'ಅವನೇ ಶ್ರೀಮನ್ನಾರಾಯಣ' ಬರುವಿಕೆಯ ದಿನಾಂಕ ತಿಳಿಸಿದ ಪುಷ್ಕರ್

Recommended Video

Avane Srimannarayana : ಬಿಡುಗಡೆ ದಿನಾಂಕ ಬಹಿರಂಗ ಪಡಿಸಿದ ಪುಷ್ಕರ | FILMIBEAT KANNADA

ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ 'ಅವನೇ ಶ್ರೀಮನ್ನಾರಾಯಣ' ಪ್ರಮುಖವಾದದ್ದು. ಈ ಸಿನಿಮಾದ ರಿಲೀಸ್ ಯಾವಾಗ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸುಳಿವು ನೀಡಿದ್ದಾರೆ.

''ಇನ್ 70 ದಿನಗಳೊಳಗೆ ಅವನು ಬಂದೆ ಬರ್ತಾನೆ'' ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬಿಡುಗಡೆಯ ದಿನಾಂಕದ ಬಗ್ಗೆ ಮಾತನಾಡಿದ್ದಾರೆ.

ನಿನ್ನೆ (ಸಪ್ಟೆಂಬರ್ 24) ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಟ್ವೀಟ್ ಮಾಡಿದ್ದು, 70 ದಿನಗಳೊಳಗೆ ಅಂದರೆ, ಸಿನಿಮಾ ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರ ಬಿಡುಗಡೆ ಆಗುವ ಸಾಧ್ಯತೆ ಇದೆ. ಶುಕ್ರವಾರದ ಲೆಕ್ಕಾಚಾರ ತೆಗೆದುಕೊಂಡರೆ, ನವೆಂಬರ್ 29ಕ್ಕೆ ಅಥವಾ ಡಿಸೆಂಬರ್ 6ಕ್ಕೆ ಬಿಡುಗಡೆ ಆಗಲಿದೆ.

Pushkara Mallikarjunaiah Tweets About Avane Srimannarayana Release Date

'ಕೆಜಿಎಫ್', 'ಕುರುಕ್ಷೇತ್ರ', 'ಪೈಲ್ವಾನ್' ನಂತರ ಪ್ಯಾನ್ ಇಂಡಿಯಾದಲ್ಲಿ ಬಿಡುಗಡೆ ಆಗುತ್ತಿರುವ ಕನ್ನಡ ಸಿನಿಮಾ ಇದಾಗಿದೆ. ದೊಡ್ಡ ಮಟ್ಟದಲ್ಲಿ ನಿರ್ಮಾಣ ಆದ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇದರ ಜೊತೆಗೆ, ಮೂರು ವರ್ಷಗಳ ನಂತರ ರಕ್ಷಿತ್ ಶೆಟ್ಟಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ರಕ್ಷಿತ್ ಶೆಟ್ಟಿ, ಶಾನ್ವಿ ಶ್ರೀವತ್ಸವ್, ಅಚ್ಚುತ್ ಕುಮಾರ್, ಪ್ರಮೋದ್ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದಾರೆ. ಚರಣ್ ರಾಜ್ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಚಿನ್ ರವಿ ಸಿನಿಮಾದ ನಿರ್ದೇಶಕರಾಗಿದ್ದಾರೆ.

More from Filmibeat

English summary
Producer Pushkara Mallikarjunaiah tweets about 'Avane Srimannarayana' movie release date.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X