ನಟ ಪುನೀತ್ ರಾಜ್‌ಕುಮಾರ್‌ಗೆ ಬಸವಶ್ರೀ ಪ್ರಶಸ್ತಿ ಘೋಷಣೆ
ಕರ್ನಾಟಕ ಚಲನಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಚಿತ್ರರಂಗ ಸೇರಿದಂತೆ ರಾಜ್ಯದಲ್ಲೇ ಶೋಕಸಾಗರದಲ್ಲಿತ್ತು. ಇದೀಗ ಚಿತ್ರದುರ್ಗದ ಮುರುಘಾ ಮಠದಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
2022ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನ ಪುನೀತ್ ರಾಜ್‌ಕುಮಾರ್ ಅವರಿಗೆ ನೀಡುವುದಾಗಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಮುಂದಿನ ವರ್ಷ 2022ರ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎನ್ನಲಾಗಿದೆ.

ಚಿತ್ರದುರ್ಗದ ಮುರುಘಾಮಠದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಬಸವಶ್ರೀ ಪ್ರಶಸ್ತಿಯ ಮೊತ್ತ ಐದು ಲಕ್ಷ ರೂ ನಗದು ಹಾಗೂ ಸ್ಮರಣಿಕೆ ನೀಡಿ ಒಳಗೊಂಡಿದೆ. ಈ ಕಾರ್ಯಕ್ರಮಕ್ಕೆ ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಮುರುಘಾ ಮಠದ ಶಿವಮೂರ್ತಿ ಶರಣರು ತಿಳಿಸಿದ್ದಾರೆ.
ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪದ್ಮಶ್ರೀ ಗೌರವ ನೀಡಬೇಕೆಂಬ ಒತ್ತಾಯವೂ ಕೇಳಿ ಬರುತ್ತಿದೆ.
''ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ'' ಎಂದು ಸಿದ್ದರಾಮಯ್ಯ ಇಂದು ಟ್ವೀಟ್ ಮಾಡಿದ್ದರು, ಸಿದ್ದರಾಮಯ್ಯ, ಟ್ವೀಟ್‌ಗೆ ಹಲವರು ಸಮ್ಮತಿ ಸೂಚಿಸಿದ್ದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಸಹ ಒತ್ತಾಯ ಕೇಳಿಬಂತಾದರೂ, ಮರಣೋತ್ತರವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿಯಮಾವಳಿಗಳು ಹಾಗೂ ಕೋರ್ಟ್ ಆದೇಶಗಳು ಅಡ್ಡಿ ಬರುತ್ತದೆಯೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದರು.


Click it and Unblock the Notifications











