ಪುನೀತ್ ರಾಜ್ ಕುಮಾರ್ 'ಯುವರತ್ನ' 3ಡಿ ಪ್ರಮೋಷನ್ ಪೋಸ್ಟರ್ ಹೇಗಿದೆ ನೋಡಿ
ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಸುಗ್ಗಿ ಪ್ರಾರಂಭವಾಗಿದೆ. ಲಾಕ್ ಡೌನ್ ಮುಗಿಯುತ್ತಿದ್ದಂತೆ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚಿಗಷ್ಟೆ ರಾಬರ್ಟ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಸ್ಯಾಂಡಲ್ ವುಡ್ ಇದರ ಬೆನ್ನಲೇ ಈಗ ಯುವರತ್ನ ಸಂಭ್ರಮಕ್ಕೆ ಸಜ್ಜಾಗಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಇನ್ನೇನು ಯುವರತ್ನನ ಆಗಮನಕ್ಕೆ 6 ದಿನಗಳು ಮಾತ್ರ ಬಾಕಿ ಇದ್ದು, ಚಿತ್ರದ ಪ್ರಮೋಷನ್ ಭರ್ಜರಿಯಾಗಿ ನಡೆಯುತ್ತಿದೆ.
ಅಪ್ಪು ಮತ್ತು ತಂಡ ರಾಜ್ಯದಾದ್ಯಂತ ಸಂಚಾರಮಾಡಿ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿ ಬಳಗನೋಡಿ ಥ್ರಿಲ್ ಆಗಿರುವ ಯುವರತ್ನ ಟೀಂ ಸಿನಿಮಾ ನೋಡುವಂತೆ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಯುವರತ್ನ ಪ್ರಮೋಷನ್ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ 3ಡಿ ಪ್ರಮೋಷನ್ ಕೂಡ ಪ್ರಾರಂಭ ಮಾಡಿದ್ದಾರೆ.
ಬೆಂಗಳೂರಿನ ಬಸ್ ಸ್ಟ್ಯಾಂಡ್ ಒಂದರಲ್ಲಿ ಯುವರತ್ನ 3ಡಿ ಪೋಸ್ಟರ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೊದಲ ಬಾರಿಗೆ ಈ ರೀತಿಯ ಸಿನಿಮಾ ಪೋಸ್ಟರ್ ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ. ಕನ್ನಡ ಸಿನಿಮಾಗಳು ಸಹ ಇಷ್ಟು ದೊಡ್ಡ ಮಟ್ಟದಲ್ಲಿ ಪ್ರಮೋಟ್ ಮಾಡುತ್ತಿರುವುದನ್ನು ನೋಡಿ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.

ಅಂದಹಾಗೆ ನಾನಾ ರೀತಿಯಲ್ಲಿ ಸಿನಿಮಾ ಪ್ರಮೋಷನ್ ಮಾಡಲಾಗುತ್ತೆ. ಕೆಲವರು ತುಂಬಾ ಕ್ರಿಯೇಟಿವ್ ಆಗಿ ಸಾಮಾಜಿಕ ಜಾಲತಾಣದ ಮೂಲಕವೇ ಅಭಿಮಾನಿಗಳನ್ನು ಸೆಳೆಯುವ ತಂತ್ರ ಮಾಡಿದ್ರೆ, ಇನ್ನು ಕೆಲವರು ಕೋಟಿ ಕೋಟಿ ಹಣ ಖರ್ಚು ಮಾಡುವ ಅದ್ದೂರಿ ಪ್ರಮೋಷನ್ ಮಾಡಿ ಅಭಿಮಾನಿಗಳನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ.

ಯುವರತ್ನ 3ಡಿ ಪೋಸ್ಟರ್ ನಲ್ಲಿ ಅಪ್ಪು ಪುಶ್ ಅಪ್ ಮಾಡುತ್ತಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಅಂದಹಾಗೆ ಬಹುನಿರೀಕ್ಷೆಯ ಯುವರತ್ನ ಸಿನಿಮಾ ಏಪ್ರಿಲ್ 1ಕ್ಕೆ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆಗೆಬರುತ್ತಿದೆ. ಚಿತ್ರದಲ್ಲಿ ಪವರ್ ಸ್ಟಾರ್ ಗೆ ನಾಯಕಿಯಾಗಿ ಸಯೇಶಾ ಸೈಗಲ್ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಯೇಶಾ ಕನ್ನಡದಲ್ಲಿ ನಟಿಸಿದ್ದು, ಕನ್ನಡ ಪ್ರೇಕ್ಷಕರು ಹೇಗೆ ಸ್ವಾಗತಿಸಲಿದ್ದಾರೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ.


Click it and Unblock the Notifications










