಬರಾದ ಶ್ರೀಯುತ ಅನಂತನಾಗ್ ಸರ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ನಮ್ಮೆಲ್ಲರ ಆಶೆ. ನಾನು ಅವರ ದೊಡ್ಡ ಅಭಿಮಾನಿ. ಸಿನಿಮಾ ರಂಗಕ್ಕೆ ಅನಂತನಾಗ್ ಸರ್ ಅವರ ಕೊಡುಗೆ ಅಪಾರ'' ಎಂದು ಪುನೀತ್ ಹೇಳಿದ್ದಾರೆ.

  ಸಿನಿಮಾ ತಾರೆಯರ ಜೊತೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸಹ ಅನಂತ್ ನಾಗ್ ಅವರ ಹೆಸರನ್ನು 'ಪೀಪಲ್ಸ್ ಪದ್ಮ' ಅಡಿಯಲ್ಲಿ ಬೆಂಬಲಿಸುತ್ತಿದ್ದಾರೆ.

  ಭಾರತದ ಎವರ್‌ಗ್ರೀನ್ ಕಲಾವಿದ ಅನಂತ್ ನಾಗ್

  ಕನ್ನಡ ಚಿತ್ರರಂಗ ಪ್ರತಿಭಾನ್ವಿತ ಕಲಾವಿದ ಅನಂತ ನಾಗ್. ತಮ್ಮ ವಿಶಿಷ್ಟ ಅಭಿನಯ ಹಾಗೂ ವ್ಯಕ್ತಿತ್ವದ ಮೂಲಕ ಜಂಟಲ್‌ಮ್ಯಾನ್ ಎನಿಸಿಕೊಂಡಿರುವ ನಟ.

  Puneeth Rajkumar Support Padma Award for Ananth Nag Twitter Campaign
  ದೊಡ್ಡವರ ಮಾತು ಕಥೆ, ಸತ್ಯ ಯಾವ್ದು..? ಸುಳ್ಳು ಯಾವ್ದು..? | Indrajit Lankesh vs Darshan | Filmibeat Kannada

  ಸುಮಾರು ನಾಲ್ಕೂವರೆ ದಶಕದಿಂದ ಭಾರತೀಯ ಸಿನಿಮಾ ಲೋಕದಲ್ಲಿ ತೊಡಗಿಕೊಂಡಿರುವ ಅನಂತ್ ನಾಗ್ 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ ಭಾಷೆಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

  English summary
  Kannada Powerstar Puneeth Rajkumar support Padma Award for Ananth Nag twitter campaign.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X