ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ನಿಧನ!
ಕನ್ನಡ ಚಿತ್ರರಂಗದಲ್ಲಿ ಚಿತ್ರ ಬ್ರಹ್ಮ ಎಂದೆ ಖ್ಯಾತಿ ಪಡೆದವರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಪುಟ್ಟಣ್ಣ ಕಣಗಾಲ್ ನಂತರ ಅವರ ಕುಟುಂಬಸ್ಥರು ಅಷ್ಟಾಗಿ ಸಿನಿಮಾರಂಗದಲ್ಲಿ ಸಕ್ರಿಯವಾಗಿಲ್ಲ. ಅದರೆ ಪುಟ್ಟವರ ಮನೆಯ ಕೆಲವು ಸದಸ್ಯರು ಕಲಾಸೇವೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಅದರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ಕೂಡ ಒಬ್ಬರು.
ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್, ಸಾಹಿತ್ಯ ಲೋಕದಲ್ಲಿ ಹೆಸರು ಮಾಡಿವರು. ಅವರು ಹಲವು ವರ್ಷಗಳಿಂದ ಅಮೆರಿಕದಲ್ಲಿ ವಾಸವಿದ್ದರು. ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಕಣಗಾಲ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಪುರುಷೋತ್ತಮ ಕಣಗಾಲ್ ಅವರಿಗೆ 69 ವಯಸ್ಸಾಗಿತ್ತು. ಹೆಸರಾಂತ ಸಾಹಿತಿಯಾಗಿರುವ ಪುರುಷೋತ್ತಮ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣ ಪ್ರಭಾಕರ ಶಾಸ್ತ್ರಿ. ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತ ರಚನೆ ಮಾಡಿದ್ದಾರೆ.

ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು. ಪುರುಷೋತ್ತಮ ಅವರಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು. ತಮ್ಮ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಪುರುಷೋತ್ತಮ ಕಣಗಾಲ್. ಮಗಳ ಜೊತೆ ನೆಲೆಸಿದ್ದ ಪುರುಷೋತ್ತಮ ಕಣಗಾಲ್ ಅಂತ್ಯ ಸಂಸ್ಕಾರ ಅಮೆರಿಕದಲ್ಲಿಯೇ ಮಾಡಲು ಕುಟುಂಬ ವರ್ಗ ನಿರ್ಧರಿಸಿದೆ.


Click it and Unblock the Notifications











