»   » ನಾಗತಿಹಳ್ಳಿ ಚಂದ್ರಶೇಖರ್ ಗೆ ದೊರಕಿದ 'ಪುಟ್ಟಣ್ಣ ಕಣಗಾಲ್' ಪ್ರಶಸ್ತಿ.!

ನಾಗತಿಹಳ್ಳಿ ಚಂದ್ರಶೇಖರ್ ಗೆ ದೊರಕಿದ 'ಪುಟ್ಟಣ್ಣ ಕಣಗಾಲ್' ಪ್ರಶಸ್ತಿ.!

Posted By:
Subscribe to Filmibeat Kannada

ಚಿತ್ರ ಜೀವನದಲ್ಲಿ ಅನೇಕ ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ, 'ಅಮೇರಿಕ, ಅಮೇರಿಕ', 'ಹೂಮಳೆ', 'ಅಮೃತಧಾರೆ', 'ಮಾತಾಡ್ ಮಾತಾಡು ಮಲ್ಲಿಗೆ' ಸೇರಿದಂತೆ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹಿರಿಮೆಗೆ ಈಗ ಮತ್ತೊಂದು ಗರಿ ಲಭಿಸಿದೆ.

ರಾಜ್ಯ ಸರ್ಕಾರ ನೀಡುವ 2015ನೇ ಸಾಲಿನ ಪ್ರತಿಷ್ಟಿತ 'ಪುಟ್ಟಣ್ಣ ಕಣಗಾಲ್' ಪ್ರಶಸ್ತಿಗೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಭಾಜನರಾಗಿದ್ದಾರೆ. [ಕಣಗಾಲ್ ಪ್ರಶಸ್ತಿಗೆ ನೋ ಥ್ಯಾಂಕ್ಸ್ ಎಂದ ಕಾರ್ನಾಡ್]

ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಜೊತೆಗೆ 2015ನೇ ಸಾಲಿನ ಡಾ.ರಾಜ್ ಕುಮಾರ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಂದೆ ಓದಿ.....

ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇಲೆ....

ಕನ್ನಡ ಚಿತ್ರ ನಿರ್ದೇಶಕ ಎಸ್.ಕೆ.ಭಗವಾನ್ ರವರ ಅಧ್ಯಕ್ಷತೆಯಲ್ಲಿ 2015ನೇ ಸಾಲಿನ ಡಾ.ರಾಜ್ ಕುಮಾರ್ ಪ್ರಶಸ್ತಿ, ಡಾ.ವಿಷ್ಣುವರ್ಧನ್ ಪ್ರಶಸ್ತಿ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಗಳಿಗೆ ಅರ್ಹರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿರುವ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಮೂವರನ್ನು ಆಯ್ಕೆ ಮಾಡಿದೆ. [2015 ರಾಜ್ಯ ಪ್ರಶಸ್ತಿ; ವಿಜಯ್ ರಾಘವೇಂದ್ರ ಮತ್ತು ಮಾಲಾಶ್ರೀ 'ಬೆಸ್ಟ್'.!]

ಡಾ.ರಾಜ್ ಕುಮಾರ್ ಪ್ರಶಸ್ತಿ

ಕನ್ನಡ ಚಿತ್ರರಂಗದ ಹಿರಿಯ ನಟಿ ಹರಿಣಿ ಯವರು ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಡಾ.ವಿಷ್ಣುವರ್ಧನ್ ಪ್ರಶಸ್ತಿ

ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್-ನಾಗೇಂದ್ರ ಖ್ಯಾತಿ) ಭಾಜನರಾಗಿದ್ದಾರೆ.

ಪುಟ್ಟಣ್ಣ ಕಣಗಾಲ್ ಪ್ರಶಸ್ತಿ

ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೆಲೆಕ್ಟ್ ಆಗಿದ್ದಾರೆ.

ಪ್ರಶಸ್ತಿಯ ಮೊತ್ತ

ಮೂವರಿಗೂ ಎರಡು ಲಕ್ಷ ರೂಪಾಯಿ ನಗದು ಹಾಗೂ 50 ಗ್ರಾಂ ಚಿನ್ನದ ಪದಕ ಸಿಗಲಿದೆ.

English summary
Dr.Rajkumar Award, Dr.Vishnuvardhan Award and Puttanna Kanagal Award 2015 were announced today (July 29th) by Karnataka Government. Kannada Actress Harini, Music Director Rajan and Nagathihalli Chandrashekar are selected respectively.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada