ಮೈಸೂರು ದಸರಾ ಕ್ವಿಜ್ ಕಾರ್ಯಕ್ರಮಕ್ಕೆ ರಮೇಶ್ ಸಾರಥ್ಯ
ಮೈಸೂರು ದಸರಾ ಉತ್ಸವದಲ್ಲಿ ಮೊದಲ ಬಾರಿಗೆ ಕ್ವಿಜ್ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗಿದೆ. ಚಿತ್ರ ನಟ ರಮೇಶ್ ಅರವಿಂದ್ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ.
ಈ ಹಿಂದೆ ಕಿರುತೆರೆಯ 'ಕನ್ನಡದ ಕೋಟ್ಯಧಿಪತಿ' ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ಪ್ರಶ್ನೆ ಕೇಳುತ್ತಿದ್ದ ರಮೇಶ್ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಇಂದು (ಸಪ್ಟೆಂಬರ್ 27) ರಂದು ಈ ಕಾರ್ಯಕ್ರಮ ನಡೆದಿದೆ. ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿದೆ.
ದಸರಾ 2019; ಕೆಎಸ್ಆರ್‌ಟಿಸಿಯಿಂದ 2500 ವಿಶೇಷ ಬಸ್
ಬೆಳಗ್ಗೆ 9.45 ರಿಂದ ಮಧ್ಯಾಹ್ನ 3ರವರೆಗೆ ಕಾರ್ಯಕ್ರಮ ನಡೆದಿದೆ. ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದರು. 8ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ನೀಡಲಾಗಿತ್ತು. ರಮೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕ್ವಿಜ್ ಕಾರ್ಯಕ್ರಮದ ಬಗ್ಗೆ ವಿವರ ನೀಡಿದ್ದರು.

ಅಂದಹಾಗೆ ರಮೇಶ್ ಅರವಿಂದ್ ಸದ್ಯ 'ಭೈರಾದೇವಿ', 'ಶಿವಾಜಿ ಸುರತ್ಕಲ್' ಸಿನಿಮಾಗಳಲ್ಲಿ ನಟಿಸಿದ್ದಾರೆ. '100' ಸಿನಿಮಾವನ್ನು ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ತಮಿಳಿನ ರಿಮೇಕ್ ಆಗಿದೆ. ರಮೇಶ್ ನಿರ್ದೇಶನದ 'ಕ್ವೀನ್' ಚಿತ್ರ ಬಿಡುಗಡೆ ಆಗಬೇಕಿದೆ.


Click it and Unblock the Notifications











