For Quick Alerts
  ALLOW NOTIFICATIONS  
  For Daily Alerts

  'ಮಮ್ಮಿ' ನಿರ್ದೇಶಕರ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್?

  |

  ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಡಜನ್ ಗೂ ಅಧಿಕ ಸಿನಿಮಾಗಳಲ್ಲಿ ನಟಿಸುತ್ತಿರುವ ರಚಿತಾ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

  ಹೌದು, ನಟಿ ರಚಿತಾ ರಾಮ್ ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ನಿರ್ಮಾಣದಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಕಥೆ ಕೇಳಿರುವ ಡಿಂಪಲ್ ಕ್ವೀನ್ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದಾರೆ.

  ಓ ಓ ಓ ಪ್ರೇಮ ಕಾಶ್ಮೀರ...ಎನ್ನುತ್ತಿದ್ದಾರೆ ನಿರ್ದೇಶಕ ಪ್ರೇಮ್ಓ ಓ ಓ ಪ್ರೇಮ ಕಾಶ್ಮೀರ...ಎನ್ನುತ್ತಿದ್ದಾರೆ ನಿರ್ದೇಶಕ ಪ್ರೇಮ್

  ಅಂದ್ಹಾಗೆ ನಿರ್ದೇಶಕ ಲೋಹಿತ್ ಈಗಾಗಲೇ ಲೈಫ್ ಈಸ್ ಬ್ಯೂಟಿಫುಲ್ ಎನ್ನುವ ಸಿನಿಮಾ ಮಾಡುತ್ತಿದ್ದಾರೆ. ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದಾರೆ. ಲೋಹಿತ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರವನ್ನು ಅರುಣ್ ಕುಮಾರ್ ಮತ್ತು ಸಾಬು ಅಲೋಯಿಸಿಸ್ ನಿರ್ದೇಶನ ಮಾಡುತ್ತಿದ್ದಾರೆ.

  ಇದೇ ತಂಡ ಈಗ ರಚಿತಾ ರಾಮ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾ ಮುಗಿದ ಬಳಿಕ ಹೊಸ ಸಿನಿಮಾವನ್ನು ಪ್ರಾರಂಭ ಮಾಡಲಿದ್ದಾರೆ. ಸದ್ಯ ಸ್ಕ್ರಿಪ್ಟ್ ಕೆಲಸ ಮುಗಿಸಿರುವ ಸಿನಿಮಾತಂಡ ಉಳಿದ ತಾರಬಳಗದ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

  ಧ್ರುವ ಸರ್ಜಾ ಗಡ್ಡ, ಕೂದಲಿಗೆ ನಂದಕಿಶೋರ್ ಹಾಕಲಿದ್ದಾರೆ ಕತ್ತರಿ | Dubari | Nandakishore | Dhruva Sarja

  ಸರ್ವೈವಲ್ ಶೈಲಿಯ ಸಿನಿಮಾ ಇದಾಗಿದ್ದು, ಕನ್ನಡ ಸಿನಿಮಾರಂಗದಲ್ಲೇ ಈ ರೀತಿಯ ಸಿನಿಮಾ ಬಂದಿಲ್ಲ. ಹೊಸ ಶೈಲಿಯನ್ನು ಪರಿಚಯಿಸುತ್ತಿರುವುದಾಗಿ ನಿರ್ದೇಶಕ ಲೋಹಿತ್ ಹೇಳಿದ್ದಾರೆ. ಸದ್ಯದಲ್ಲೇ ಚಿತ್ರದ ನಾಯಕ ಯಾರು ಎನ್ನುವುದನ್ನು ಬಹಿರಂಗ ಪಡಿಸಲಿದ್ದಾರಂತೆ. ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ ಡಿಸೆಂಬರ್ ನಲ್ಲಿ ಸೆಟ್ಟೇರುವ ಸಾಧ್ಯತೆ ಇದೆ.

  English summary
  Actress Rachita Ram collaborates with lohith's life is beautiful team.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X