Breaking: ಪುನೀತ್ ರಾಜ್‌ಕುಮಾರ್‌ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ನಟ ಪುನೀತ್ ರಾಜ್‌ಕುಮಾರ್‌ಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುನೀತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಐಸಿಯು ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್ ಅವರು ವ್ಯಾಯಾಮ ಮಾಡುವ ಸಂದರ್ಭ ಲಘು ಹೃದಯಾಘಾತ ಆಗಿರುವ ಸಂಭವ ಇದೆ. ಅವರೀಗ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್ ನಿನ್ನೆ ರಾತ್ರಿಯಿಂದಲೂ ಅಸ್ವಸ್ಥರಾಗಿದ್ದರು, ಇಂದು ಬೆಳಿಗ್ಗೆಯೂ ಅಸ್ವಸ್ಥತೆ ಮುಂದುವರೆದ ಕಾರಣ ಅವರನ್ನು ಮೊದಲಿಗೆ ರಮಣರ್ಶಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಪರಿಶೀಲನೆ ಮಾಡಿದ ಬಳಿಕ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ಅವರನ್ನು ಐಸಿಯು ನಲ್ಲಿಟ್ಟು ತಪಾಸಣೆ ನಡೆಸಲಾಗುತ್ತಿದೆ.

Punith Rajkumar got a mild heart attack, admitted to Vikram Hospital

ವಿಕ್ರಂ ಆಸ್ಪತ್ರೆ ಕಡೆಗೆ ಪುನೀತ್ ರಾಜ್‌ಕುಮಾರ್ ಕುಟುಂಬಸ್ಥರು, ಶಿವರಾಜ್ ಕುಮಾರ್ ಪುತ್ರಿ ಇನ್ನಿತರರು ಈಗಾಗಲೇ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆ ಸುತ್ತಲೂ ಪೊಲೀಸ್ ಭದ್ರತೆ ಒದಗಿಸಲಾಗಿದೆ. ವಿಕ್ರಂ ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ಸೌಮೇಂದು ಮುಖರ್ಜಿ ಆಗಮಿಸಿದ್ದಾರೆ. ಆಸ್ಪತ್ರೆ ಬಳಿ ಪೊಲೀಸ್ ತುಕಡಿಯೊಂದನ್ನು ನಿಯೋಜಿಸಲಾಗಿದೆ.

ಚಿತ್ರರಂಗದ ಹಿರಿಯ ನಟರು ಆಸ್ಪತ್ರೆ ಕಡೆಗೆ ಬರುತ್ತಿದ್ದಾರೆ. ರವಿಚಂದ್ರನ್ ಸೇರಿದಂತೆ ಅನೇಕ ನಟರು ಆಸ್ಪತ್ರೆಗೆ ಬಂದಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ಬಂದಿದ್ದಾರೆ.

More from Filmibeat

English summary
Actor Puneeth Rajkumar had mild heart attack addmitted to Vikram Hospital.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X