ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬ: ಶುಭಕೋರಿದ ಪುನೀತ್ ರಾಜ್ ಕುಮಾರ್
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 73ನೇ ವಸಂತಕ್ಕೆ ಕಾಲಿಟ್ಟಿರುವ ವೀರೇಂದ್ರ ಹೆಗ್ಗಡೆ ಅವರು ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬಕ್ಕೆ ರಾಜ್ಯದ ಅನೇಕ ಗಣ್ಯರು ಶುಭಕೋರುತ್ತಿದ್ದಾರೆ. ರಾಜಕೀಯ ಮತ್ತು ಸಿನಿಮಾ ಗಣ್ಯರು ಹುಟ್ಟುಹಬ್ಬಕ್ಕೆ ವಿಶ್ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಸಹ ಶುಭಕೋರಿದ್ದಾರೆ. ಇದೀಗ ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಶ್ ಮಾಡಿದ್ದಾರೆ.
ವೀರೇಂದ್ರ ಹೆಗ್ಗಡೆ ಜೊತೆ ನಿಂತಿರುವ ಫೋಟೋ ಶೇರ್ ಮಾಡುವ ಮೂಲಕ ಪುನೀತ್ ಪೂಜ್ಯ ಧರ್ಮಾಧಿಕಾರಿಗಳಿಗೆ ಶುಭಾಶಯ ತಿಳಿಸಿದ್ದಾರೆ. 'ಪುಣ್ಯಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ ಡಿ. ವೀರೇಂದ್ರ ಹೆಗ್ಗಡೆ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಅಪ್ಪು ಟ್ವೀಟ್ ಮಾಡಿದ್ದಾರೆ.

ಅಂದಹಾಗೆ ಡಾ.ರಾಜ್ ಕುಮಾರ್ ಕುಟುಂಬ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಮೇಲೆ ಅಪಾರವಾದ ಭಕ್ತಿ, ನಂಬಿಕೆ. ಡಾ.ರಾಜ್ ಕಾಲದಿಂದನೂ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವೀರೇಂದ್ರ ಹೆಗಡೆ ಅವರನ್ನು ಭೇಟಿಯಾಗಿ ಬರುತ್ತಾರೆ. ಅದೇ ಉತ್ತಮ ಸಂಬಂಧವನ್ನು ಡಾ.ರಾಜ್ ಮಕ್ಕಳು ಸಹ ಮುಂದುವರೆಸಿಕೊಂಡು ಬಂದಿದ್ದಾರೆ. ಪವರ್ ಸ್ಟಾರ್ ಪುನೀತ್ ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುತ್ತಾರೆ.


Click it and Unblock the Notifications